Ballari

ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ದೂರು ದಾಖಲು
ಪೌರತ್ವ ತಿದ್ದುಪಡಿ ಕಾಯಿದೆ ಬೆಂಬಲಿಸಿ ನಡೆದ ಪ್ರದರ್ಶನ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ನಗರದಲ್ಲಿ ದೂರು ದಾಖಲಾಗಿದೆ.

'ನೀವು ಹತ್ತು ಮಕ್ಕಳನ್ನು ಹೆತ್ತರೇ, ನಾವು ಒಬ್ಬೊಬ್ಬರು 50 ಮಕ್ಕಳನ್ನು ಹುಟ್ಟಿಸುತ್ತೇವೆ'
ನೀವು 20-30 ಮಕ್ಕಳನ್ನು ಹುಟ್ಟಿಸಿದರೇ ನಾವು ಒಬ್ಬೊಬ್ಬರು 50 ಜನರನ್ನು ಹುಟ್ಟಿಸಿ ಜನಸಂಖ್ಯೆ ಹೆಚ್ಚಿಸುತ್ತೇವೆ’ ಎಂದು ಹೇಳುವ ಮೂಲಕ ಶಾಸಕ ಸೋಮಶೇಖರ ರೆಡ್ಡಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಜನಾರ್ದನ ರೆಡ್ಡಿ ಸಕ್ರಿಯ ರಾಜಕಾರಣದಲ್ಲಿ ಇದ್ದಿದ್ದರೇ ಶ್ರೀರಾಮುಲುಗೆ ಮತ್ತಷ್ಟು ಬಲ ಬರುತ್ತಿತ್ತು!
ಮಾಜಿ ಸಚಿವ ಜನಾರ್ದನ ರೆಡ್ಡಿ ಇಂದು ಸಕ್ರಿಯ ರಾಜಕಾರಣದಲ್ಲಿದಿದ್ರೆ ಸಚಿವ ಶ್ರೀರಾಮುಲುಗೆ ರಾಜಕೀಯದಲ್ಲಿ ಮತ್ತಷ್ಟು ಬಲ ಬರುತ್ತಿತ್ತು. ಇನ್ನೂ ಬೇಗ ಶ್ರೀರಾಮುಲು ಡಿಸಿಎಂ ಆಗುತ್ತಿದ್ದರು ಎಂದು ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಹೇಳಿದ್ದಾರೆ.

ಶಾಲ ವಾಹನ ಹರಿದು ಮಗು ಸಾವು
ಶಾಲಾ ವಾಹನ ಹರಿದು 4 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ.

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಆದ ಮೈತ್ರಿ ಅಕ್ರಮ ಸಂಬಂಧದಂತೆ- ಕೆ ಎಸ್ ಈಶ್ವರಪ್ಪ
ಮಹಾರಾಷ್ಟ್ರದಲ್ಲಿ ಬಿಜೆಪಿ ಹೊರಗಿಟ್ಟು ಸರ್ಕಾರ ರಚಿಸಲು ಶಿವಸೇನೆ, ಕಾಂಗ್ರೆಸ್ ಪಕ್ಷಗಳು ಅಕ್ರಮ ಸಂಬಂಧದ ಮೂಲಕ ಮೈತ್ರಿ ಮಾಡಿಕೊಂಡಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಟೀಕಿಸಿದ್ದಾರೆ.

ಹೊಸಪೇಟೆಯಲ್ಲಿ ವಿಶೇಷ ರಿಕ್ಷಾ ವಾಲಾ!
ಇಲ್ಲೊಬ್ಬ ಬುದ್ದಿವಂತ ಬಡಪಾಯಿ ಸೈಕಲ್ ರಿಕ್ಷಾ ಚಾಲಕ ತನ್ನಲ್ಲಿರುವ ಪುಡಿಗಾಸನ್ನ ಕೂಡಿಟ್ಟು ಹಳೆಯ ಸೈಕಲ್ ರಿಕ್ಷಾಗೆ ಆಧುನಿಕ ಟಚ್ ಕೊಟ್ಟು ತನ್ನ ಭಾರವನ್ನ ಕಡಿಮೆಮಾಡಿಕೊಂಡಿದ್ದಾನೆ.

ಬಿಜೆಪಿಗೆ 'ಬಳ್ಳಾರಿ' ಶಾಕ್: 48ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ
ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ದಮ್ಮೂರ್ ಶೇಖರ್ ಅವರನ್ನು ನೇಮಿಸಿರುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಬಳ್ಳಾರಿ ಜಿಲ್ಲಾಧ್ಯಕ್ಷ ಸೇರಿ ಜಿಲ್ಲೆಯ ವಿವಿಧ ಘಟಕಗಳ ಅಧ್ಯಕ್ಷರು,

ಬಳ್ಳಾರಿಯಲ್ಲಿ ಭೀಕರ ರಸ್ತೆ ಅಪಘಾತ: ಮೂವರ ಸಾವು
ಬೊಲೆರೊ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಬಾಬಯ್ಯ ಕ್ರಾಸ್ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ

ಫೆಲೋಶಿಪ್ ನೀಡದ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿರುದ್ದ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಫೆಲೋಶಿಪ್ ನೀಡದ ಹಂಪಿ ಕನ್ನಡ ವಿಶ್ವ ವಿದ್ಯಾಲಯದ ವಿರುದ್ದ ಸ್ನಾತಕೋತ್ತರ ಮತ್ತು ಸಂಶೋಧನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

