ban

ಚಿಕ್ಕಮಗಳೂರು: ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಬರುವ ಪ್ರವಾಸಿಗರಿಗೆ ನಿಷೇಧ
ನವೆಂಬರ್ 4-6ರವರೆಗೆ ಮೂರು ದಿನಗಳ ಕಾಲ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಜಿಲ್ಲಾಡಳಿತ ಮಂಡಳಿ ನಿಷೇಧ ಹೇರಿ ಆದೇಶ ಹೊರಡಿಸಿದೆ.

ವಿಧಾನ ಸೌಧ-ವಿಕಾಸ ಸೌಧಗಳಲ್ಲಿ ರಾಸಾಯನಿಕ ಮಿಶ್ರಿತ ಅರಶಿನ-ಕುಂಕುಮ ಬಳಕೆ ನಿಷೇಧ ಹಿಂದಿನಿಂದಲೂ ಇದೆ: ಸಿಎಂ ಸ್ಪಷ್ಟನೆ
ಸಾಂಪ್ರದಾಯಿಕ ಪೂಜೆ, ಹಬ್ಬ-ಹರಿದಿನಗಳ ಸಂದರ್ಭದಲ್ಲಿ ರಾಜ್ಯದ ಶಕ್ತಿ ಕೇಂದ್ರ ವಿಧಾನ ಸೌಧ, ವಿಕಾಸ ಸೌಧ ಕಟ್ಟಡಗಳ ಒಳಗೆ ನೆಲಹಾಸುಗಳಿಗೆ ರಂಗೋಲಿಗಳಿಗೆ ರಾಸಾಯನಿಕ ಮಿಶ್ರಿತ ಬಣ್ಣ, ಅರಶಿನ-ಕುಂಕುಮ, ಸುಣ್ಣ ಬಳಕೆ ಮಾಡದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿತ್ತು.

ಬೀದರ್‌ಗಿಂದು ಪ್ರಧಾನಿ ಮೋದಿ: ಡ್ರೋಣ್ ಹಾರಾಟಕ್ಕೆ ನಿಷೇಧ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ (ಅ.3) ನಗರದ ವಾಯುಸೇನೆ ತರಬೇತಿ ಕೇಂದ್ರಕ್ಕೆ ಭೇಟಿ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ಡ್ರೋಣ್ ಹಾರಾಟ ನಿಷೇಧಿಸಲಾಗಿದೆ.

ಸಿನಿಮಾ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಿಗೆ ಮಣಿಪುರ ನಟಿ ಸೋಮಾ ಲೈಶ್ರಾಮ್ ಗೆ ಬ್ಯಾನ್!
ಮಣಿಪುರಿ ನಟಿ ಸೋಮಾ ಲೈಶ್ರಾಮ್ ಅವರು ಇತ್ತೀಚೆಗೆ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ ನಂತರ ಇಂಫಾಲ್ ಮೂಲದ ಸಂಸ್ಥೆಯಿಂದ ಸಿನಿಮಾಗಳಲ್ಲಿ ನಟಿಸಲು ಮತ್ತು ಸಾರ್ವಜನಿಕ ಕಾರ್ಯಕ್ರಮಗಳಿಗೆ ಹಾಜರಾಗದಂತೆ ನಿರ್ಬಂಧಿಸಲಾಗಿದೆ. ಇದನ್ನು ತೀವ್ರವಾಗಿ ಪ್ರತಿಭಟಿಸಿರುವ ಅವರು ತಮ್ಮ ರಾಜ್ಯದ ವಿರುದ್ಧ ಏನನ್ನೂ ಮಾಡಿಲ್ಲ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ‘ಹುಕ್ಕಾ ಬಾರ್’ ನಿಷೇಧಿಸಲು ಸರ್ಕಾರ ನಿರ್ಧಾರ: ಸಚಿವ ದಿನೇಶ್ ಗುಂಡೂರಾವ್
ಹುಕ್ಕಾ ಬಾರ್‌ನಿಂದ ಚಿಕ್ಕ ಮಕ್ಕಳ ಬಹಳವೇ ಪರಿಣಾಮ ಆಗುತ್ತಿದೆ. ಇದು ತಂಬಾಕು ಸೇವನೆಯ ಪ್ರಕ್ರಿಯೆಯಾಗಿದೆ. ಹುಕ್ಕಾಬಾರ್‌ಗೆ ಅವಕಾಶ ಕೊಡಬಾರದು ಅಂತ ಚಿಂತನೆ ಮಾಡಿದ್ದೇವೆ. ಅದಕ್ಕೆ ಕಾನೂನು ತರಲು ಸಭೆಯಲ್ಲಿ ಚರ್ಚೆ ಆಗಿದೆ.

ಬಿಬಿಎಂಪಿ ಮಾರ್ಗಸೂಚಿ: 'ಪ್ಲಾಸ್ಟರ್ ಆಫ್ ಪ್ಯಾರಿಸ್'ನಿಂದ ನಿರ್ಮಿಸಿದ ಗಣೇಶ ಮೂರ್ತಿಗೆ ಸಂಪೂರ್ಣ ನಿಷೇಧ!
ಗಣೇಶ ಚತುರ್ಥಿ ಹತ್ತಿರಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಿದ ಗಣೇಶ ಮೂರ್ತಿಗಳ ತಯಾರಿಕೆ, ಮಾರಾಟವನ್ನು ಸಂಪೂರ್ಣ ನಿಷೇಧಿಸಿದೆ.

ಆಫ್ರಿಕನ್ ಹಂದಿ ಜ್ವರ ಭೀತಿ: ರಾಜ್ಯದಲ್ಲಿ ಕಟ್ಟೆಚ್ಚರ; ಕೇರಳ ಗಡಿಯಲ್ಲಿ ಕೋಳಿ-ಹಂದಿ ಸಾಗಣೆಗೆ ನಿಷೇಧ
ಕೇರಳದಲ್ಲಿ ಮಾರಣಾಂತಿಕ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿದ್ದು, ಈ ಬೆಳವಣಿಗೆ ರಾಜ್ಯದಲ್ಲೂ ಆತಂಕ ಸೃಷ್ಟಿಸಿದೆ.

ಸ್ವಾಮಿ ವಿವೇಕಾನಂದ, ರಾಮಕೃಷ್ಣರ ಅವಹೇಳನ: ಸನ್ಯಾಸಿ ಅಮೋಘ ಲೀಲಾ ದಾಸ್ ಬ್ಯಾನ್ ಮಾಡಿದ ಇಸ್ಕಾನ್
ಸ್ವಾಮಿ ವಿವೇಕಾನಂದ ಮತ್ತು ರಾಮಕೃಷ್ಣ ಪರಮಹಂಸ ಅವರ ಕುರಿತು ಅವಹೇಳನಾಕಾರಿ ಹೇಳಿಕೆ ನೀಡಿದ್ದಕ್ಕಾಗಿ ತನ್ನ ಹೆಸರಾಂತ ಸನ್ಯಾಸಿಗಳಲ್ಲಿ ಒಬ್ಬರಾದ ಅಮೋಘ ಲೀಲಾ ದಾಸ್ ಅವರ ಮೇಲೆ ಇಸ್ಕಾನ್ ಒಂದು ತಿಂಗಳ ಮಟ್ಟಿಗೆ ನಿಷೇಧ ಹೇರಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಜುಲೈನಿಂದ ಬೈಕ್, ಆಟೋ ಸಂಚಾರಕ್ಕೆ ನಿಷೇಧ!
ಜುಲೈ ತಿಂಗಳ ಮಧ್ಯದಿಂದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ನಲ್ಲಿ ದ್ವಿಚಕ್ರ ವಾಹನ ಮತ್ತು ತ್ರಿಚಕ್ರ ವಾಹನಗಳು, ಹಾಗೂ ಟ್ರ್ಯಾಕ್ಟರ್‌ಗಳಂತಹ ಕೃಷಿ ವಾಹನಗಳು ಮತ್ತು ಸೈಕಲ್‌ಗಳನ್ನು ಪ್ರವೇಶಿಸಲು ಅನುಮತಿಸಲಾಗುವುದಿಲ್ಲ.

