ರಾಜ್ಯಬಂಡೇಮಠ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಕೇಸು: ಕಣ್ಣೂರು ಶ್ರೀ, ಯುವತಿ ಸೇರಿ ಮೂವರ ಬಂಧನ, ತನಿಖೆ ಚುರುಕು
ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠದ 45 ವರ್ಷದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಕೇಸಿಗೆ ಭಾನುವಾರ ದೊಡ್ಡ ತಿರುವು ಸಿಕ್ಕಿದೆ. ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು ಮಾಗಡಿ ತಾಲ್ಲೂಕಿನ ಕಣ್ಣೂರು ಮಠದ ಡಾ ಮೃತ್ಯುಂಜಯ ಶ್ರೀ ಹಾಗೂ ಯವತಿ ನೀಲಾಂಬಿಕೆ ಹಾಗೂ ನಿವೃತ್ತ ಶಿಕ್ಷಕ ಹಾಗೂ ವಕೀಲ ಮಹದೇವಯ್ಯ ಎಂಬುವವರನ್ನು ಬಂಧಿಸಿದ್ದಾರೆ.