Bank Fraud Case

ಬ್ಯಾಂಕ್ ವಂಚನೆ ಪ್ರಕರಣ: ಮಧ್ಯ ಪ್ರದೇಶ ಕಾಂಗ್ರೆಸ್ ಶಾಸಕ ರಾಜೇಂದ್ರ ಭಾರ್ತಿ ದೋಷಿ; ಜೈಲಿಗೆ ಶಿಫ್ಟ್
ಉತ್ತರ ಮಧ್ಯಪ್ರದೇಶದ ದಾಟಿಯಾ ಸ್ಥಾನದಿಂದ ಮೂರು ಬಾರಿ ಶಾಸಕರಾಗಿದ್ದ ಭಾರ್ತಿ ಅವರನ್ನು ದೋಷಿ ಎಂದು ತೀರ್ಪು ನೀಡಿದ ನಂತರ, ವಿಶೇಷ ನ್ಯಾಯಾಲಯವು 68 ವರ್ಷದ ಕಾಂಗ್ರೆಸ್ ನಾಯಕನನ್ನು ತಿಹಾರ್ ಜೈಲಿಗೆ ಕಳುಹಿಸಿದೆ.

Bank fraud case: ಸಂಕಷ್ಟದಲ್ಲಿ ನಿರ್ಮಾಪಕ Allu Arvind; ನಟ Allu Arjun ತಂದೆಗೆ ED ವಿಚಾರಣೆ
ರಾಮಕೃಷ್ಣ ಎಲೆಕ್ಟ್ರಾನಿಕ್ಸ್ ಬ್ಯಾಂಕ್ ನಿಂದ 101.4 ಕೋಟಿ ರೂ. ಸಾಲ ಪಡೆದು ವಂಚನೆ ಮಾಡಿದ ಪ್ರಕರಣದಲ್ಲಿ ಪ್ರಮುಖ ಟಾಲಿವುಡ್ ಚಲನಚಿತ್ರ ನಿರ್ಮಾಪಕ ಅಲ್ಲು ಅರವಿಂದ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ.

ಬ್ಯಾಂಕ್ ವಂಚನೆ ಪ್ರಕರಣ: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್
ನಕಲಿ ದಾಖಲೆ ನೀಡಿ ಕೋಟ್ಯಾಂತರ ರೂಪಾಯಿ ಸಾಲ ಪಡೆದು ವಂಚಿಸಿದ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ, ಎಂಟಿವಿ ರೆಡ್ಡಿ, ಶ್ರೀನಿವಾಸ್ ಹಾಗೂ ಮುನಿರಾಜು ನಾಲ್ವರೂ ತಪ್ಪಿತಸ್ಥರು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಬೆಳಗ್ಗೆ ತೀರ್ಪು ನೀಡಿತ್ತು.

ಬ್ಯಾಂಕ್ ವಂಚನೆ ಪ್ರಕರಣ: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಸೇರಿ ನಾಲ್ವರಿಗೆ ಜೈಲು ಶಿಕ್ಷೆ
2012 ರಲ್ಲಿ ಖಾಸಗಿ ಬ್ಯಾಂಕ್‌ಗೆ ಗ್ಯಾಂಗ್ ವಂಚನೆ ಮಾಡಿತ್ತು. ಆರೋಪಿಗಳು ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದರು. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸಿತ್ತು.

ಸಾಲ ಪಡೆದು 439.7 ಕೋಟಿ ರೂ. ವಂಚನೆ: ತನಿಖೆಗೆ ಸಹಕರಿಸುವಂತೆ ಶಾಸಕ ರಮೇಶ್ ಜಾರಕಿಹೊಳಿಗೆ ಹೈಕೋರ್ಟ್ ಸೂಚನೆ
ಸೌಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆ ಅಭಿವೃದ್ಧಿಗೆ ಪಡೆದ ಸಾಲ ಮರುಪಾವತಿಸದ ಪ್ರಕರಣ ಸಂಬಂಧ ಸಿಐಡಿ ವಿಚಾರಣೆಗೆ ಸಹಕರಿಸುವಂತೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸೂಚಿಸಿರುವ ಹೈಕೋರ್ಟ್, ಬಂಧನದಂತಹ ಕ್ರಮಕ್ಕೆ ಮುಂದಾಗುವ ಮುನ್ನ ನ್ಯಾಯಾಲಯದ ಅನುಮತಿ ಪಡೆಯುವುದು ಕಡ್ಡಾಯ ಎಂದು ಶುಕ್ರವಾರ ಆದೇಶಿಸಿದೆ.

ವಂಚನೆ ಪ್ರಕರಣ: ಮುಂದಿನ ವಿಚಾರಣೆವರೆಗೂ ರಮೇಶ್ ಜಾರಕಿಹೊಳಿ ವಿರುದ್ಧ ಯಾವುದೇ ಕ್ರಮ ಬೇಡ: ಸರ್ಕಾರಕ್ಕೆ ಹೈಕೋರ್ಟ್
ಮುಂದಿನ ವಿಚಾರಣೆವರೆಗೂ ರಮೇಶ್ ಜಾರಕಿಹೊಳಿ ವಿರುದ್ಧ ಯಾವುದೇ ಕ್ರಮ ಬೇಡ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ಸೂಚನೆ ನೀಡಿದೆ.

ಬ್ಯಾಂಕ್ ವಂಚನೆ ಪ್ರಕರಣ: ಇಡಿಯಿಂದ 105.5 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಭಾರತ್ ಇನ್ಫ್ರಾ ಎಕ್ಸ್‌ಪೋರ್ಟ್ಸ್ ಮತ್ತು ಆಮದು ಲಿಮಿಟೆಡ್ ಮತ್ತು ಇತರರಿಗೆ ಸೇರಿದ 105.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ ಎಂದು ಸೋಮವಾರ ಪ್ರಕಟಣೆ ತಿಳಿಸಿದೆ.

ಬ್ಯಾಂಕ್ ವಂಚನೆ ಪ್ರಕರಣ: ಜಮ್ಮು-ಕಾಶ್ಮೀರ ಮಾಜಿ ಸಚಿವ ಅಬ್ದುಲ್ ರಹೀಮ್ ಪುತ್ರನ ಮನೆ ಮೇಲೆ ಇಡಿ ದಾಳಿ
ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ)ವು ಜಮ್ಮು ಮತ್ತು ಕಾಶ್ಮೀರದ ಮಾಜಿ ಸಚಿವ ಅಬ್ದುಲ್ ರಹೀಮ್ ರಾಥರ್ ಪುತ್ರನ ಮನೆಯ ಮೇಲೆ ದಾಳಿ ನಡೆಸಿದ್ದಾರೆ.

354 ಕೋಟಿ ರೂ.ಗಳ ಬ್ಯಾಂಕ್ ವಂಚನೆ ಪ್ರಕರಣ: ಮಧ್ಯಪ್ರದೇಶ ಸಿಎಂ ಸೋದರಳಿಯ ಅರೆಸ್ಟ್
354 ಕೋಟಿ ರೂ.ಗಳ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್ ಅವರ ಸೋದರಳಿಯ ರತುಲ್ ಪುರಿಯನ್ನು ಇಂದು ಬೆಳಿಗ್ಗೆ ಜಾರಿ ನಿರ್ದೇಶನಾಲಯ ಬಂಧಿಸಿದೆ.

