Basangouda patil yatnal

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಯತ್ನಾಳ್ ವಿರುದ್ಧದ ಕೇಸ್ ರದ್ದುಗೊಳಿಸಿದ ಹೈಕೋರ್ಟ್
ತಮ್ಮ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರುದ್ದು ಕೋರಿ ಬಿಜೆಪಿ ಶಾಸಕ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠ, ವಾದ-ಪ್ರತಿವಾದ ಬಳಿಕ ತೀರ್ಪು ಕಾಯ್ದಿರಿಸಿತ್ತು.

ಪ್ರಾಮಾಣಿಕ CM ಬೇಕು ಎಂದರೆ ನನ್ನ ಹೆಸರೇ ಮೊದಲು ಬರುತ್ತದೆ; ಶಾಮನೂರು ಶಿವಶಂಕರಪ್ಪ ಡೇಟ್ expiry ಆಗಿದೆ: ಯತ್ನಾಳ್
ಭ್ರಷ್ಟಾಚಾರ ಅಥವಾ ಏನಾದರೂ ಹಗರಣ ಇದ್ದಿದ್ದರೆ ನನ್ನನ್ನ ಬಿಡ್ತಿದ್ರಾ? ಈ ಹಿಂದೆ ನನ್ನ ಮೇಲೂ ದಾಳಿ ಮಾಡಿಸಿದ್ದಾರೆ, ಗುಪ್ತಚರ ಇಲಾಖೆಯನ್ನೂ ಬಿಟ್ಟಿದ್ದರು. ಎಲ್ಲವನ್ನೂ ನೋಡಿದ್ರೂ ಏನೂ ಆಗಲಿಲ್ಲ.

ಜೆಡಿಎಸ್ ಗೆ ಪುನರ್ಜನ್ಮ ಕೊಟ್ಟಿದ್ದೇವೆ; ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರ ತ್ಯಾಗ ಮಾಡಲಿ: ಬಸನಗೌಡ ಪಾಟೀಲ್ ಯತ್ನಾಳ್
ನಮಗೆ ಹೆಚ್.ಡಿ ಕುಮಾರಸ್ವಾಮಿ ಸಹಾಯಬೇಕು. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಶಕ್ತಿ ಬೇಕು. ಮೈತ್ರಿಯಿಂದ ಎರಡೂ ಪಕ್ಷದವರಿಗೆ ಲಾಭ ಆಗಿದೆ. ನಮ್ಮ ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ಕೊಡಬೇಕು ಎಂಬುದು ಮುಖ್ಯ.

ಸಿದ್ದರಾಮಯ್ಯ ಸರ್ಕಾರ ಬೀಳಿಸಲು ಕಾಂಗ್ರೆಸ್- ಬಿಜೆಪಿ ಷಡ್ಯಂತ್ರ: 'ಆಪರೇಷನ್' ಗಾಗಿ 1200 ಕೋಟಿ ಮೀಸಲು; ಯತ್ನಾಳ್
ಈ ಷಡ್ಯಂತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ನಾಯಕರು ಇದ್ದಾರೆ. ಬಿಜೆಪಿ ಹೈಕಮಾಂಡ್‌ಗೆ ಆಸಕ್ತಿಯಿಲ್ಲದಿದ್ದರೂ ಬಿಜೆಪಿಯೊಳಗಿನ ಕೆಲವು ವಿಭಾಗಗಳು ಆಪರೇಷನ್ ಕಮಲದ ಬಗ್ಗೆ ಯೋಚಿಸುತ್ತಿವೆ.

ಮಾನನಷ್ಟ ಮೊಕದ್ದಮ್ಮೆಗೆ ತಡೆ ಕೋರಿದ್ದ ಶಾಸಕ ಯತ್ನಾಳ್ ಗೆ ಹೈಕೋರ್ಟ್ ತರಾಟೆ
ತಮ್ಮ ಕುಟುಂಬ ಹಾಗೂ ವೈಯಕ್ತಿಕ ನಿಂಧನೆ ಹೇಳಿಕೆ ನೀಡಿದ್ದ ಯತ್ನಾಳ್ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ಅವರು ಮಾನನಷ್ಟ ಮೊಕದ್ದಮ್ಮೆ ದಾಖಲಿಸಿದ್ದರು.

ರಾಹುಲ್ ಗಾಂಧಿ ವಿರುದ್ಧದ ಹೇಳಿಕೆ: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಕಾಂಗ್ರೆಸ್ ದೂರು
"ರಾಹುಲ್ ಗಾಂಧಿ ಇಂದು ಅಮೇರಿಕಾ ಪ್ರವಾಸ ಕೈಗೊಂಡು ದೇಶವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದಾರೆ, ಅವರು ಯಾವ ಜಾತಿಯಲ್ಲಿ ಜನಿಸಿದರು ಎಂಬುದು ಅವರಿಗೇ ತಿಳಿದಿಲ್ಲ, ಆದರೆ ಅವರು ಜಾತಿ ಸಮೀಕ್ಷೆಯನ್ನು ಕೈಗೊಳ್ಳಲು ಬಯಸುತ್ತಾರೆ" ಎಂದು ಪಾಟೀಲ್ ಹೇಳಿದ್ದರು

ನಾನು ಜೈಲಿನಲ್ಲಿ ಇರಬೇಕೆಂದು ಕಾಂಗ್ರೆಸ್, ಬಿಜೆಪಿಯ ಕೆಲ ನಾಯಕರು ಬಯಸುತ್ತಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್
ತಮ್ಮ ವಿರುದ್ಧ ಹೆಚ್ಚಿನ ಪ್ರಕರಣಗಳನ್ನು ದಾಖಲಿಸಲು ಮತ್ತು ತಮ್ಮನ್ನು ಬಂಧಿಸಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಉದ್ದೇಶಿಸಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಶನಿವಾರ ಆರೋಪಿಸಿದ್ದಾರೆ.

ಶಿವಾನಂದ ಪಾಟೀಲ್ ಆತ್ಮಹತ್ಯೆಗೆ 5 ಕೋಟಿ, ಡಿಕೆಶಿ ಆತ್ಮಹತ್ಯೆ ಮಾಡಿಕೊಂಡರೆ 50 ಕೋಟಿ ರೂ. ನೀಡುವೆ; ಯತ್ನಾಳ್
ಆತ್ಮಹತ್ಯೆ ಮಾಡಿಕೊಂಡ ರೈತರ ಬಗ್ಗೆ ಹಗುರವಾಗಿ ಮಾತನಾಡಿರುವ ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದು, ಸಚಿವ ಪಾಟೀಲ್ ಅವರೇ ಇಂತಹ ಕಠಿಣ ಕ್ರಮಕ್ಕೆ ಮುಂದಾದರೆ ತಾನು 5 ಕೋಟಿ ರೂಪಾಯಿ ಪರಿಹಾರ ನೀಡುವುದಾಗಿ ಹೇಳಿದ್ದಾರೆ.

ಪೂಜ್ಯ ತಂದೆ-ಮಕ್ಕಳು ಎಲ್ಲರನ್ನೂ ಮುಗಿಸಲು ಹೊರಟಿದ್ದಾರೆ: ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ Yatnal ಮತ್ತೆ ವಾಗ್ದಾಳಿ, ಬಂಡೆಗೂ ಗುದ್ದು!
ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪುವ ಸಾಧ್ಯತೆ ವಿಚಾರ ಮುಂದಿಟ್ಟುಕೊಂಡು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ.

