Basavaraj Bommai

ಬೆಂಗಳೂರಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿಎಂ ಬೊಮ್ಮಾಯಿ ಸ್ವಾಗತ
ವಿವಿಧ ಕಾರ್ಯಕ್ರಮಗಳ ನಿಮಿತ್ತ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಬೆಂಗಳೂರಿಗೆ ಆಗಮಿಸಿದ್ದು, ಎಚ್ ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು.

ಅಂತರರಾಷ್ಟ್ರೀಯ ಪ್ರವಾಸೋದ್ಯಮ ನಕ್ಷೆಯಲ್ಲಿ ಕೊಡಗಿಗೆ ಸ್ಥಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ
ಅಂತರರಾಷ್ಟ್ರೀಯ ಪ್ರವಾಸೋದ್ಯಮ ನಕ್ಷೆಯಲ್ಲಿ ಕೊಡಗನ್ನು ಸೇರಿಸಲಾಗುವುದು ಮತ್ತು ಅದನ್ನು ಖಚಿತಪಡಿಸಿಕೊಳ್ಳಲು ಯೋಜನೆಗಳನ್ನು ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಹೇಳಿದರು.

1.14 ಲಕ್ಷ ಫಲಾನುಭವಿಗಳಿಗೆ ಸರ್ಕಾರ 900 ಕೋಟಿ ರೂ. ಬಿಡುಗಡೆ ಮಾಡಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ವಿವಿಧ ನಿಗಮಗಳ ವತಿಯಿಂದ 1.14 ಲಕ್ಷ ಫಲಾನುಭವಿಗಳಿಗೆ ಸರ್ಕಾರ 900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ತಿಳಿಸಿದರು.

ಅಧಿಕಾರಿಗಳ ಹಣದಾಹಕ್ಕೆ ಬೇಸ್ತು; ಲಂಚ ನೀಡಲು ಹಣವಿಲ್ಲದೆ ದುಡಿಮೆಯ ಎತ್ತನ್ನೇ ಕೊಡಲು ಪುರಸಭೆಗೆ ತಂದ ಹಾವೇರಿ ರೈತ!
ಅಧಿಕಾರಿಗಳ ಹಣದಾಹ ಮಿತಿ ಮೀರಿದ್ದು, ಅಸಹಾಯಕ ರೈತನೊಬ್ಬ ಲಂಚ ನೀಡಲು ಹಣವಿಲ್ಲದ ಕಾರಣ ತನ್ನ ದುಡಿಮೆಯ ಎತ್ತನ್ನೇ ಲಂಚವಾಗಿ ನೀಡಲು ಪುರಸಭೆ ಕಚೇರಿಗೆ ತೆರಳಿದ ಮನಕಲಕುವ ಹಾಗೂ ಆಘಾತಕಾರಿ ಘಟನೆ ಹಾವೇರಿಯಲ್ಲಿ ವರದಿಯಾಗಿದೆ.

ಮಂಡ್ಯ ಸಂಸದೆ ಸುಮಲತಾ ಬಿಜೆಪಿಗೆ ಸೇರ್ಪಡೆ?: ಚರ್ಚೆ ನಡೆಸಲಾಗುತ್ತಿದೆ ಎಂದ ಮುಖ್ಯಮಂತ್ರಿ ಬೊಮ್ಮಾಯಿ
ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಮಂಡ್ಯ ಲೋಕಸಭಾ ಸಂಸದೆ, ನಟಿ ಸುಮಲತಾ ಅಂಬರೀಶ್ ಆಡಳಿತಾರೂಢ ಬಿಜೆಪಿ ಸೇರಬಹುದು ಎಂಬ ಊಹಾಪೋಹಗಳ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಈ ಕುರಿತು ಚರ್ಚೆ ನಡೆಸಲಾಗುತ್ತಿದೆ ಎಂದಿದ್ದಾರೆ.

ಅಂತಾರಾಷ್ಟ್ರೀಯ ಮಹಿಳಾ ದಿನ: ಸಾಧಕಿಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ ಬೊಮ್ಮಾಯಿ
ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪುರುಷರನ್ನೊಳಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಂಗಳೂರು ಸ್ಫೋಟದ ಹೊಣೆ ಹೊತ್ತುಕೊಂಡ ಐಎಸ್‌ಕೆಪಿ; ಡಿಕೆ ಶಿವಕುಮಾರ್ ವಿರುದ್ಧ ಸಿಎಂ ಬೊಮ್ಮಾಯಿ ಟೀಕೆ
ಮಂಗಳೂರು ಕುಕ್ಕರ್ ಸ್ಫೋಟದ ಹೊಣೆಯನ್ನು ಜಾಗತಿಕ ಭಯೋತ್ಪಾದಕ ಸಂಘಟನೆ ಐಎಸ್‌ಕೆಪಿ ವಹಿಸಿಕೊಂಡ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿ.ಕೆ. ಶಿವಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕಾಂಗ್ರೆಸ್ ಕರೆ ನೀಡಿರುವ ಬಂದ್‌ಗೆ ಜನರಿಂದ ಪ್ರತಿಕ್ರಿಯೆ ಸಿಗಲ್ಲ: ಬಸವರಾಜ ಬೊಮ್ಮಾಯಿ
ಭ್ರಷ್ಟಾಚಾರದ ಆರೋಪದ ಮೇಲೆ ಆಡಳಿತಾರೂಢ ಬಿಜೆಪಿ ವಿರುದ್ಧದ ಹೋರಾಟದ ಭಾಗವಾಗಿ ಮಾರ್ಚ್ 9 ರಂದು ಎರಡು ಗಂಟೆಗಳ ಕಾಲ ಬಂದ್‌ಗೆ ಕಾಂಗ್ರೆಸ್ ಕರೆ ನೀಡಿದ್ದು, ವಿರೋಧ ಪಕ್ಷದ ಈ ಕರೆಗೆ ಜನರಿಂದ ಯಾವುದೇ ಪ್ರತಿಕ್ರಿಯೆ ಸಿಗುವುದಿಲ್ಲ. ಸ್ವತಃ ಬಂದ್ (ಮುಚ್ಚಿ ಹೋಗುವ) ಆಗುವ ಅಂಚಿನಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ.

ರಾಹುಲ್ ಗಾಂಧಿ ಕಾಂಗ್ರೆಸ್ ಏಜೆಂಟ್? ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವಿರುದ್ಧ ಕಾಂಗ್ರೆಸ್ ನಾಯಕರು ಮಾಡಿರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರಾ ಎಂದು ಮಂಗಳವಾರ ಪ್ರಶ್ನಿಸಿದ್ದಾರೆ.

