Basavaraj Bommai

ಮಹದಾಯಿ ವಿವಾದ ಉಂಟಾಗಲು ಕಾಂಗ್ರೆಸ್ ಪಕ್ಷವೇ ಕಾರಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಮಹದಾಯಿ ವಿವಾದಕ್ಕೆ ಕಾಂಗ್ರೆಸ್ ಪಕ್ಷವೇ ಹೊಣೆ ಎಂದು ಹೇಳಿದ್ದಾರೆ.

ಅಮಿತ್ ಶಾರನ್ನು ಭೇಟಿ ಮಾಡಿ ನಮ್ಮ ನಿಲುವು ತಿಳಿಸುತ್ತೇವೆ: ಗಡಿ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಡಿಸೆಂಬರ್ 14 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ನಿಗದಿತ ಸಭೆಯಲ್ಲಿ ಮಹಾರಾಷ್ಟ್ರದೊಂದಿಗಿನ ಗಡಿ ವಿವಾದದ ಬಗ್ಗೆ ರಾಜ್ಯ ಸರ್ಕಾರ ತನ್ನ ನಿಲುವನ್ನು ತಿಳಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಹೇಳಿದ್ದಾರೆ.

ಪ್ರಚಾರ ಮಾಡದೆಯೇ ಕಾಂಗ್ರೆಸ್ ಗೆಲ್ಲಲಿದೆ ಎಂದ ಸಿದ್ದರಾಮಯ್ಯ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ
ರಾಜ್ಯದಲ್ಲಿ 2023ರ ವಿಧಾನಸಭೆ ಚುನಾವಣೆಯಲ್ಲಿ ಪ್ರಚಾರ ಮಾಡದೆಯೇ ಕಾಂಗ್ರೆಸ್ ಗೆಲ್ಲಲಿದೆ ಎಂಬ ಸಿಎಲ್ಪಿ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ತಿರುಗೇಟು ನೀಡಿದ್ದಾರೆ.

ಬಿಜೆಪಿಯ ರೌಡಿ ರಾಜಕೀಯದಿಂದ ರೌಡಿಗಳಿಗೆ ಪೊಲೀಸರೇ ಸೆಲ್ಯೂಟ್ ಹೊಡೆಯುವಂತಾಗಿದೆ: ಕಾಂಗ್ರೆಸ್ ಕಿಡಿ
ಈ ಹಿಂದೆ ರೌಡಿಗಳನ್ನು ಕಂಡರೆ ಪೊಲೀಸರು ಒದ್ದು ಎಳೆದು ತರುತ್ತಿದ್ದರು. ಆದರೆ, ಈಗ ಬಿಜೆಪಿಯ ರೌಡಿ ರಾಜಕೀಯದಿಂದಾಗಿ ಅದೇ ರೌಡಿಗಳಿಗೆ ಪೊಲೀಸರೇ ಸೆಲ್ಯೂಟ್ ಹೊಡೆಯುವಂತಾಗಿದೆ ಎಂದು ರಾಜ್ಯ ಕಾಂಗ್ರೆಸ್ ಬಿಜೆಪಿ ವಿರುದ್ಧ ಕಿಡಿಕಾರಿದೆ.

ಮಹಾರಾಷ್ಟ್ರದ ಯಾವುದೇ ಗ್ರಾಮ ಕರ್ನಾಟಕಕ್ಕೆ ಹೋಗುವ ಪ್ರಶ್ನೆಯೇ ಇಲ್ಲ: ಮಹಾ ಡಿಸಿಎಂ ಫಡ್ನವೀಸ್
ಮಹಾರಾಷ್ಟ್ರದ ಯಾವುದೇ ಗ್ರಾಮ ಕರ್ನಾಟಕದೊಂದಿಗೆ ವಿಲೀನಗೊಳ್ಳಲು ಬಯಸಿಲ್ಲ ಮತ್ತು ಯಾವುದೇ ಗಡಿ ಗ್ರಾಮವು "ಎಲ್ಲಿಯೂ" ಹೋಗುವ ಪ್ರಶ್ನೆಯೇ ಇಲ್ಲ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು...

ಮಂಗಳೂರು ಸ್ಫೋಟದ ತನಿಖೆಯನ್ನು ಎನ್ಐಎಗೆ ವಹಿಸುವ ಬಗ್ಗೆ ಸರ್ಕಾರ ನಿರ್ಧರಿಸಿಲ್ಲ: ಬಸವರಾಜ ಬೊಮ್ಮಾಯಿ
ಮಂಗಳೂರು ಆಟೋರಿಕ್ಷಾ ಸ್ಫೋಟ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್ಐಎ) ಹಸ್ತಾಂತರಿಸುವ ಬಗ್ಗೆ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ.

ಹಾಲು ಮತ್ತು ಮೊಸರು ದರ ಏರಿಕೆ: ಕೆಎಂಎಫ್ನಿಂದ ಇನ್ನೆರಡು ದಿನಗಳಲ್ಲಿ ಅಂತಿಮ ನಿರ್ಧಾರ
ಹಾಲು ಮತ್ತು ಮೊಸರು ದರ ಏರಿಕೆಯನ್ನು ನಿಗದಿಪಡಿಸಲು ಕರ್ನಾಟಕ ಹಾಲು ಮಹಾಮಂಡಳ ಕಾಲಾವಕಾಶ ಕೋರಿರುವುದರಿಂದ ಎರಡು ದಿನಗಳ ನಂತರ ಕರ್ನಾಟಕ ಸರ್ಕಾರ ಹಾಲಿನ ದರದ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

‘ಪ್ರಸ್ತುತ ಪರಿಸ್ಥಿತಿ ರಾಜ್ಯಕ್ಕೆ ಅನುಕೂಲಕರವಾಗಿದೆ, ನಾವು ನಮ್ಮ ಮೇಲೆ ನಂಬಿಕೆ ಇಟ್ಟು ಮುನ್ನಡೆಯಬೇಕು’: ಸಿಎಂ ಬೊಮ್ಮಾಯಿ
ಹಲವು ಅಭಿವೃದ್ಧಿ ಹೊಂದಿದ ದೇಶಗಳಲ್ಲಿನ ಆರ್ಥಿಕ ಹಿಂಜರಿತದ ಮಧ್ಯೆ ಬೆಂಗಳೂರಿನಲ್ಲಿ ಕಳೆದ ಶುಕ್ರವಾರ ಮುಕ್ತಾಯಗೊಂಡ ಜಾಗತಿಕ ಹೂಡಿಕೆದಾರರ ಸಮಾವೇಶ(ಜಿಐಎಂ)ದಲ್ಲಿ ರಾಜ್ಯಕ್ಕೆ ನಿರೀಕ್ಷೆಗೂ ಮೀರಿ ಸುಮಾರು 10 ಲಕ್ಷ ಕೋಟಿ...

ಮಾಧುಸ್ವಾಮಿ ಆಡಿಯೋ ವೈರಲ್: ಎಲ್ಲವೂ ಸರಿಯಿದೆ, ಏನೂ ತೊಂದರೆಯಿಲ್ಲ ಎಂದ ಸಿಎಂ ಬೊಮ್ಮಾಯಿ
ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿಯವರು ಬದಲಾಗ್ತಾರೆಂದು ಕಾಂಗ್ರೆಸ್ ಕಿಚ್ಚು ಹೊತ್ತಿಸಿದ ಬೆನ್ನಲ್ಲೇ ಸಚಿವರಾದ ಜೆ. ಮಾಧುಸ್ವಾಮಿಯವರ ಆಡಿಯೋ ಸ್ವಪಕ್ಷದಲ್ಲೇ ಕಿಡಿ ಹೊತ್ತಿಸಿದೆ ಮತ್ತು ಬೊಮ್ಮಾಯಿ ಸರ್ಕಾರಕ್ಕೆ...

