Basavaraj Bommai

ರಾಜಕಾರಣಕ್ಕೆ ಕಂದಾಯ ಸಚಿವರ ಕ್ಲಾಸ್ ಮೇಟ್: ವಿಧಾನಸಭೆ ಚುನಾವಣೆಯಲ್ಲಿ ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಸ್ಪರ್ಧೆ!
1994ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ್ ಪ್ರಸಾದ್ ಅವರು 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ.

ಸಿದ್ದರಾಮಯ್ಯ ಸತ್ಯಹರಿಶ್ಚಂದ್ರರಾ?: ಸಿಎಂ ಬೊಮ್ಮಾಯಿ ಪ್ರಶ್ನೆ
ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಒಂದು ವರ್ಷದಿಂದ ಆರೋಪ ಮಾಡ್ತಾ ಇದ್ದಾರೆ. ಇಷ್ಟು ದಿನ ನಿಖರವಾಗಿ ಯಾವೊಬ್ಬ ಸಚಿವರ ಮೇಲೆ ಆರೋಪ ಮಾಡಿರಲಿಲ್ಲ ಈಗ ಸಚಿವ ಮುನಿರತ್ನ ಅವರ ವಿರುದ್ಧ ಆರೋಪ ಮಾಡಿದ್ದಾರೆ...

ರಾಜ್ಯದ ಸ್ಮಾರಕಗಳನ್ನು ದತ್ತು ಪಡೆಯುವಂತೆ ಕಾರ್ಪೊರೇಟ್ ಕಂಪನಿಗಳಿಗೆ ಪತ್ರ: ಸಿಎಂ ಬೊಮ್ಮಾಯಿ
ರಾಜ್ಯದಲ್ಲಿರುವ ಸ್ಮಾರಕಗಳನ್ನು ದತ್ತು ತೆಗೆದುಕೊಂಡು ಅವುಗಳ ಸಂರಕ್ಷಣೆ ಮತ್ತು ನಿರ್ವಹಣೆಯಲ್ಲಿ ತೊಡಗಿಸಿಕೊಳ್ಳುವಂತೆ ಕಾರ್ಪೊರೇಟ್ ಸಂಸ್ಥೆಗಳಿಗೆ ಪತ್ರ ಬರೆಯುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು...

ಜೀವ ಬೆದರಿಕೆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯಗೆ ಸೂಕ್ತ ಭದ್ರತೆ: ಸಿಎಂ ಬೊಮ್ಮಾಯಿ
ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಅವರಿಗೆ ಸೂಕ್ತ ಭದ್ರತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು...

ಹುತಾತ್ಮ ಯೋಧನ ಕುಟುಂಬ ಸದಸ್ಯನಿಗೆ ಸರ್ಕಾರಿ ಉದ್ಯೋಗ, ಎಲ್ಲಾ ಸರ್ಕಾರಿ ಶಾಲೆಗಳಿಗೆ ಶೌಚಾಲಯ: ಬಸವರಾಜ ಬೊಮ್ಮಾಯಿ ಘೋಷಣೆ
ಹುತಾತ್ಮ ಯೋಧರ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡುವುದರೊಂದಿಗೆ, ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಲಾಗುತ್ತದೆ ಎಂದು 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ನಮ್ಮ ಸರ್ಕಾರ ಬಂದಮೇಲೆ ರಾಜ್ಯ ಸುಧಾರಣೆಗೊಂಡಿದೆ: ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಬಸವರಾಜ ಬೊಮ್ಮಾಯಿ
ನಮ್ಮ ಸರ್ಕಾರ ಬಂದಮೇಲೆ ರಾಜ್ಯ ಸುಧಾರಣೆಗೊಂಡಿದೆ. ಕೃಷಿಯಲ್ಲಿ ಅತಿಹೆಚ್ಚು ಉತ್ಪಾದನೆಯಾಗುತ್ತಿದೆ. ಕೈಗಾರಿಕೆಯಲ್ಲಿ ಕರ್ನಾಟಕ ಮುಂದಿದೆ. ರಾಜ್ಯಕ್ಕೆ ಹೆಚ್ಚಿನ ಎಫ್ಡಿಐ ಬರುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಸಿಎಂ ಬೊಮ್ಮಾಯಿಯಿಂದ 75 ಎಲೆಕ್ಟ್ರಿಕ್ ಬಸ್ಗಳ ಲೋಕಾರ್ಪಣೆ!
ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು 75 ಎಲೆಕ್ಟ್ರಿಕ್ ಬಸ್ಸುಗಳನ್ನು ಲೋಕಾರ್ಪಣೆ ಮಾಡಿದರು.

ಎಸಿಬಿ ರದ್ದುಗೊಳಿಸಿದ ಹೈಕೋರ್ಟ್; ಸಿಎಂ ಬೊಮ್ಮಾಯಿ ಮೊದಲ ಪ್ರತಿಕ್ರಿಯೆ!
ಎಸಿಬಿ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶದ ಕುರಿತಾಗಿ ಮುಂದಿನ ಸಚಿವ ಸಂಪುಟಸಭೆಯಲ್ಲಿ ಚರ್ಚಿಸಿ, ನಮ್ಮ ಚುನಾವಣಾ ಪ್ರಣಾಳಿಕೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಸರ್ಕಾರದ 2ನೇ ವರ್ಷದ ವಾರ್ಷಿಕೋತ್ಸವದಲ್ಲಿ ಬಿಎಸ್ವೈ ಕಳಿಸಲಾಗಿತ್ತು, 1ನೇ ವಾರ್ಷಿಕೋತ್ಸವದಲ್ಲಿ ಬೊಮ್ಮಾಯಿ!
ರಾಜ್ಯದಲ್ಲಿ ಸದ್ಯ ಮುಖ್ಯಮಂತ್ರಿ ಬದಲಾಗಲಿದ್ದಾರೆ ಎಂಬ ಸುದ್ದಿಯ ಸುತ್ತಲೇ ಇದೀಗ ಎಲ್ಲರ ಗಮನ ನೆಟ್ಟಿದೆ. ವಿಧಾನಸಭೆ ಚುನಾವಣೆಗೆ 8 ತಿಂಗಳಷ್ಟೇ ಬಾಕಿ ಇರುವಾಗ ಬಿಜೆಪಿ ನಾಯಕರೊಬ್ಬರು ಆಗಸ್ಟ್ 15ರೊಳಗೆ ಎಲ್ಲವೂ ಬದಲಾಗಬಹುದು ಎಂದಿರುವುದು ಪ್ರಾಮುಖ್ಯತೆ ಪಡೆದುಕೊಂಡಿದೆ. ಈ ಸಂಬಂಧ ರಾಜ್ಯ ಕಾಂಗ್ರೆಸ್ ಕೂಡ ನಿರಂತರವಾಗಿ ಟ್ವೀಟ್ ಮಾಡುವ ಮೂಲಕ ಮುಖ್ಯಮಂತ್ರಿ ಬದಲಾವಣೆ ಕುರಿ

