Basavaraj Bommai

ಅರವಿಂದ ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ- ಸಚಿವ ಬೊಮ್ಮಾಯಿ
ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣ ಸಂಬಂಧ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಹೇಳಿದ್ದಾರೆ.

ಕೋವಿಡ್ ಸೆಸ್: 7 ರಾಜ್ಯಗಳ ಹಣಕಾಸು ಸಚಿವರೊಂದಿಗೆ ಬೊಮ್ಮಾಯಿ ಸಭೆ
ಕೋವಿಡ್ ಸೆಸ್ ಸಂಗ್ರಹಿಸುವಂತೆ ಸಿಕ್ಕಿಂ ರಾಜ್ಯ ಸಲಹೆ ನೀಡಿದ್ದ ಹಿನ್ನೆಲೆಯಲ್ಲಿ ಈ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ 7 ರಾಜ್ಯಗಳ ಹಣಕಾಸು ಸಚಿವರೊಂದಿಗೆ ವರ್ಚುವಲ್ ಸಭೆ ನಡೆಸಿ ಮಾತುಕತೆ ನಡೆಸಿದರು.

ಕೋವಿಡ್ ಮೂರನೇ ಅಲೆ ಮಕ್ಕಳ ಮೇಲೆ ಪ್ರಭಾವ; ಜೂನ್ 25 ರಿಂದ ಮಕ್ಕಳ ಆರೋಗ್ಯ ತಪಾಸಣೆ: ಬೊಮ್ಮಾಯಿ
ಕೋವಿಡ್ ಮೂರನೇ ಅಲೆಯು ಮಕ್ಕಳ ಮೇಲೆ ಪ್ರಭಾವ ಬೀರುತ್ತಿದೆ ಎಂಬ ಕೆಲ ತಜ್ಞರ ವರದಿಗಳ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಸದೃಢತೆಗಾಗಿ ಇದೇ ತಿಂಗಳ 25 ರಿಂದ ಸತತ ಮೂರು ತಿಂಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳವಾರು ಮಕ್ಕಳ ಆರೋಗ್ಯ ತಪಾಸಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಯಡಿಯೂರಪ್ಪನವರ ನಾಯಕತ್ವ ಕುರಿತು ಹೈಕಮಾಂಡ್ ನಲ್ಲಿ ಯಾವುದೇ ಗೊಂದಲ ಇಲ್ಲ: ಬಸವರಾಜ್ ಬೊಮ್ಮಾಯಿ
ಮುಖ್ಯಮಂತ್ರಿ ಯಡಿಯೂರಪ್ಪನವರು ಎಷ್ಟೇ ಕೆಲಸ ಮಾಡಿದರೂ ಅವರ ಬಗ್ಗೆ ಹಗುರವಾಗಿ ಮಾತನಾಡುವುದು, ನಾಯಕತ್ವ ಬದಲಾವಣೆ ಬಗ್ಗೆ ನಿರಂತರ ಗಾಳಿ ಮಾತುಗಳು ಕೇಳಿಬರುತ್ತಲೇ ಇವೆ. ಅವರಿಗೆ ಬಹಳಷ್ಟು ನೋವಾಗಿರಬಹುದು, ಎಲ್ಲಾ ಸಮಯದಲ್ಲಿ ಕೂಡ ಯಡಿಯೂರಪ್ಪನವರು ಕರ್ತವ್ಯಪ್ರಜ್ಞೆ ಮರೆತಿಲ್ಲ ಎಂದರು.

ಜೂನ್ 7ರ ವರೆಗೆ ರಾಜ್ಯದಲ್ಲಿ ಕಟ್ಟುನಿಟ್ಟಿನ ಲಾಕ್ಡೌನ್ ಜಾರಿಯಲ್ಲಿ ಇರಲಿದೆ: ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟನೆ
ಜೂನ್ 7ರವರೆಗೆ ರಾಜ್ಯದಲ್ಲಿ ಕಟ್ಟುನಿಟ್ಟಿನ ಲಾಕ್ಡೌನ್ ಜಾರಿಯಲ್ಲಿ ಇರಲಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಸ್ಪಷ್ಟಪಡಿಸಿದ್ದಾರೆ.

ಗ್ಯಾಂಗ್ ರೇಪ್ ಪ್ರಕರಣ: 6 ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ- ಗೃಹ ಸಚಿವ ಬೊಮ್ಮಾಯಿ
ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಪ್ರಕರಣವನ್ನು ತನಿಖೆ ಆದೇಶಿಸಲಾಗಿದ್ದು, ಈ ವರೆಗೂ ಇಬ್ಬರು ಮಹಿಳೆಯರು ಸೇರಿ 6 ಮಂದಿ ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

ಮೇಕೆದಾಟು ಯೋಜನೆ ಪರಿಶೀಲನೆಗೆ ಜಂಟಿ ಸಮಿತಿ ರಚನೆ; ಎನ್ ಜಿಟಿ ಆದೇಶ ಪ್ರಶ್ನಿಸಿ ಮೇಲ್ಮನವಿ: ಬೊಮ್ಮಾಯಿ
ಮೇಕೆದಾಟು ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲನೆಗೆ ಜಂಟಿ ಸಮಿತಿ ರಚಿಸುವ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ದಕ್ಷಿಣ ಶಾಖೆಯ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜು ಬೊಮ್ಮಾಯಿ ಹೇಳಿದ್ದಾರೆ.

ಲಸಿಕೆ ದಂಧೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಬಸವರಾಜ ಬೊಮ್ಮಾಯಿ ಖಡಕ್ ಎಚ್ಚರಿಕೆ
ಕೋವಿಡ್ ಲಸಿಕೆಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟು ದಂಧೆ ನಡೆಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಜನರು ಸಹಕಾರ ನೀಡದಿದ್ದರೆ ಇನ್ನಷ್ಟು ಕಠಿಣ ಲಾಕ್ ಡೌನ್: ಗೃಹ ಸಚಿವ ಬಸವರಾಜ್ ಬೊಮ್ಮಾಯಿ
ಕೊರೋನಾ ಲಾಕ್ ಡೌನ್ ಸಮಯದಲ್ಲಿ ಪೊಲೀಸರು ಮತ್ತು ಗೃಹ ಇಲಾಖೆ ಇನ್ನಷ್ಟು ಕಠಿಣ ನಿಯಮಗಳನ್ನು ಅನುಸರಿಸುವ ಸಾಧ್ಯತೆಯಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

