Basavaraj Bommai

ಹೊಸ ವರ್ಷಾಚರಣೆ ದಿನ ನೈಟ್ ಕರ್ಫ್ಯೂ ಇಲ್ಲ, ಬಹಿರಂಗ ಆಚರಣೆಗೆ ನಿಷೇಧ: ಬೊಮ್ಮಾಯಿ
ಹೊಸ ವರ್ಷಾಚರಣೆ ಹಿನ್ನೆಲೆ ಎರಡು ದಿನಗಳಿಗೆ ಸೀಮಿತವಾಗಿ ಯಾವುದೇ ನೈಟ್ ಕರ್ಫ್ಯೂ ಹೇರುವುದಿಲ್ಲ. ಆದರೆ ಬಹಿರಂಗ ಆಚರಣೆ ನಿಷೇಧಿಸಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಸೋಮವಾರ ಹೇಳಿದ್ದಾರೆ.

ಮಾದಕ ವಸ್ತುಗಳ ನಿಯಂತ್ರಣಕ್ಕೆ ಕ್ರಮ: ಗೃಹ ಸಚಿವ ಬಸವರಾಜ್ ಬೊಮ್ಮಾಯಿ
ರಾಜ್ಯದಲ್ಲಿ ಮಾದಕ ವಸ್ತುಗಳ ಪಿಡುಗನ್ನು ನಿರ್ಮೂಲನೆ ಮಾಡಲು ಕಠಿಣ ಕ್ರಮ ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಸಹ ಒಟ್ಟಾಗಿ ಸೇರಿ ಈ ಪಿಡುಗಿನ ವಿರುದ್ದ ಕೈ ಜೋಡಿಸಬೇಕೆಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ವಿಧಾನಸಭೆಯಲ್ಲಿಂದು ತಿಳಿಸಿದ್ದಾರೆ.

ಮತಾಂತರ ನಿಷೇಧ, ಲವ್ ಜಿಹಾದ್ ಕಾನೂನು ಜಾರಿ ಖಚಿತ: ಸಚಿವ ಬಸವರಾಜ ಬೊಮ್ಮಾಯಿ
ಮತಾಂತರ ನಿಷೇಧ ಮತ್ತು ಲವ್ ಜಿಹಾದ್ ವಿರುದ್ಧ ಶೀಘ್ರವೇ ಕಾನೂನು ಜಾರಿ ಮಾಡುವುದು ನಿಶ್ಚಿತ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಆನ್ ಲೈನ್ ಜೂಜಾಟ ನಿಷೇಧಿಸಲು ಸರ್ಕಾರದ ಚಿಂತನೆ: ಬಸವರಾಜ ಬೊಮ್ಮಾಯಿ
ರಾಜ್ಯದಲ್ಲಿ ಆನ್ ಜೂಜಾಟಗಳನ್ನು ನಿಷೇಧಿಸುವ ಸಂಬಂಧ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸಂಪತ್ ರಾಜ್ ಬಂಧನ ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಬಸವರಾಜ ಬೊಮ್ಮಾಯಿ
ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಇಂದು ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು ರಸಾಯನಿಕ ಕೈಗಾರಿಕೆಯಲ್ಲಿ ಅಗ್ನಿ ಅವಘಡ: ಸಮಗ್ರ ತನಿಖೆಗೆ ಗೃಹ ಸಚಿವ ಬೊಮ್ಮಾಯಿ ಆದೇಶ
ಬೆಂಗಳೂರು ರಸಾಯನಿಕ ಕೈಗಾರಿಕೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಸಮಗ್ರ ತನಿಖೆಗೆ ಆದೇಶಿಸಿದ್ದಾರೆ.

ರಾಜ್ಯದಲ್ಲೂ ಲವ್ ಜಿಹಾದ್ ನಿಷೇಧಕ್ಕೆ ಕಾಯ್ದೆ ಜಾರಿಗೆ ಚಿಂತನೆ: ಗೃಹ ಸಚಿವ ಬೊಮ್ಮಾಯಿ
ಸಮಾಜದಲ್ಲಿ ಅಶಾಂತಿ ಮೂಡಿಸುವ, ಸಾಮಾಜಿಕ ಪಿಡುಗಾಗಿರುವ ಲವ್ ಜಿಹಾದ್ ತಡೆಗೆ ರಾಜ್ಯದಲ್ಲಿ ಕಠಿಣ ಕಾನೂನು ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಪುನರುಚ್ಚರಿಸಿದ್ದಾರೆ.

ಪೊಲೀಸರ ಸುರಕ್ಷತೆ ಸರ್ಕಾರದ ಮೊದಲ ಆದ್ಯತೆ, ಅವರೇ ನಿಜವಾದ ವಾರಿಯರ್ಸ್: ಬೊಮ್ಮಾಯಿ
ಕೋವಿಡ್-19 ನಿಂದಾಗಿ ಪ್ರಾಣ ಕಳೆದುಕೊಳ್ಳುವ ಭೀತಿಯ ನಡುವೆಯೂ ಪ್ರಾಣದ ಹಂಗು ತೊರೆದು ಹೋರಾಡಿದ ಕೀರ್ತಿ ಮತ್ತು ನೈಜ ಕೊರೋನಾ ವಾರಿಯರ್ಸ್ ಗಳು ಎಂದರೆ ಪೊಲೀಸರು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಜಿಎಸ್'ಟಿ ಪರಿಹಾರ: ಕೇಂದ್ರದಿಂದ ಹೆಚ್ಚುವರಿ ರೂ.11 ಸಾವಿರ ಕೋಟಿಗೆ ಬೊಮ್ಮಾಯಿ ಮನವಿ
ರಾಜ್ಯಕ್ಕೆ ಕೇಂದ್ರದಿಂದ ಬರೋಬ್ಬರಿ ರೂ.11 ಸಾವಿರ ಕೋಟಿ ಜಿಎಸ್'ಟಿ ಪರಿಹಾರ ಮೊತ್ತ ಬರಬೇಕಿದ್ದು, ಕೂಡಲೇ ಬಾಕಿ ಹಣವನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಮನವಿ ಮಾಡಿಕೊಂಡಿದೆ.

