Basavaraj Bommai

ಚೆನ್ನಮ್ಮ ಮೂರ್ತಿ ವಿವಾದ: ತಡೆಯಾಜ್ಞೆ ತೆರವುಗೊಳಿಸಿದ ಧಾರವಾಡ ಪೀಠ- ಬಸವರಾಜ್ ಬೊಮ್ಮಾಯಿ
ಶಿಗ್ಗಾಂವಿ ನಗರದಲ್ಲಿ ವೀರ ಕಿತ್ತೂರು ರಾಣಿ ಚೆನ್ನಮ್ಮ ಮೂರ್ತಿಯನ್ನು ಸ್ಥಾಪಿಸಲು ಇದ್ದ ತಡೆಯಾಜ್ಞೆಯನ್ನು ಧಾರವಾಡದ ಉಚ್ಚ ನ್ಯಾಯಾಲಯ ಇಂದು ತೆರವುಗೊಳಿಸಿ ಮೂರ್ತಿ ಸ್ಥಾಪನೆಗೆ ದಾರಿ ಸುಗಮವಾಗಿಸಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಪ್ರವಾಹದಲ್ಲಿ ಸಿಲುಕಿದವರ ರಕ್ಷಣೆಗೆ ಎನ್‌ಡಿಆರ್‌ಎಫ್ ತಂಡ ರವಾನೆ: ಗೃಹ ಸಚಿವ ಬೊಮ್ಮಾಯಿ
ಜಿಲ್ಲೆಯಾದ್ಯಂತ ಮಳೆ ಪ್ರಮಾಣ ಅಧಿಕವಾಗಿದ್ದರಿಂದ ರಕ್ಷಣಾ ಕಾರ್ಯಾಚರಣೆಗೆ ಮಿಲಿಟರಿ ಹೆಲಿಕಾಪ್ಟರ್ ಬಳಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಗೃಹ ಸಚಿವ ಬಸವರಾಜ ಬೊಮ್ಮಾಯಿಗೂ ಒಕ್ಕರಿಸಿದ ಕೊರೋನಾ!
ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಬಳಿಕ ಇಡೀಗ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರಿಗೂ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಹಾಸ್ಟೆಲ್, ಕಾಲೇಜು ಆವರಣದಲ್ಲಿ ಮಾದಕವಸ್ತು ದೊರೆತರೆ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ: ಬೊಮ್ಮಾಯಿ ಎಚ್ಚರಿಕೆ
ಹಾಸ್ಟೆಲ್, ಕಾಲೇಜು ಆವರಣದಲ್ಲಿ ಮಾದಕವಸ್ತು ದೊರೆತರೆ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳನ್ನು ನೇರ ಹೊಣೆ ಮಾಡಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಗಲಭೆಕೋರರಿಗೆ ಉಗ್ರ ಸಂಘಟನೆಗಳ ಸಂಪರ್ಕವಿರುವುದು ಎನ್ಐಎ ತನಿಖೆಯಲ್ಲಿ ಬಯಲು: ಬಸವರಾಜ್ ಬೊಮ್ಮಾಯಿ
ದೇಶ ವಿರೋಧಿ ಚಟುವಟಿಕೆಗಳ ವಿರುದ್ಧ ಎನ್ಐಎ ಜಂಟಿ ಕಾರ್ಯಾಚರಣೆ ಮುಂದುವರೆಯಲಿದೆ ಇದಕ್ಕಾಗಿ ರಾಜ್ಯದ ಗೃಹ ಇಲಾಖೆ ಎಲ್ಲ ರೀತಿಯ ಸಹಕಾರ ನೀಡಲಿದೆ.ಘಟನೆಯಲ್ಲಿ ಎರಡು ಉಗ್ರ ಗುಂಪುಗಳ ಸಂಪರ್ಕ ಇರುವುದನ್ನು ಎನ್ಐಎ ತನಿಖೆಯಲ್ಲಿ ಬಹಿರಂಗಪಡಿಸಿದೆ.

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದರೆ ಕಠಿಣ ಕ್ರಮ: ಗೃಹ ಸಚಿವ ಬೊಮ್ಮಾಯಿ
ಡಿಜೆ ಹಳ್ಳಿ, ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಯಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಇನ್ನು ಮುಂದೆ ಫೇಸ್ಬುಕ್, ಇನ್ಸ್ಟಾಗ್ರಾಂ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕುವವರ ವಿರುದ್ಧ ಕ್ರಮ ಜರುಗಿಸಲು ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ನಷ್ಟ ಪರಿಹಾರಗೊಳ್ಳಲು ಗಲಭೆಕೋರರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವಲ್ಲಿ ಸರ್ಕಾರ ಗಂಭೀರ ಚಿಂತನೆಯಲ್ಲಿದೆ: ಗೃಹ ಸಚಿವ
ರಾಜ್ಯದಲ್ಲಿ ಕೊರೋನಾ, ಪ್ರವಾಹ ಹಾಗೂ ಗಲಭೆ ಪ್ರಕರಣಗಳಂತಹ ಸಮಸ್ಯೆಗಳು ತಲೆದೋರಿದ್ದು, ಈ ಸಂದರ್ಭದಲ್ಲಿ ರಾಜ್ಯದಲ್ಲಿ ಎದುರಿಸುತ್ತಿರುವ ಸವಾಲುಗಳ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಸಂದರ್ಶನದಲ್ಲಿ ಮನಬಿಚ್ಚಿ ಮಾತನಾಡಿದ್ದಾರೆ.

ಗೃಹ ಸಚಿವರ ಬಗ್ಗೆ ಏಕವಚನ ಪದ ಬಳಕೆಗೆ ವಿಷಾಧಿಸುತ್ತೇನೆ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
ನಗರದ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಗಲಭೆ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವಾಗ ಏಕವಚನ ಪ್ರಯೋಗವಾದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಷಾದ ವ್ಯಕ್ತಪಡಿಸಿದ್ದಾರೆ.

ಎಸ್'ಡಿಪಿಐ, ಪಿಎಫ್ಐ ನಿಷೇಧಕ್ಕೆ ಸರ್ಕಾರ ಚಿಂತನೆ: ಗೃಹ ಸಚಿವ ಬೊಮ್ಮಾಯಿ
ಹಿಂಸಾಚಾರದಲ್ಲಿ ಪಿಎಎಫ್ಐ, ಎಸ್'ಡಿಪಿಐ ಪಾತ್ರ ಇರುವುದು ತನಿಖೆಯಲ್ಲಿ ಸಾಬೀತಾಗಿದ್ದೇ ಆದರೆ, ಸಂಘಟನೆಗಳ ನಿಷೇಧದ ಬಗ್ಗೆ ಪರಿಶೀಲಿಸಲಾಗುವುದು ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

