Basavaraj Bommai

ಅಧಿವೇಶನದ ಮೊದಲ ದಿನವೇ ಸರ್ಕಾರದಿಂದ ಪ್ರಜಾಪ್ರಭುತ್ವ ವಿರೋಧಿ ನಡೆ, ಗ್ಯಾರಂಟಿ ಜಾರಿಗೊಳಿಸದೇ ದೋಖಾ: ಬೊಮ್ಮಾಯಿ
ಹೊಸ ಕಾಂಗ್ರೆಸ್ ಸರ್ಕಾರ ಅಧಿವೇಶನದ ಮೊದಲ ದಿನವೇ ಪ್ರಜಾಪ್ರಭುತ್ವ ವಿರೋಧಿ ನಡೆ ಅನುಸರಿಸಿದೆ. ಜನರಿಗೆ ಯಾವ ಗ್ಯಾರಂಟಿ ಹೇಳಿದ್ದರೊ ಅದನ್ನು ಅನುಷ್ಠಾನ ಮಾಡುವಲ್ಲಿ ಮೋಸ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಅಧಿಕಾರಕ್ಕೆ ಬಂದ ಒಂದೂವರೆ ತಿಂಗಳಲ್ಲೇ ಸರ್ಕಾರ 'ಜನವಿರೋಧಿ'ಯಾಗಿದೆ: ಬಸವರಾಜ ಬೊಮ್ಮಾಯಿ
ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದೂವರೆ ತಿಂಗಳಲ್ಲೇ ಜನವಿರೋಧಿಯಾಗಿದೆ. ವಿಧಾನಸಭೆ ಚುನಾವಣೆಗೂ ಮುನ್ನ ಮತದಾರರಿಗೆ ನೀಡಿದ ಭರವಸೆಯಂತೆ ಐದು ಖಾತರಿಗಳನ್ನು ಜಾರಿಗೊಳಿಸುವಲ್ಲಿ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ.

ಬೀದಿಗೆ ಬಿದ್ದ ಬಿಜೆಪಿ ಬೇಗುದಿ: ಸಭೆಯಲ್ಲಿ ನಾಯಕರ ಘರ್ಷಣೆ; ತುಟಿ ಬಿಚ್ಚದೆ ಮೌನಕ್ಕೆ ಶರಣಾದ ಬೊಮ್ಮಾಯಿ!
ವಿಧಾನಸಭಾ ಚುನಾವಣೆ ಸೋಲಿನ ಬಳಿಕ ಬಿಜೆಪಿಯಲ್ಲಿ ಒಳಗೊಳಗೆ ಕುದಿಯುತ್ತಿದ್ದ ಅಸಹನೆ ಈಗ ಬೀದಿಗೆ ಬಂದಿದೆ. ಪಕ್ಷದ ನಾಯಕರು ವಿವಿಧ ಜಿಲ್ಲೆಗಳಲ್ಲಿ ನಡೆಸುತ್ತಿರುವ ಸಭೆಗಳಲ್ಲಿ ನಾಯಕರ ಕೆಸರೆರಚಾಟ ಮತ್ತು ಕಾರ್ಯಕರ್ತರ ಆಕ್ರೋಶ ತಾರಕಕ್ಕೇರಿದೆ.

ಚುನಾವಣಾ ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ: ಮಾಜಿ ಸಿಎಂ ಬೊಮ್ಮಾಯಿ
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಕೆಂಪಣ್ಣ ಮೌನವಾಗಿರುವುದೇಕೆ?: ಬಸವರಾಜ ಬೊಮ್ಮಾಯಿ
ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಅವರು ಈಗ ಎಲ್ಲಿದ್ದಾರೆ ಎಂಬುದನ್ನು ತಿಳಿಯಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ- ಬಸವರಾಜ ಬೊಮ್ಮಾಯಿ
ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರದಿಂದ ಕೇಂದ್ರದ ಮೇಲೆ ಗೂಬೆ ಕೂರಿಸುವ ಯತ್ನ: ಬಸವರಾಜ ಬೊಮ್ಮಾಯಿ ಕಿಡಿ
ಕಾಂಗ್ರೆಸ್ ಸರಕಾರಕ್ಕೆ ಇಚ್ಛಾಶಕ್ತಿ ಕೊರತೆ ಇದೆ. ಹಣಕಾಸಿನ ವ್ಯವಸ್ಥೆ ಮಾಡಲು ಸಾಧ್ಯವಾಗಿಲ್ಲ. ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ರಾಜಕಾರಣ ಮಾಡುತ್ತಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಕ್ಷೇಪಿಸಿದ್ದಾರೆ.

ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಸಾಧ್ಯತೆ ಎಂದ ಬೊಮ್ಮಾಯಿ: ಮೋದಿ ಸರ್ಕಾರದ ನಡೆ ಟೀಕಿಸಿದ ದಿನೇಶ್ ಗುಂಡೂರಾವ್
ರಾಜ್ಯದಲ್ಲಿ ಹೊಸ ಕಾಂಗ್ರೆಸ್ ಸರ್ಕಾರ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ಹಲವಾರು ವಿವಾದಾತ್ಮಕ ವಿಚಾರಗಳ ಬಗ್ಗೆ ಚರ್ಚೆಯಾಗುತ್ತಿದೆ. ಹಿಂದಿನ ಬಿಜೆಪಿ ಆಡಳಿತದಲ್ಲಿ ಮಾಡಿದ ಎಲ್ಲಾ ಜನವಿರೋಧಿ ಕಾನೂನುಗಳನ್ನು ರದ್ದುಪಡಿಸುವುದಾಗಿ ಕಾಂಗ್ರೆಸ್ ಸರ್ಕಾರ ಸ್ಪಷ್ಟಪಡಿಸಿದೆ.

ಗೋಹತ್ಯೆ ಕುರಿತು ಪಶುಸಂಗೋಪನಾ ಸಚಿವರ ಹೇಳಿಕೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಖಂಡನೆ
ಎಮ್ಮೆ, ಕೋಣಗಳನ್ನು ಕಡಿಯಬಹುದಾದರೆ, ಹಸುವನ್ನು ಏಕೆ ಕಡಿಯಬಾರದು ಎಂಬ ಪಶುಸಂಗೋಪನಾ ಸಚಿವ ಕೆ ವೆಂಕಟೇಶ್ ಅವರ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಮುಖಂಡ ಬಸವರಾಜ ಬೊಮ್ಮಾಯಿ ಭಾನುವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

