Basavaraj Horatti

ಕಪ್ಪತಗುಡ್ಡ ಪರಿಸರದಲ್ಲಿ ಗಣಿಗಾರಿಕೆ ಪ್ರಸ್ತಾವನೆ ತಿರಸ್ಕರಿಸಿ: ಸಿಎಂ ಸಿದ್ದರಾಮಯ್ಯಗೆ ಸಭಾಪತಿ ಹೊರಟ್ಟಿ ಪತ್ರ
ವನ್ಯಜೀವಿ ಅಭಯಾರಣ್ಯ ಎಂದು ಘೋಷಣೆಯಾಗಿರುವ ಕಪ್ಪತ್ತಗುಡ್ಡದಿಂದ 10 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ಆರಂಭಿಸುವ ಪ್ರಸ್ತಾವನೆಯನ್ನು ಸಿಎಂ ಸಿದ್ದರಾಮಯ್ಯ ಮುಂದೂಡಿರುವುದು ಸ್ವಾಗತಾರ್ಹ, ಇದು ಕೊಂಚ ಸಮಾಧಾನ ತಂದಿದೆ.

ಆಗಸ್ಟ್ 30 ರಿಂದ ಅಮೆರಿಕಾದಲ್ಲಿ ಅಕ್ಕ ವಿಶ್ವ ಕನ್ನಡ ಸಮ್ಮೇಳನ; ಸಭಾಪತಿ ಬಸವರಾಜ ಹೊರಟ್ಟಿ ಭಾಗಿ
ಸಮ್ಮೇಳನದಲ್ಲಿ ಕನ್ನಡ ನಾಡು, ನುಡಿ, ರಕ್ಷಣೆ ಕುರಿತು ವಿವಿಧ ಗೋಷ್ಠಿಗಳು, ಚಿಂತನ-ಮಂಥನ, ಸಂವಾದಗಳು ಜರುಗಲಿದ್ದು, ಅತ್ಯುತ್ತಮ ಮನರಂಜನಾ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗಿದೆ.

ಪಾಕಿಸ್ತಾನ ಜಿಂದಾಬಾದ್ ಘೋಷಣೆ ಪ್ರಕರಣ: ಸಭಾಪತಿಗಳ ಮುಂದೆ ಕೈ ಕೈ ಮಿಲಾಯಿಸಲು ಮುಂದಾದ ಸದಸ್ಯರು
ನೂತನ ರಾಜ್ಯಸಭಾ ಸದಸ್ಯ ಡಾ ಸೈಯದ್ ನಾಸಿರ್ ಹುಸೇನ್ ಅಭಿಮಾನಿಗಳು ವಿಧಾನಸೌಧ ಆವರಣದಲ್ಲಿ 'ಪಾಕಿಸ್ತಾನ ಜಿಂದಾಬಾದ್' ಘೋಷಣೆ ಕೂಗಿದ್ದಾರೆ ಎಂಬ ಆರೋಪ ಇಂದು ಬುಧವಾರ ವಿಧಾನ ಮಂಡಲದ ಉಭಯ ಸದನಗಳಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರ ನಡುವೆ ತೀವ್ರ ಗದ್ದಲ-ಕೋಲಾಹಲಕ್ಕೆ ಕಾರಣವಾಯಿತು.

ಸಾರ್ವಜನಿಕರಿಗೆ ಪಾಸ್ ನೀಡುವಾಗ ಎಚ್ಚರಿಕೆ ವಹಿಸಿ: ಹೊಸ ಶಾಸಕರಿಗೆ ಬಸವರಾಜ ಹೊರಟ್ಟಿ ಸಲಹೆ
ಸದನದ ಕಲಾಪಗಳನ್ನು ವೀಕ್ಷಿಸಲು ಬಯಸುವ ಸಾರ್ವಜನಿಕರಿಗೆ ಪಾಸ್‌ಗಳನ್ನು ನೀಡುವಾಗ ಜಾಗರೂಕರಾಗಿರಿ ಎಂದು ಕರ್ನಾಟಕ ವಿಧಾನ ಪರಿಷತ್ತಿನ ಹಿರಿಯ ಶಾಸಕ ಬಸವರಾಜ ಹೊರಟ್ಟಿ ಅವರು ನೂತನ ಶಾಸಕರಿಗೆ ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಎಂಎಲ್ ಸಿ ಸ್ಥಾನಕ್ಕೆ ಜಗದೀಶ್ ಶೆಟ್ಟರ್ ರಾಜೀನಾಮೆ ಅಂಗೀಕರಿಸಿದ ಹೊರಟ್ಟಿ
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಕಾಂಗ್ರೆಸ್ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಗುರುವಾರ ಅಂಗೀಕರಿಸಿದ್ದಾರೆ.

ಪ್ರತ್ಯೇಕವಾಗಿ ಬದುಕುವಷ್ಟು ಸಂಪನ್ಮೂಲ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕದಲ್ಲಿ ಇಲ್ಲ: ಬಸವರಾಜ ಹೊರಟ್ಟಿ
ಉತ್ತರ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಗಳು ಸ್ವಂತವಾಗಿ ಅಭಿವೃದ್ಧಿ ಹೊಂದಲು ಸಾಕಷ್ಟು ಸಂಪನ್ಮೂಲಗಳನ್ನು ಹೊಂದಿಲ್ಲ. ರಾಜ್ಯ ಒಡೆಯುವ ಮಾತನ್ನು ಯಾರೂ ಆಡಬಾರದು ಎಂದು ಪ್ರತ್ಯೇಕ ರಾಜ್ಯಕ್ಕಾಗಿ ಧ್ವನಿ ಎತ್ತಿರುವ ಸಂಘಟನೆಗಳಿಗೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಎಚ್ಚರಿಕೆ ನೀಡಿದ್ದಾರೆ.

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಸವರಾಜ ಹೊರಟ್ಟಿ
ಇತ್ತೀಚೆಗಷ್ಟೇ ಕೇಸರಿ ಪಕ್ಷಕ್ಕೆ ಸೇರ್ಪಡೆಯಾದ ಬಿಜೆಪಿ ಎಂಎಲ್‌ಸಿ ಹಾಗೂ ಹಿರಿಯ ರಾಜಕಾರಣಿ ಬಸವರಾಜ್ ಹೊರಟ್ಟಿ ಅವರು ಮಂಗಳವಾರ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ.

ನಡೆಯದ ಪರಿಷತ್ ಸಭಾಪತಿ ಚುನಾವಣೆ; ಕೊಟ್ಟ ಮಾತಿಗೆ ತಪ್ಪಿದ ಬೊಮ್ಮಾಯಿ-ಜೋಶಿ; ಬಿಜೆಪಿ ಹಿಂದೇಟಿನಿಂದ ಬಸವರಾಜ ಹೊರಟ್ಟಿ ಅತಂತ್ರ!
ಪಶ್ಚಿಮ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರನ್ನು ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ನೇಮಿಸಲು ‘ಮೂಲ’ ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರು ವಿರೋಧಿಸುತ್ತಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ.

ಪಶ್ಚಿಮ ಶಿಕ್ಷಕರ ಮತಕ್ಷೇತ್ರ ಫಲಿತಾಂಶ: ಬಸವರಾಜ ಹೊರಟ್ಟಿಗೆ ಗೆಲುವು; 8ನೇ ಬಾರಿಗೆ ಮೇಲ್ಮನೆ ಪ್ರವೇಶ
ಶಿಕ್ಷಕರ ಮತಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಪಶ್ಚಿಮ ಶಿಕ್ಷಕರ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರು ಗೆಲವು ಸಾಧಿಸುವ ಮೂಲಕ 8ನೇ ಬಾರಿಗೆ ಮೇಲ್ಮನೆ ಪ್ರವೇಶಿಸಿದ್ದಾರೆ.

