Basavaraj Horatti

ರಾಷ್ಟ್ರ ಲಾಂಛನ ದುರ್ಬಳಕೆ: ಬಸವರಾಜ ಹೊರಟ್ಟಿ ವಿರುದ್ಧ ನೋಟಿಸ್ ಜಾರಿ
ಬಸವರಾಜ ಪಥ ಎಂಬ ಪುಸ್ತಕದ ಮುಖ ಪುಟದ ಮೇಲೆ ರಾಷ್ಟ್ರೀಯ ಲಾಂಛನ ಬಳಸಿದ ಆರೋಪ ಮತ್ತು ಪರಿಷತ್ ಸಭಾಪತಿ ಪೀಠದ ದುರ್ಬಳಕೆ ಮಾಡಿದ ಆರೋಪದ ಮೇಲೆ ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರಿಗೆ ಬೆಳಗಾವಿ ಪ್ರಾದೇಶಿಕ ಆಯುಕ್ತರು ನೋಟಿಸ್ ಜಾರಿ ಮಾಡಿದ್ದಾರೆಂದು ತಿಳಿದುಬಂದಿದೆ.

ಪ್ರತಿಪಕ್ಷಗಳ ನಡವಳಿಕೆಯಿಂದ ನೋವಾಗಿ ರಾಜೀನಾಮೆಗೆ ಮುಂದಾಗಿದ್ದೆ: ಸಭಾಪತಿ ಬಸವರಾಜ ಹೊರಟ್ಟಿ
ಪರಿಷತ್‌ನಲ್ಲಿ ಶುಕ್ರವಾರ ಪ್ರತಿಪಕ್ಷಗಳು ನಡೆದುಕೊಂಡ ರೀತಿ ನನಗೆ ನೋವುಂಟು ಮಾಡಿತ್ತು. ಹೀಗಾಗಿ, ರಾಜೀನಾಮೆಗೆ ಮುಂದಾಗಿದ್ದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಶನಿವಾರ ಹೇಳಿದ್ದಾರೆ.

ಪರಿಷತ್ತಿನಲ್ಲಿ ಉತ್ತರ ಕರ್ನಾಟಕ ಸಮಸ್ಯೆ ಬಗ್ಗೆ ಸಮಗ್ರ ಚರ್ಚೆಯಾಗಿದೆ: ಸಭಾಪತಿ
ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ವಿಧಾನ ಪರಿಷತ್ ಕಲಾಪ ಯಶಸ್ವಿಯಾಗಿದೆ ನಡೆದಿದೆ. ಸಾಕಷ್ಟು ವಿಷಯಗಳ ಚರ್ಚೆಯಾಗಿದ್ದು, ನಿರೀಕ್ಷಿತ ಗುರಿ ತಲುಪಿದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.

ನಾಳೆ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ: ಸಭಾಪತಿ ಬಸವರಾಜ ಹೊರಟ್ಟಿ ತೀರ್ಮಾನ
ನಾಳೆ ಬೆಳಗ್ಗೆ 10-30ಕ್ಕೆ ವಿಧಾನಮಂಡಲ ಅಧಿವೇಶನವನ್ನು ಆರಂಭಿಸಲಾಗುತ್ತದೆ. ಮೊದಲ ಒಂದು ಗಂಟೆ ಪ್ರಶ್ನೋತ್ತರಗಳಿಗೆ ಅವಕಾಶ ಕಲ್ಪಿಸಿ, ನಂತರ ಇಡೀ ದಿನದ ಕಲಾಪವನ್ನು ಉತ್ತರ ಕರ್ನಾಟಕ ಭಾಗದಲ್ಲಿ ಸಮಸ್ಯೆಗಳನ್ನು ಚರ್ಚಿಸಲು ಮೀಸಲಿಡಲಾಗಿದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ಚಳಿಗಾಲದ ಅಧಿವೇಶನ: ಸಭಾಪತಿ ಆದೇಶ ಉಲ್ಲಂಘಿಸಿದ ವಿಧಾನ ಪರಿಷತ್ ನ 14 ಕಾಂಗ್ರೆಸ್ ಸದಸ್ಯರ ಅಮಾನತು
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಸಭಾಪತಿ ಅದೇಶ ಉಲ್ಲಂಘನೆ ಆರೋಪದಡಿಯಲ್ಲಿ ವಿಧಾನ ಪರಿಷತ್ತಿನ 14 ಮಂದಿ ಸದಸ್ಯರನ್ನು ಅಮಾನತು ಮಾಡಲಾಗಿದೆ.

ಬೆಳಗಾವಿ: ಚಳಿಗಾಲದ ಅಧಿವೇಶನದ ಸಿದ್ಧತೆ ಪರಿಶೀಲಿಸಿದ ಸ್ಪೀಕರ್ ಕಾಗೇರಿ, ಸಭಾಪತಿ ಹೊರಟ್ಟಿ
ಮೂರು ವರ್ಷಗಳ ನಂತರ ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಸುಗಮ ಕಲಾಪಕ್ಕೆ ಅನುಕೂಲವಾಗುವಂತೆ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.

ಮನೆಗಾಗಿ ಪದೇ ಪದೇ ಸರ್ಕಾರದ ಬಳಿ ಅಂಗಲಾಚುವುದಿಲ್ಲ: ಬಸವರಾಜ ಹೊರಟ್ಟಿ ಆಕ್ರೋಶ
ಮನೆ ಕೊಡುವಂತೆ ನಾನು ರಾಜ್ಯ ಸರ್ಕಾರದ ಬಳಿ ಭಿಕ್ಷೆ ಬೇಡುತ್ತಿಲ್ಲ. ಮನೆ ಕೊಟ್ಟರೆ ಕೊಡಲಿ, ಬಿಟ್ಟರೆ ಬಿಡಲಿ. ನಾನು ಇನ್ನು ಮುಂದೆ ಮನೆ ಕೇಳುವುದಿಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಧಾನ ಪರಿಷತ್ ಸಭಾಪತಿಯಾಗಿ 6 ತಿಂಗಳಾಯ್ತು... ಬಸವರಾಜ ಹೊರಟ್ಟಿಗೆ ಇನ್ನೂ ಸಿಕ್ಕಿಲ್ಲ ಅಧಿಕೃತ ಸರ್ಕಾರಿ ನಿವಾಸ!
ವಿಧಾನ ಪರಿಷತ್ ಸಭಾಪತಿಯಾಗಿ 6 ತಿಂಗಳು ಕಳೆದರೂ ಬಸವರಾಜ ಹೊರಟ್ಟಿಯವರಿಗೆ ಸರ್ಕಾರದ ಅಧಿಕೃತ ನಿವಾಸ ದೊರೆತಿಲ್ಲ. ಇದು ಅಸಮಾಧಾನಕ್ಕೆ ಕಾರಣವಾಗಿದೆ.

ಸಚಿವಾಲಯದ ಆಡಳಿತಕ್ಕೆ ಮೇಜರ್ ಸರ್ಜರಿ: 30 ಅಧಿಕಾರಿಗಳ ಎತ್ತಂಗಡಿ ಮಾಡಿದ ಬಸವರಾಜ ಹೊರಟ್ಟಿ
ಕಳೆದ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಬೇರೂರಿದ್ದ ಕರ್ನಾಟಕ ವಿಧಾನ ಪರಿಷತ್ತಿನ 30ಕ್ಕೂ ಹೆಚ್ಚು ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸಚಿವಾಲಯದ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡುವ ಮೂಲಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆಡಳಿತ ಯಂತ್ರಕ್ಕೆ ಚುರುಕು ನೀಡುವ ದಿಟ್ಟ ಕ್ರಮ ಕೈಗೊಂಡಿದ್ದಾರೆ.

