basavaraja bommai

ಬಿಜೆಪಿ ಶಾಸಕರ ದೂರು-ದುಮ್ಮಾನಗಳಿಗೆ ಕಿವಿಯಾಗಲಿರುವ ಸಿಎಂ ಬೊಮ್ಮಾಯಿ: ವಾರದಲ್ಲಿ ನಾಲ್ಕು ಗಂಟೆ ಮೀಸಲು
ವಾರದಲ್ಲಿ ನಾಲ್ಕು ಗಂಟೆ ಪಕ್ಷದ ಶಾಸಕರಿಗೆ ಮೀಸಲಿಟ್ಟು ಅವರ ದೂರು-ದುಮ್ಮಾನಗಳು, ಕಷ್ಟಗಳು, ಸಮಸ್ಯೆಗಳನ್ನು ಆಲಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂದಾಗಿದ್ದಾರೆ.

ಸದನದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಮುಖ್ಯ ಸಚೇತಕರ ಪಕ್ಕದ ಆಸನ: ಸಿಎಂ ಬೊಮ್ಮಾಯಿ ಆಡಳಿತಕ್ಕೆ ಬಹುಪರಾಕ್!
ವಿಧಾನಸಭೆ ಅಧಿವೇಶನದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸದನದಲ್ಲಿ ಎಲ್ಲಿ ಕುಳಿತುಕೊಳ್ಳುತ್ತಾರೆ, ಅವರಿಗೆ ಯಾವ ಸ್ಥಾನ ನೀಡಲಾಗುತ್ತದೆ, ಶಾಸಕ ಸೀಟಿನಲ್ಲಿ ಅವರು ಕೂರಬೇಕಾಗುತ್ತದೆ ಎಂಬಿತ್ಯಾದಿ ಹಲವು ಚರ್ಚೆಗಳು ಕೇಳಿಬಂದಿದ್ದವು.

ಇಂದಿನಿಂದ ವಿಧಾನಮಂಡಲ ಅಧಿವೇಶನ: ಎತ್ತಿನ ಗಾಡಿಯಲ್ಲಿ ಕಲಾಪಕ್ಕೆ ಆಗಮಿಸಲಿರುವ ಕಾಂಗ್ರೆಸ್ ನಾಯಕರು!
10 ದಿನಗಳ ವಿಧಾನಮಂಡಲ ಅಧಿವೇಶನ ಸೋಮವಾರ ಆರಂಭವಾಗುತ್ತಿದೆ. ಈ ಸಂದರ್ಭದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಮುಖ್ಯವಾಗಿ ಪ್ರತಿಪಕ್ಷ ಕಾಂಗ್ರೆಸ್ ಸಜ್ಜುಗೊಳ್ಳುತ್ತಿದೆ.

ತಾವೇ ಮಾಡಿದ್ದ ಹಾರ-ತುರಾಯಿ ನಿಷೇಧ ನಿಯಮ ಉಲ್ಲಂಘಿಸಿದ ಸಿಎಂ ಬೊಮ್ಮಾಯಿ..?
ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ-ತುರಾಯಿ ನಿಷೇಧ ಮಾಡಿ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಮತ್ತು ಹೂ ಬೆಳೆಗಾರರ ವಿರೋಧಕ್ಕೆ ಪಾತ್ರರಾಗಿದ್ದ ಕರ್ನಾಟಕ ಸಿಎಂ ಬಸವರಾಜ್ ಬೊಮ್ಮಾಯಿ ಅವರು ತಾವೇ ಮಾಡಿದ್ದ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ನವೆಂಬರ್ 1ರಿಂದ ಸರ್ಕಾರದಿಂದ ಆಡಳಿತದಲ್ಲಿ ಸುಧಾರಣೆ: ಬಸವರಾಜ ಬೊಮ್ಮಾಯಿ
ನವೆಂಬರ್ 1ರಿಂದ ಆಡಳಿತ ಸುಧಾರಣಾ ಸಮಿತಿಯ ಶಿಫಾರಸುಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕೆಲಸ ಆರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು ಈ ನಿಟ್ಟಿನಲ್ಲಿ ಸಲಹಾ ಸಮಿತಿಯೊಂದನ್ನು ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬಿಜೆಪಿ ಅತಿದೊಡ್ಡ ಪಕ್ಷ, ಜೆಡಿಎಸ್ ಜೊತೆ ಮೈತ್ರಿ ಇಲ್ಲ; ಯಡಿಯೂರಪ್ಪನವರ ಅನುಭವಗಳನ್ನು ಪಕ್ಷ ಬಳಸಿಕೊಳ್ಳುತ್ತದೆ: ಅರುಣ್ ಸಿಂಗ್
ಬಿಜೆಪಿ ಅತಿದೊಡ್ಡ ರಾಜಕೀಯ ಪಕ್ಷವಾಗಿದ್ದು ಜೆಡಿಎಸ್ ಹಾಗೂ ಬೇರಾವ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

ಸಿಎಂ ಆಗಿ ಬೊಮ್ಮಾಯಿ ಒಂದು ತಿಂಗಳು ಅಧಿಕಾರ ಪೂರ್ಣ: ಉತ್ತಮ ಆಡಳಿತಗಾರ ಎಂಬ ಪ್ರಶಂಸೆ; ವೈಫಲ್ಯ, ಸಾಧನೆಗಳೇನು?
ಕೋವಿಡ್ ಮೂರನೇ ಅಲೆಗೆ ಕರ್ನಾಟಕ ಸಿದ್ಧವಾಗುತ್ತಿದ್ದ ವೇಳೆಗೆ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಆಡಳಿತ ವಹಿಸಿಕೊಂಡ ಕಠಿಣ ಪರಿಸ್ಥಿತಿಯಲ್ಲಿ ತಮ್ಮ ಕಾರ್ಯವೈಖರಿಗಾಗಿ ಬೆಂಬಲಿಗರಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಕಡತಗಳ ವಿಲೇವಾರಿ ಪ್ರಕ್ರಿಯೆಗೆ ಅನಗತ್ಯ ವಿಳಂಬ ಬೇಡ: ಇಲಾಖಾ ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ
ವಿವಿಧ ಇಲಾಖೆಗಳಲ್ಲಿ ಬಾಕಿಯಿರುವ ಕಡತಗಳ ವಿಲೇವಾರಿಗೆ ಸಂಬಂಧಿಸಿದಂತೆ ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು.

ಪ್ರತಿದಿನ 5 ಲಕ್ಷ ಡೋಸ್ ಕೋವಿಡ್ ಲಸಿಕೆ ನೀಡುವುದು ನಮ್ಮ ಗುರಿ: ಕೇಂದ್ರಕ್ಕೆ ಸಿಎಂ ಬೊಮ್ಮಾಯಿ ಹೇಳಿಕೆ
ರಾಜ್ಯಕ್ಕೆ ಪ್ರತಿ ದಿನ 5 ಲಕ್ಷ ಡೋಸ್ ಕೋವಿಡ್ ಲಸಿಕೆ ಪೂರೈಕೆ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

