basavaraja bommai

ದೆಹಲಿ ಯಾತ್ರೆ ಮುಗಿಸಿ ಬೆಂಗಳೂರಿಗೆ ಬಂದಿಳಿದ ಸಿಎಂ ಬಸವರಾಜ ಬೊಮ್ಮಾಯಿ, ಪ್ರಕಟಿಸಲಿದ್ದಾರೆಯೇ ನೂತನ ಸಚಿವರ ಪಟ್ಟಿ?
ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸಂಪುಟಕ್ಕೆ ಸೇರ್ಪಡೆಯಾಗುವ ಸಚಿವರ ಪಟ್ಟಿಯನ್ನು ದೆಹಲಿಯಿಂದ ಹೊತ್ತು ತಂದು ಬೆಂಗಳೂರಿಗೆ ಬಂದಿಳಿದಿದ್ದಾರೆ. ಅವರು ಅಲ್ಲಿಂದ ನೇರವಾಗಿ ವಿಧಾನ ಸೌಧಕ್ಕೆ ಆಗಮಿಸುತ್ತಿದ್ದು ಶಕ್ತಿಕೇಂದ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಸಚಿವ ಸಂಪುಟ ವಿಸ್ತರಣೆ ಬಿಕ್ಕಟ್ಟು: ಪುತ್ರನಿಗೆ ಸ್ಥಾನ ಕಲ್ಪಿಸಲು ಬಿಎಸ್ ವೈ ಬಿಗಿಪಟ್ಟು; ಸಿಎಂ ಬೊಮ್ಮಾಯಿಗೆ ಇಕ್ಕಟ್ಟು!
ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ನಿಷ್ಠಾವಂತರನ್ನು ಸಂಪುಟಕ್ಕೆ ಸೇರಿಸುವ ಕುರಿತು ಕಳೆದ ಕೆಲವು ದಿನಗಳಿಂದ ತೆರೆಮರೆಯಲ್ಲಿ ಗಂಭೀರ ಚರ್ಚೆಗಳು ನಡೆದಿವೆ.

ಯಡಿಯೂರಪ್ಪನವರಿಗೆ ಮುಂಬಾಗಿಲಿಂದ ಬಂದು ಗೊತ್ತೇ ಇಲ್ಲ, ಅವರಿಗೆ ಮದುವೆ ಊಟ ಮಾಡಿ ಗೊತ್ತಿಲ್ಲ, ಬರೀ ತಿಥಿ ಊಟ ಮಾಡೋದು: ಸಿದ್ದರಾಮಯ್ಯ
ರಾಜ್ಯದಲ್ಲಿ ಬಿ ಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆದುಹಾಕಿ ಬಸವರಾಜ ಬೊಮ್ಮಾಯಿಯವರನ್ನು ಮುಖ್ಯಮಂತ್ರಿ ಮಾಡಲಾಗಿದೆ, ಆದರೆ ಪರಿಸ್ಥಿತಿ ಮಾತ್ರ ಬದಲಾಗಿಲ್ಲ, ಬಿಜೆಪಿ ಒಂದು ಭ್ರಷ್ಠ ಪಕ್ಷವಾಗಿದ್ದು, ಅದರಲ್ಲಿರುವವರು ಭ್ರಷ್ಠರೇ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಬೊಮ್ಮಾಯಿ ಸಿಎಂ ಆಗಿರುವುದು 7 ತಿಂಗಳು ಮಾತ್ರ, ಮುಂದೆ ಗಡ್ಡಧಾರಿಯೊಬ್ಬರು ಮುಖ್ಯಮಂತ್ರಿಯಾಗುತ್ತಾರೆ: ಮೈಲಾರ ಶ್ರೀ ಭವಿಷ್ಯವಾಣಿ
ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ಪೂರ್ಣಾವಧಿ ಮುಗಿಸುವುದಿಲ್ಲ ಎಂದು ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲ್ಲೂಕಿನ ಮೈಲಾರ ಲಿಂಗೇಶ್ವರ ದೇವಸ್ಥಾನದ ಸ್ವಾಮೀಜಿಯೊಬ್ಬರು ಹೇಳಿರುವುದು ಇದೀಗ ಭಾರೀ ಸದ್ದು ಮಾಡುತ್ತಿದೆ. ರಾಜಕೀಯ ವಲಯದಲ್ಲಿ, ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ಚರ್ಚೆಯಾಗುತ್ತಿದೆ.

ಸಚಿವ ಸಂಪುಟ ರಚನೆಗೆ ಇಂದು ಅಥವಾ ನಾಳೆ ಸೂಚನೆ ಬರುವ ಸಾಧ್ಯತೆ: ಸಿಎಂ ಬಸವರಾಜ ಬೊಮ್ಮಾಯಿ
ಬಹು ನಿರೀಕ್ಷಿತ ಸಚಿವ ಸಂಪುಟ ರಚನೆಗೆ ಇಂದು ಅಥವಾ ನಾಳೆ ಹೈಕಮಾಂಡ್ ನಿಂದ ಸೂಚನೆ ಬರುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಜಿಎಸ್ ಟಿ ಪರಿಹಾರ ಬಿಡುಗಡೆಗೆ ಹಣಕಾಸು ಸಚಿವೆ ಒಪ್ಪಿಗೆ, ಹೆಚ್ಚಿನ ಕೊರೋನಾ ಲಸಿಕೆ ಪೂರೈಕೆಗೆ ಕೇಂದ್ರ ಅಸ್ತು: ಸಿಎಂ ಬೊಮ್ಮಾಯಿ
ಸಚಿವ ಸಂಪುಟ ರಚನೆ ಬಗ್ಗೆ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಅವರ ಜೊತೆಗೆ ಮಾತನಾಡುತ್ತೇನೆ, ಅವರು ಒಂದು ಸಭೆಯಲ್ಲಿದ್ದಾರೆ, ಅದಾದ ಬಳಿಕ ಹೋಗಿ ಅವರನ್ನು ಭೇಟಿ ಮಾಡಿ ಸಂಪುಟ ರಚನೆ ಬಗ್ಗೆ ಅನುಮತಿ ಕೇಳುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

'ಸಚಿವ ಸಂಪುಟ ರಚನೆ ಸುಗಮವಾಗಿ ಸಾಗುತ್ತದೆ, ಯಾವುದೇ ಗೊಂದಲವಿಲ್ಲ': ದೆಹಲಿಯಲ್ಲಿ ಸಿಎಂ ಬೊಮ್ಮಾಯಿ ವಿಶ್ವಾಸದ ನುಡಿ
ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದಾಗ ಅವರು ನೀಡುವ ಸಲಹೆ, ಸೂಚನೆ ಪ್ರಕಾರ ಮುಂದಿನ ನಿರ್ಣಯ ಕೈಗೊಳ್ಳುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ದೆಹಲಿ ತಲುಪಿದ ಸಿಎಂ ಬಸವರಾಜ ಬೊಮ್ಮಾಯಿ: ಇಂದು ಮಧ್ಯಾಹ್ನ ಪ್ರಧಾನಿ ಮೋದಿ ಭೇಟಿ
ರಾಜ್ಯ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಬಸವರಾಜ ಬೊಮ್ಮಾಯಿಯವರು ಮೊದಲ ದೆಹಲಿ ಪ್ರವಾಸ ಕೈಗೊಂಡಿದ್ದು ಈಗಾಗಲೇ ರಾಜಧಾನಿ ತಲುಪಿದ್ದಾರೆ. ಅವರನ್ನು ದೆಹಲಿ. ಇಂದಿರಾ ಗಾಂಧಿ ವಿಮಾನ ನಿಲ್ದಾಣದ ಬಳಿ ಹಲವರು ಬರಮಾಡಿಕೊಂಡಿದ್ದಾರೆ.

ಸಂಪುಟ ರಚನೆ ವೇಳೆ ಒತ್ತಡಗಳು ಬರುವುದು ಸಹಜ, ದೆಹಲಿ ವರಿಷ್ಠರ ಭೇಟಿಗೆ ಸಮಯ ಕೇಳಿದ್ದೇನೆ: ಸಿಎಂ ಬಸವರಾಜ ಬೊಮ್ಮಾಯಿ
ಸಂಪುಟ ರಚನೆ ವೇಳೆ ಎಲ್ಲಾ ಸಮುದಾಯದ ಶಾಸಕರಿಂದ ಒತ್ತಡ ಬರುವುದು ಸಹಜ, ಎಲ್ಲರಿಗೂ ಪ್ರಾತಿನಿಧ್ಯ ನೀಡುವುದು ಎಲ್ಲರನ್ನೂ ಸಮಾಧಾನಗೊಳಿಸಿ, ಪ್ರಾದೇಶಿಕ ಸಮತೋಲನ ಕಾಪಾಡಿಕೊಂಡು ಸಚಿವ ಸಂಪುಟ ರಚನೆ ಮಾಡುವುದು ಸವಾಲಿನ ಕೆಲಸ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

