basavaraja bommai

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದು ಯಡಿಯೂರಪ್ಪನವರಿಂದ, ಹೀಗಾಗಿ ಅವರ ಪರವಾಗಿ ಕೆಲಸ ಮಾಡುತ್ತಾರೆ: ಸಿದ್ದರಾಮಯ್ಯ
2023ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳುತ್ತದೆ ಎಂದು ಮನವರಿಕೆಯಾದದ್ದರಿಂದಲೇ ಸಿಎಂ ಸ್ಥಾನದಿಂದ ಯಡಿಯೂರಪ್ಪನವರನ್ನು ಬದಲಾವಣೆ ಮಾಡಲಾಗಿದೆ.ಪ್ರಧಾನಿ ಮೋದಿಯವರೇ ಬಿ ಎಸ್ ಯಡಿಯೂರಪ್ಪನವರನ್ನು ಬದಲಾಯಿಸಿದ್ದಾರೆ ಎಂದು ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಿಮ್ಮ ಗುಣ ನಿಮ್ಮ ಪುತ್ರರಿಗೆ ಎಷ್ಟರ ಮಟ್ಟಿಗೆ ಬಂದಿದೆ ಸಿದ್ದರಾಮಯ್ಯನವರೇ?: ಬಿಜೆಪಿ ತಿರುಗೇಟು
ಮಹಾತ್ಮಾ ಗಾಂಧಿ ಬಹಳ ಒಳ್ಳೆಯವರು, ತಮ್ಮ ನಡೆ-ನುಡಿ, ಕೆಲಸಗಳಿಂದ ಮಹಾತ್ಮರಾದರು, ಆದರೆ ಅವರ ಮಗ ಏನಾದ ಕುಡುಕನಾಗಲಿಲ್ಲವೇ, ಅದೇ ರೀತಿ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಆರ್ ಬೊಮ್ಮಾಯಿಯವರ ಸದ್ಗುಣಗಳು ಅವರ ಪುತ್ರ ಇಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಬರುತ್ತದೆ, ಬರಬಹುದು ಎಂದು ಹೇಳಲು ಆಗುತ್ತದೆಯೇ,ತಂದೆಯ ಗುಣ ಮಕ್ಕಳಿಗೆ ಬರುವುದಿಲ್ಲ, ಅದು ವಂಶವಾಹಿನಿಯಲ

ಸಿಎಂ ಆಯ್ಕೆ ಆಗಿ ಪ್ರಮಾಣವಚನ ಆಯ್ತು, ಇನ್ನು ಸಂಪುಟ ರಚನೆ ಕಸರತ್ತು: ಸಮುದಾಯಗಳಿಗೆ ಪ್ರಾತಿನಿಧ್ಯ ಸಿಗಲು ಒತ್ತಡ
ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ರಚನೆಯಲ್ಲಿ ಜಾತಿ ಮತ್ತು ಸಮುದಾಯ ಪ್ರಾತಿನಿಧ್ಯ ನೀಡುವುದು ಸವಾಲಾಗಿದೆ. ಶೇಕಡಾ 35ರಷ್ಟು ಜನಸಂಖ್ಯೆಯನ್ನು ರಾಜ್ಯದಲ್ಲಿ ಹಿಂದುಳಿದ ಸಮುದಾಯಗಳಿದ್ದು ಸಚಿವ ಸಂಪುಟದಲ್ಲಿ ತಮ್ಮ ಸಮುದಾಯಕ್ಕೆ ಸಿಗುವ ಪ್ರಾತಿನಿಧ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಬೊಮ್ಮಾಯಿ ಆಯ್ಕೆ: ಹೈಕಮಾಂಡ್ ಮೇಲೆ ಯಡಿಯೂರಪ್ಪ ಕೈ ಮೇಲು, ಪ್ರಭಾವ ಉಳಿಸಿಕೊಂಡ 'ರಾಜಾಹುಲಿ'
ರಾಜ್ಯದಲ್ಲಿ ಸಿಎಂ ನಾಯಕತ್ವ ಬದಲಾವಣೆಯ ಹೈಡ್ರಾಮಕ್ಕೆ ಕೊನೆಗೂ ಫುಲ್ ಸ್ಟಾಪ್ ಬಿದ್ದಿದೆ. ಬಿ ಎಸ್ ಯಡಿಯೂರಪ್ಪನವರು ಕಣ್ಣೀರಿನ ವಿದಾಯ ಹಾಕಿದ್ದಾರೆ.

LIVE: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರತಿಜ್ಞಾವಿಧಿ ಸ್ವೀಕಾರ
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಬುಧವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರಿಗೆ ರಾಜ್ಯಪಾಲ ಥಾವರ್ ಚಂದ್ರ ಗೆಹ್ಲೋಟ್ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಿದರು.

ಬಡವರ, ರೈತರ ಕಣ್ಣೀರು ಒರೆಸುವ ಕೆಲಸ ಮಾಡುತ್ತೇನೆ, ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುತ್ತೇನೆ: ನೂತನ ಸಿಎಂ ಬಸವರಾಜ ಬೊಮ್ಮಾಯಿ
ರಾಜ್ಯದ ಜನತೆ ಎರಡು ಬಾರಿ ಕೋವಿಡ್ ಸಂಕಷ್ಟವನ್ನು ಮತ್ತು ಅತಿವೃಷ್ಟಿಯಿಂದ ಪ್ರವಾಹ, ನೆರೆ ಪರಿಸ್ಥಿತಿಯನ್ನು ಎದುರಿಸಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ನ್ಯಾಯ, ಸರ್ಕಾರದ ಸೌಲಭ್ಯ ಸಿಗುವಂತೆ ಮತ್ತು ಪ್ರಾದೇಶಿಕ ಅಸಮತೋಲನವನ್ನು ಹೋಗಲಾಡಿಸಲು ಮುಖ್ಯಮಂತ್ರಿಯಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ

'ಪಕ್ಷ ಮತ್ತು ಕರ್ನಾಟಕಕ್ಕೆ ನಿಮ್ಮ ಕೊಡುಗೆ ಸ್ಮರಣೀಯ': ಯಡಿಯೂರಪ್ಪರನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ
ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕರ್ನಾಟಕದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಹೊತ್ತಿನ ನಂತರ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.

ನೂತನ ಸಿಎಂ ಬಸವರಾಜ ಬೊಮ್ಮಾಯಿ ಮೂಲಕ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಕನಸು ನನಸಾಗುವುದೇ?
ಹುಬ್ಬಳ್ಳಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಸಂಭ್ರಮಾಚರಣೆ ನಡೆಯುತ್ತಿದೆ. ಈ ಭಾಗದ ಹಲವು ವರ್ಷಗಳ ಅಭಿವೃದ್ಧಿ ಕನಸು ಚಿಗುರೊಡೆದಿದೆ.

ದಲಿತರನ್ನು ಎತ್ತಿ ಕಟ್ಟಲು ಯತ್ನಿಸಿದ ಇಂದ್ರಜಿತ್ ವಿರುದ್ಧ ಕ್ರಮ ಕೈಗೊಳ್ಳಿ; ಗೃಹ ಸಚಿವರಿಗೆ ಟಿಜೆ ಅಬ್ರಾಹಂ ದೂರು
ನಿರ್ದೇಶಕ ಇಂದ್ರಜಿತ್ ಲಂಕೇಶ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರು ಮಂಗಳವಾರ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ದೂರು ನೀಡಿದ್ದಾರೆ.

