basavaraja bommai

ಬೇರೆ ರಾಜ್ಯಗಳಲ್ಲಿ ಎಸಿಬಿ ಇಟ್ಕೊಂಡು ಇಲ್ಲಿ ಹರಿಶ್ಚಂದ್ರನ ಮೊಮ್ಮಕ್ಕಳ ರೀತಿ ಮಾತಾಡ್ತಾರೆ; ರೀ ಡೂ ಪದ ಬಳಸಿದ್ದು ನಾವಲ್ಲ, ಹೈಕೋರ್ಟ್: ಸಿದ್ದರಾಮಯ್ಯ
ಬಸವರಾಜ ಬೊಮ್ಮಾಯಿ ಅವರು ಜವಾಬ್ದಾರಿಯುತ ಮುಖ್ಯಮಂತ್ರಿ ಹುದ್ದೆಯಲ್ಲಿದ್ದುಕೊಂಡು ಹಿಂದಿನ ಕಾಂಗ್ರೆಸ್ ಸರ್ಕಾರ ತನ್ನ ಮೇಲಿನ ಭ್ರಷ್ಟಾಚಾರದ ಆರೋಪಗಳನ್ನು ಮುಚ್ಚಿಕೊಳ್ಳಲು ಎಸಿಬಿ ರಚನೆ ಮಾಡಿತ್ತು ಎಂದು ಸುಳ್ಳು ಹೇಳಿರುವುದು ಖಂಡನೀಯ

ಕಾರ್ಯಕ್ರಮಕ್ಕೆ ತಡವಾಗಿ ಬಂದ ಬೊಮ್ಮಾಯಿ; ಸನ್ಮಾನ ತಿರಸ್ಕರಿಸಿದ ಟೆನಿಸ್ ದಿಗ್ಗಜ ಬೋರ್ಗ್; ಸಿಎಂ ಗೆ ಮುಖಭಂಗ
ಸಮಾರಂಭಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದೂವರೆ ಗಂಟೆ ತಡವಾಗಿ ಆಗಮಿಸಿದ ಹಿನ್ನೆಲೆಯಲ್ಲಿ ಟೆನಿಸ್ ದಿಗ್ಗಜ ಬ್ಯೋನ್ ಬೋರ್ಗ್ ಅವರು ಮಂಗಳವಾರ ಕರ್ನಾಟಕ ರಾಜ್ಯ ಲಾನ್ ಟೆನಿಸ್ ಸಂಸ್ಥೆ ಯಲ್ಲಿ ಸನ್ಮಾನ ಸ್ವೀಕರಿಸಲು ನಿರಾಕರಿಸಿದ್ದಾರೆ.

ಮತದಾರರ ಸೆಳೆಯುವತ್ತ ಸಿಎಂ ಬೊಮ್ಮಾಯಿ ಚಿತ್ತ: ರೇಷ್ಮೆ ಕೃಷಿಗೆ ಭರಪೂರ ಅನುದಾನ
2023ರ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರೈತಾಪಿ ವರ್ಗಕ್ಕೆ ಬರಪೂರ ಕೊಡುಗೆ ಘೋಷಿಸಿದ್ದಾರೆ.

ಕರ್ನಾಟಕ ಬಜೆಟ್- ಮಹಿಳೆಯರೇ ಟಾರ್ಗೆಟ್: ಸ್ತ್ರೀಯರ ರಕ್ಷಣೆಗಾಗಿ ಸೇಫ್ ಸಿಟಿ ಪ್ರಾಜೆಕ್ಟ್; ಜನನಿಬಿಡ ಪ್ರದೇಶದಲ್ಲಿ SHE-ಟಾಯ್ಲೆಟ್!
ರಾಜ್ಯ ಬಜೆಟ್ ಮಂಡನೆ ಅನ್ವಯ 1 ಲಕ್ಷ ಮಹಿಳೆಯರಿಗೆ ಉಚಿತ ಕೌಶಲ್ಯ ತರಬೇತಿ ನೀಡುವ ಬಗ್ಗೆ ಸಿಎಂ ಬೊಮ್ಮಾಯಿ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಇದು ಮನೆಯಲ್ಲೇ ಇರುವ ಅನೇಕ ಗೃಹಿಣಿಯರು ಹಾಗೂ ಹೆಣ್ಣು ಮಕ್ಕಳಿಗೆ ಸಹಾಯ ಮಾಡಲಿದೆ.

ರಾಮನಗರಕ್ಕೆ ಬಂಪರ್- ವಿರೋಧ ಪಕ್ಷಗಳಿಗೆ ಟಕ್ಕರ್: ರಾಮಮಂದಿರ ನಿರ್ಮಾಣ ಘೋಷಿಸಿದ ಚೀಫ್ ಮಿನಿಸ್ಟರ್!
2023-24ನೇ ಸಾಲಿನ ರಾಜ್ಯ ಬಜೆಟ್ ಅನ್ನು ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ್ದಾರೆ. ಬಜೆಟ್‌ನಲ್ಲಿ ರಾಮನಗರಕ್ಕೆ ವಿಶೇಷ ಕೊಡುಗೆ ನೀಡಲಾಗಿದೆ. ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಬಿಜೆಪಿ ಸರ್ಕಾರ ತೀರ್ಮಾನಿಸಿದೆ.

ಓಲೈಕೆ ರಾಜಕಾರಣ ಮಾಡಿದ್ದಕ್ಕೆ 2018ರಲ್ಲಿ ಸಿದ್ದರಾಮಯ್ಯರನ್ನು ರಾಜ್ಯದ ಜನ ಮನೆಗೆ ಕಳುಹಿಸಿದರು: ಸಿಎಂ ಬೊಮ್ಮಾಯಿ
ಕಳೆದ 20 ವರ್ಷಗಳಿಂದ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದ ಸಿದ್ದರಾಮಯ್ಯನವರನ್ನು 2018ರಲ್ಲಿ ಜನರು ಮನೆಗೆ ಕಳುಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

ಬೊಮ್ಮಾಯಿ ಚುನಾವಣಾ ಲಹರಿ: ಆಹ್ವಾನ ಬಂದ ಎಲ್ಲಾ ಕಾರ್ಯಕ್ರಮಗಳಿಗೂ ಹಾಜರಿ; ಕಾಮನ್ ಮ್ಯಾನ್ ಸಿಎಂ ಪಟ್ಟ ಉಳಿಸಿಕೊಳ್ಳಲು ತಯಾರಿ!
ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಮಾಜದ ಎಲ್ಲಾ ವರ್ಗಗಳೊಂದಿಗೆ ಸಂಪರ್ಕ ಸಾಧಿಸಲು ಬರುತ್ತಿರುವ ಅವಕಾಶಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಳಸಿಕೊಳ್ಳುತ್ತಿದ್ದಾರೆ.

ನಾನೇನು ಆಶ್ವಾಸನೆ ಕೊಡುವ ಸಿಎಂ ಅಲ್ಲ, ಕೊಡಿ ಇಲ್ಲಿ: ಸಿಡಿಮಿಡಿಗೊಂಡು ಸ್ವಾಮೀಜಿ ಕೈಯಿಂದ ಮೈಕ್ ಕಸಿದ ಬಸವರಾಜ ಬೊಮ್ಮಾಯಿ!
ಭರವಸೆಯನ್ನಷ್ಟೆ ಕೊಟ್ಟರೆ ಒಪ್ಪುವುದಿಲ್ಲ’ ಎಂದು ಕಾಗಿನೆಲೆ ಹೊಸದುರ್ಗ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ ಹೇಳುತ್ತಿದ್ದಂತೆ, ಅವರ ಕೈಯಿಂದ ಮೈಕ್ ಕಸಿದುಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ ಪ್ರಸಂಗ ಗುರುವಾರ ನಡೆಯಿತು.

ಬೊಮ್ಮಾಯಿ ಅಂಕಲ್, ಸ್ಯಾಂಕಿ ಮೇಲ್ಸೇತುವೆ ಬೇಡ: ಮಕ್ಕಳ ಪತ್ರ !
ಉದ್ದೇಶಿತ ಸ್ಯಾಂಕಿ ಮೇಲ್ಸೇತುವೆಯನ್ನು ಕೈಬಿಡುವಂತೆ ಒತ್ತಾಯಿಸಿ, ರಾಜ್ಯ ಸರ್ಕಾರಕ್ಕೆ ಸುಮಾರು 2,000 ವಿದ್ಯಾರ್ಥಿಗಳು ಶುಕ್ರವಾರ ವಿಧಾನಸೌಧದಲ್ಲಿರುವ ಮುಖ್ಯಮಂತ್ರಿಗಳ ಕಚೇರಿಗೆ ಕೈಬರಹದ ಪೋಸ್ಟ್‌ಕಾರ್ಡ್‌ಗಳನ್ನು ಪೋಸ್ಟ್ ಮಾಡಿದ್ದಾರೆ.

