ರಾಜ್ಯಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ: ಮುಖ್ಯ ಎಂಜಿನಿಯರ್ ಪ್ರಹ್ಲಾದ್'ಗೆ ಮತ್ತೊಮ್ಮೆ ನೋಟಿಸ್ ಜಾರಿಗೆ ಪೊಲೀಸರು ಮುಂದು!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕ್ವಾಲಿಟಿ ಅಶ್ಯೂರೆನ್ಸ್ ಲ್ಯಾಬ್ನಲ್ಲಿ ಆಗಸ್ಟ್ 11 ರಂದು ಸಂಭವಿಸಿದ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಎಂಜಿನಿಯರ್ ಪ್ರಹ್ಲಾದ್ ಅವರಿಗೆ ಎರಡನೇ ಬಾರಿ ನೋಟಿಸ್ ಜಾರಿಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.