ರಾಜ್ಯರಸ್ತೆಗಳಲ್ಲಿ ಭಿಕ್ಷೆ ಬೇಡುವ ಮಕ್ಕಳ ಸಮೀಕ್ಷೆಗೆ ಬಿಬಿಎಂಪಿ ಮುಂದು!
ಪಾಲಿಕೆ ವ್ಯಾಪ್ತಿಯಲ್ಲಿ ಭಿಕ್ಷೆ ಬೇಡುವ ಮತ್ತು ಟ್ರಾಫಿಕ್ ಸಿಗ್ನಲ್'ಗಳಲ್ಲಿ ಆಟಿಕೆ ವಸ್ತುಗಳನ್ನು ಮಾರಾಟ ಮಾಡುವ ಹಾಗೂ ಕೊಳಗೇರಿಗಳಲ್ಲಿ ವಾಸಿಸುವ ಮಕ್ಕಳ ಬಗ್ಗೆ ಸಮೀಕ್ಷೆ ನಡೆಸಿ ತ್ವರಿತವಾಗಿ ಪಟ್ಟಿ ಸಿದ್ಧಪಡಿಸುವಂತೆ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.