ರಾಜ್ಯಬೇಕರಿ ತೆರೆಯಲು ಅವಕಾಶ: ಪಾರ್ಸೆಲ್ ಕೊಡಲು ಮಾತ್ರ ಅನುಮತಿ
ಕೊರೋನಾ ವೈರಸ್ ಭೀತಿಯಿಂದಾಗಿ ಇಡೀ ದೇಶವೇ ಲಾಕ್ ಡೌನ್ ಆಗಿದೆ. ರಾಜ್ಯದಲ್ಲಿಯೂ ಕೋವಿಡ್-19 ಹಿನ್ನೆಲೆಯಲ್ಲಿ ಲಾಕ್ಡೌನ್ ಜಾರಿಯಲ್ಲಿದೆ. ಇದರಿಂದ ಮಕ್ಕಳು, ವೃದ್ಧರು, ರೋಗಿಗಳು ಹಾಗೂ ಜನಸಾಮಾನ್ಯರಿಗೆ ತೊಂದರೆ ಆಗಿದೆ. ಹೀಗಾಗಿ ರಾಜ್ಯದಲ್ಲಿ ಬೇಕರಿ ಉತ್ಪನ್ನಗಳನ್ನು ತಯಾರಿಸಲು ಹಾಗೂ ಮಾರಾಟ ಮಾಡಲು ಅನುಮತಿ ಕೊಡಲಾಗಿದೆ.