Belagavi

ಅಲ್ಪಸಂಖ್ಯಾತರ ಮತ ಕಿತ್ತುಕೊಳ್ಳುತ್ತಿರುವ ಬಿಜೆಪಿಯ ಅಸಲಿ ಮುಖವಾಡ ಬಯಲು: ಬೆಳಗಾವಿಯಲ್ಲಿ ರಾಜಕೀಯ ವಿವಾದ ಪಡೆದ SIR ಪ್ರಕ್ರಿಯೆ!
'ಫಾರ್ಮ್-7' ಅರ್ಜಿಗಳಲ್ಲಿ ನಮೂದಿಸಲಾದ ಎಲ್ಲಾ 200 ಹೆಸರುಗಳು ಮುಸ್ಲಿಂ ಮತದಾರರಿಗೆ ಸೇರಿವೆ ಎಂದೂ ಅವರು ಪ್ರತಿಪಾದಿಸಿದರು. ಆದರೆ, ಈ ಆರೋಪಗಳು ಇನ್ನೂ ದೃಢಪಟ್ಟಿಲ್ಲ.

ಬೆಳಗಾವಿ: 6 ಮಂದಿ ಸಾವಿನ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್; ವ್ಯಕ್ತಿ ಕೈಯಲ್ಲಿ ಬಕೆಟ್; CCTVಯಲ್ಲಿ ಸಿಕ್ತು ಸ್ಫೋಟಕ ತಿರುವು!
ಬೆಳಗಾವಿ ನಗರದ ಹೃದಯಭಾಗದಲ್ಲಿರುವ ಗಲ್ಲಿಯೊಂದರ ಶೆಡ್‌ವೊಂದರಲ್ಲಿ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ ಅಗ್ನಿ ದುರಂತದ ಕೆಲ ದಿನಗಳ ನಂತರ ಲಭ್ಯವಾದ CCTV ದೃಶ್ಯಾವಳಿಯು, ಈ ದುರಂತಕ್ಕೆ ಹೊಸ ತಿರುವು ಕೊಟ್ಟಿದೆ.

ಬೆಳಗಾವಿ ಅಗ್ನಿ ದುರಂತ: ಗಾಯಗೊಂಡಿದ್ದ ತಂದೆ-ಮಗ ಸಾವು; ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆ!
ತೀವ್ರವಾಗಿ ಸುಟ್ಟ ಗಾಯಗಳೊಂದಿಗೆ ಗಂಭೀರ ಸ್ಥಿತಿಯಲ್ಲಿದ್ದ ಗಜಾನನ ಹಾಗೂ ರೋಷನ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರೂ ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಬೆಳಗಾವಿ: ಆಸ್ತಿ ವಿವಾದ ಸಂಬಂಧ ಗ್ರಾಮ ಪಂಚಾಯ್ತಿಗೆ ಬಂದಿದ್ದ ಮಾಜಿ ಯೋಧ, ಪುತ್ರಿಯ ಬರ್ಬರ ಹತ್ಯೆ
ಗ್ರಾಮ ಪಂಚಾಯತಿ ಕಚೇರಿಗೆ ಆಸ್ತಿ ಪಾಲು ಮಾಡಲು ಅರ್ಜಿ ಸಲ್ಲಿಸಲು ಬಂದಿದ್ದ ತಂದೆ ಮತ್ತು ಮಗಳನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಬೆಳಗಾವಿಯ ಕಿತ್ತೂರಿನ ಅವರಾದಿ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿಯಲ್ಲಿ ಭೀಕರ ಅಗ್ನಿ ಅವಘಡ: ಫ್ರಿಡ್ಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರು ಸಜೀವ ದಹನ; Video
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಕ್ಷಣಾರ್ಧದಲ್ಲಿ ಬೆಂಕಿ ಇಡೀ ಮನೆಗೆ ಆವರಿಸಿದೆ. ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಭಸ್ಮವಾಗಿದ್ದು, ಮನೆಯಲ್ಲಿದ್ದವರು ಹೊರಬರಲಾರದೆ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಪ್ರಾಣಬಿಟ್ಟಿದ್ದಾರೆ.

ಬೆಳಗಾವಿ: ಬೈಕ್-ಸಾರಿಗೆ ಬಸ್ ನಡುವೆ ಅಪಘಾತ; ಮೂವರು ಸ್ಥಳದಲ್ಲೇ ಸಾವು!
ಮೃತರನ್ನು ಸ್ಥಳೀಯ ವಿನಯ್ ಜೋಗೆನ್ನವರ ಹಾಗೂ ಆಕಾಶ ಜಾಧವ ಎಂದು ಗುರುತಿಸಲಾಗಿದೆ. ಮತ್ತೋರ್ವ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಕಾರು ಓಡಿಸೋಕೂ ಹೆಲ್ಮೆಟ್ ಬೇಕಾ? ವಾಟ್ಸಪ್‌ಗೆ ಬಂದ ಟ್ರಾಫಿಕ್ ಫೈನ್ ನೋಡಿ ಬೆಚ್ಚಿಬಿದ್ದ ಚಾಲಕ! ಕಾರಿನಲ್ಲಿ ಹೆಲ್ಮೆಟ್ ಹಾಕಿಲ್ಲವೆಂದು ಬಿತ್ತು 500 ರೂ ದಂಡ
ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಪತ್ತೆ ಹಚ್ಚಲು ಅಳವಡಿಸಲಾಗಿರುವ AI ಕ್ಯಾಮೆರಾವೊಂದು ಭಾರಿ ಯಡವಟ್ಟು ಮಾಡಿದ್ದು, ಕಾರು ಚಾಲಕನಿಗೆ ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣ ನೀಡಿ ₹500 ದಂಡದ ನೋಟಿಸ್ ಕಳುಹಿಸಿದೆ. ಆ ಕುರಿತ ವರದಿ ಇಲ್ಲಿದೆ:

ಬೆಳಗಾವಿ ನೂತನ ಪೊಲೀಸ್ ಆಯುಕ್ತರಾಗಿ ಪ್ರಕಾಶ ನಿಕ್ಕಂ ಅಧಿಕಾರ ಸ್ವೀಕಾರ
ಭೂಷಣ ಬೊರಸೆ ಇಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಅದನ್ನು ಮುಂದುವರಿಸಿಕೊಂಡು ಹೋಗುವೆ. ಸಂಚಾರ ವ್ಯವಸ್ಥೆ ಮತ್ತು ಸೈಬರ್ ಕ್ರೈಂ ನಿಯಂತ್ರಣಕ್ಕೆ ನಿಗಾ ವಹಿಸುವೆ ಎಂದು ಹೇಳಿದರು.

ಅಥಣಿ: ಭೀಕರ ಅಪಘಾತದಿಂದ RSS ಹಿರಿಯ ಮುಖಂಡ ಅರವಿಂದ್ ರಾವ್ ದೇಶಪಾಂಡೆ ಪಾರು; Video
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಎರಡು ದಿನಗಳ ಹಿಂದೆ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಪಘಾತದ ದೃಶ್ಯವು ಸಮೀಪದ ಮನೆಯೊಂದರ ಸಿಸಿಟಿವಿ (CCTV) ಕ್ಯಾಮರಾದಲ್ಲಿ ಸೆರೆಯಾಗಿದೆ.

