Bellary

ಬಳ್ಳಾರಿಯಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್ ಮೈದಾನ ನಿರ್ಮಾಣ; ಸ್ಥಳೀಯ ಪ್ರತಿಭೆಗಳಿಗೆ ಸಹಾಯ
ಗಣಿ ನಾಡು ಬಳ್ಳಾರಿಯಲ್ಲಿ ಶೀಘ್ರದಲ್ಲೇ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್ ಮೈದಾನ ನಿರ್ಮಾಣವಾಗಲಿದ್ದು, ಇದರಿಂದ ಸ್ಥಳೀಯ ಕ್ರಿಕೆಟ್ ಪ್ರತಿಭೆಗಳಿಗೆ ನೆರವಾಗಲಿದೆ.

ಖ್ಯಾತ ಹೃದಯ ತಜ್ಞ ಡಾ. ಬಿ.ಕೆ. ಶ್ರೀನಿವಾಸಮೂರ್ತಿ ವಿಧಿವಶ
ಖ್ಯಾತ ಹೃದಯ ತಜ್ಞರು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ. ಬಿ.ಕೆ. ಶ್ರೀನಿವಾಸಮೂರ್ತಿ (80) ಇಂದು ನಿಧನರಾದರು.

ಬಳ್ಳಾರಿ: ಮಣ್ಣಿನ ಗೋಡೆ ಕುಸಿದು ದಂಪತಿ ಸಾವು
ಜಿಟಿ ಜಿಟಿ ಮಳೆಗೆ ಮಣ್ಣಿನ ಗೋಡೆ ಕುಸಿದ ಪರಿಣಾಮ ದಂಪತಿ ಮೃತಪಟ್ಟಿರುವ ದಾರುಣ ಘಟನೆ ಬಳ್ಳಾರಿಯ ಕೌಲ್ ಬಜಾರ್ ಪ್ರದೇಶದ ಅದೋನಿ ಸ್ಟ್ರೀಟ್ ನಲ್ಲಿ ಸಂಭವಿಸಿದೆ.

ಬಳ್ಳಾರಿ: ಹೊಲದಲ್ಲಿ ಬೆಳೆದಿದ್ದ 1.75ಲಕ್ಷ ರೂ ಮೌಲ್ಯದ ಗಾಂಜಾ ವಶ, ಓರ್ವನ ಬಂಧನ
ಮೆಣಸಿನಕಾಯಿ ಬೆಳೆಯೊಂದಿಗೆ ಅಕ್ರಮವಾಗಿ ಗಾಂಜಾ ಗಿಡ ಬೆಳೆದಿದ್ದ ರೈತನೋರ್ವನನ್ನು ಪೊಲೀಸರು ಬಂಧಿಸಿ 1.75ಲಕ್ಷ ರೂ ಮೌಲ್ಯದ ಗಾಂಜಾ ಬೆಳೆ ವಶಪಡಿಸಿಕೊಂಡಿದ್ದಾರೆ.

ಸಂತ್ರಸ್ತರಿಗೆ ಯಾವುದೇ ರೀತಿಯ ಸಮಸ್ಯೆಗಳಾಗದಂತೆ ಸೌಕರ್ಯ ಒದಗಿಸಲಾಗುತ್ತದೆ: ಸಿಎಂ ಯಡಿಯೂರಪ್ಪ
ಪ್ರವಾಹದಿಂದ ನಲುಗಿರುವ ಸಂತ್ರಸ್ತರಿಗೆ ಯಾವುದೇ ರೀತಿಯ ಸಮಸ್ಯೆಗಳಾಗದಂತೆ ಸೌಕರ್ಯಗಳನ್ನು ಒದಗಿಸಲಾಗುತ್ತದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತೇನೆಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ.

ಸೂಪರ್ ಸ್ಪೆಷಾಲಿಟಿ ಟ್ರಾಮಾ ಸೆಂಟರ್ ಬಳ್ಳಾರಿ, ಸುತ್ತಮುತ್ತಲ ರೋಗಿಗಳಿಗೆ ಸಂಜೀವಿನಿ: ಸಿಎಂಯಡಿಯೂರಪ್ಪ
ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯಡಿ ಬಳ್ಳಾರಿ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ವಿಮ್ಸ್)ನಲ್ಲಿ "ಸೂಪರ್ ಸ್ಪೆಷಾಲಿಟಿ ಟ್ರಾಮಾ ಘಟಕ"ವನ್ನು ಸೋಮವಾರ...

ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಕೋವಿಡ್ ಸೋಂಕು, ಬಳ್ಳಾರಿ ಭೇಟಿ ರದ್ದು
ಮಾಜಿ ಸಚಿವ, ಅಕ್ರಮ ಗಣಿಗಾರಿಕೆ ಆರೋಪ ಹೊತ್ತಿರಿವ ಗಾಲಿ ಜನಾರ್ಧನ ರೆಡ್ಡಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಒಂದೂವರೆ ವರ್ಷದ ನಂತರ ಬಳ್ಳಾರಿಗೆ ಬರಲು ಜನಾರ್ಧನ ರೆಡ್ಡಿಗೆ ಸುಪ್ರೀಂ ಕೋರ್ಟ್ ಅನುಮತಿ
ಆರೋಗ್ಯ ಸಚಿವ ಶ್ರೀರಾಮುಲು ಅವರ ತಾಯಿಯ ಕೊನೆಯ ವಿಧಿಗಳ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಾಜಿ ಸಚಿವ ಮತ್ತುಅಕ್ರಮ ಗಣಿಗಾರಿಕೆ ಆರೋಪ ಹೊತ್ತ ಗಾಲಿ ಜನಾರ್ಧನ ರೆಡ್ಡಿ ಅವರಿಗೆ ಎರಡು ದಿನಗಳ ಕಾಲ ಬಳ್ಳಾರಿಗೆ ಭೇಟಿ ಕೊಡಲು ಸುಪ್ರೀಂ ಕೋರ್ಟ್ ಅನುಮತಿಸಿದೆ. ಈ ಹಿನ್ನೆಲೆ ಶುಕ್ರವಾರ ಮಧ್ಯಾಹ್ನ ರೆಡ್ಡಿ ಬಳ್ಳಾರಿಗೆ ಆಗಮಿಸಲಿದ್ದಾರೆ.

ಕಾಲುವೆಯಲ್ಲಿ ಕೊಚ್ಚಿ ಹೋಗುತಿದ್ದ ವೃದ್ದೆಯನ್ನ ಪ್ರಾಣದ ಹಂಗು ತೊರೆದು ರಕ್ಷಿಸಿದಯುವಕ
ತುಂಗಭದ್ರ ಹೆಚ್.ಎಲ್.ಸಿ.ಕಾಲುವೆಯಲ್ಲಿ ಕೊಚ್ಚಿ ಹೋಗುತಿದ್ದ ವೃದ್ದೆಯನ್ನ ಪ್ರಾಣದ ಹಂಗು ತೊರೆದು ಯುವಕನೊಬ್ಬ ರಕ್ಷಿಸಿರುವ ಘಟನೆ ಬಳ್ಳಾರಿ ಜಿಲ್ಲೆ ಹೊಸಪೇಟೆ ನಗರದ ಆರ್.ಟಿ.ಓ.ಕಛೇರಿಯ ಮುಂದೆ ನಡೆದಿದೆ.

