ಕ್ರಿಕೆಟ್WPL: ಆರ್ ಸಿಬಿ ಮುಖ್ಯ ಕೋಚ್ ಆಗಿ ಆಸ್ಟ್ರೇಲಿಯಾದ ಲ್ಯೂಕ್ ವಿಲಿಯಮ್ಸ್ ನೇಮಕ
ಮಹಿಳಾ ಪ್ರೀಮಿಯರ್ ಲೀಗ್ನ ಎರಡನೇ ಸೀಸನ್ಗೆ ಮುನ್ನ ಆಸ್ಟ್ರೇಲಿಯಾದ ಲ್ಯೂಕ್ ವಿಲಿಯಮ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮುಖ್ಯ ಕೋಚ್ ಆಗಿ ನೇಮಕವಾಗಿದ್ದಾರೆ. ಈ ವರ್ಷದ ಆರಂಭದಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಆರ್ ಸಿಬಿ ಕಳಪೆ ಪ್ರದರ್ಶನ ನಂತರ ಬೆನ್ ಸಾಯರ್ ಅವರನ್ನು ಬದಲಾಯಿಸಲಾಗಿದೆ ಎಂದು ವರದಿಯಾಗಿದೆ.