Bengaluru airport

ಇಂಡಿಗೋ ವಿಮಾನದಲ್ಲಿ ಸಿಬ್ಬಂದಿಯೊಂದಿಗೆ ಅನುಚಿತ ವರ್ತನೆ; ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬಂಧನ!
ಜೈಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ಕುಡಿದ ಅಮಲಿನಲ್ಲಿ ಅನೇಕ ಎಚ್ಚರಿಕೆಗಳ ಹೊರತಾಗಿಯೂ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

Bengaluru Airport: ವಿಮಾನದಲ್ಲೇ ವಜ್ರಾಭರಣ ಮರೆತ ಮಹಿಳೆ: ಪೊಲೀಸರು-ಭದ್ರತಾ ಸಿಬ್ಬಂದಿ ಬೃಹತ್ ಶೋಧ ಕಾರ್ಯ!
ಮಹಿಳೆಯೊಬ್ಬರು ಸುಮಾರು 5 ಲಕ್ಷ ರೂ ಮೌಲ್ಯದ ವಜ್ರಾಭರಣಗಳನ್ನು ವಿಮಾನದಲ್ಲೇ ಮರೆತ ಪರಿಣಾಮ ಪೊಲೀಸರು-ಭದ್ರತಾ ಸಿಬ್ಬಂದಿ ಬೃಹತ್ ಶೋಧ ಕಾರ್ಯಾಚರಣೆ ನಡೆಸಿದ್ದು, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದೊಡ್ಡ ಹೈಡ್ರಾಮಾವೇ ನಡೆದಿದೆ.

ವಿಮಾನ ನಿಲ್ದಾಣದಲ್ಲಿ ಪಾರದರ್ಶಕ ಗಾಜಿಗೆ ಗುದ್ದಿಕೊಂಡು ಮಹಿಳೆಗೆ ಗಾಯ: ಮೂಗಿನ ಮೂಳೆ ಮುರಿತ, ಶಸ್ತ್ರಚಿಕಿತ್ಸೆಗೆ ವೈದ್ಯರ ಸಲಹೆ!
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಾರದರ್ಶಕ ಗಾಜಿಗೆ ಗುದ್ದಿಕೊಂಡು ಗಾಯಗೊಂಡಿದ್ದ ಮಹಿಳೆಯ ಮೂಗಿನ ಮೂಳೆ ಮುರಿತಗೊಂಡಿದ್ದು, ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದಾರೆಂದು ತಿಳಿದುಬಂದಿದೆ.

ಪಾರದರ್ಶಕ ಗಾಜಿಗೆ ಗುದ್ದಿಕೊಂಡು ಗಾಯ: ಸಮಯಕ್ಕೆ ಸಿಗದ ವೈದ್ಯರು, ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹಿಡಿಶಾಪ ಹಾಕಿದ ಮಹಿಳಾ ಪ್ಯಾಸೆಂಜರ್!
ತುರ್ತು ಸಮಯದಲ್ಲಿ ಚಿಕಿತ್ಸೆ ಪಡೆಯಲು ವೈದ್ಯರು ಸಿಗದ ಕಾರಣ ಮಹಿಳಾ ಪ್ರಯಾಣಿಕರೊಬ್ಬರು ಬೆಂಗಳೂರು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಹಿಡಿಶಾಪ ಹಾಕಿದ ಘಟನೆಯೊಂದು ವರದಿಯಾಗಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2.5 ಕೋಟಿ ರೂ. ಮೌಲ್ಯದ ಚಿನ್ನ ಜಪ್ತಿ
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅಕ್ರಮವಾಗಿ ಸಾಗಿಸುತ್ತಿದ್ದ 2.5 ಕೋಟಿ ರೂಪಾಯಿ ಮೌಲ್ಯದ ನಾಲ್ಕು ಕೆಜಿಗೂ ಹೆಚ್ಚು ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಓಡಾಟ ಶೇ.32 ರಷ್ಟು ಏರಿಕೆ
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಓಡಾಟ ಏರಿಕೆ ಮುಂದುವರಿದಿದ್ದು, ಹಿಂದಿನ ವರ್ಷದ ಇದೇ ಅವಧಿಗೆ ಹೋಲಿಸಿದರೆ ಈ ಹಣಕಾಸು ವರ್ಷದ ಮೊದಲಾರ್ಧದಲ್ಲಿ 32 ಪ್ರತಿಶತದಷ್ಟು ಹೆಚ್ಚಳವನ್ನು ದಾಖಲಿಸಿದೆ ಎಂದು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ) ದ ಅಂಕಿಅಂಶಗಳ ವರದಿ ಸೂಚಿಸುತ್ತಿದೆ.

12 ಕೋಟಿ ರೂ. ಮೌಲ್ಯದ ಕೊಕೇನ್ ಸಾಗಣೆಗೆ ಯತ್ನ; ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೀನ್ಯಾದ ಮಹಿಳೆ ಬಂಧನ
ಸೋಮವಾರ ಬೆಳಗ್ಗೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ 1.02 ಕೆಜಿ ಹೈಗ್ರೇಡ್ ಕೊಕೇನ್ ಕಳ್ಳಸಾಗಣೆ ಮಾಡಲು ಯತ್ನಿಸಿದ ಕೀನ್ಯಾ ಮೂಲದ ಮಹಿಳೆಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಬಂಧಿಸಿದೆ.

ಬ್ಯಾಂಕಾಕ್ ನಿಂದ ಬೆಂಗಳೂರಿಗೆ ಕಳ್ಳಸಾಗಣೆ: 70 ಕಿಂಗ್ ಕೋಬ್ರಾ ಮತ್ತು ಹೆಬ್ಬಾವುಗಳ ರಕ್ಷಣೆ, 6 ಮಂಗಗಳ ಸಾವು
ಅಳಿವಿನಂಚಿನಲ್ಲಿರುವ ವನ್ಯಜೀವಿಗಳನ್ನು ಬ್ಯಾಂಕಾಕ್ ನಿಂದ ಬೆಂಗಳೂರಿಗೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಅವುಗಳನ್ನು ವಶಕ್ಕೆ ಪಡೆದಿದ್ದಾರೆ.

ಆಗಸ್ಟ್ 31ರಿಂದ KIA ಟರ್ಮಿನಲ್ 2ನಿಂದ ಅಂತಾರಾಷ್ಟ್ರೀಯ ವಿಮಾನ ಕಾರ್ಯಾಚರಣೆ ಆರಂಭ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನ (ಬಿಎಲ್‌ಆರ್ ಏರ್‌ಪೋರ್ಟ್) ಟರ್ಮಿನಲ್ 2 (ಟಿ2) ತನ್ನ ಅಂತಾರಾಷ್ಟ್ರೀಯ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಸಿದ್ಧವಾಗಿದೆ.

