Bengaluru court

ಬಿಜೆಪಿ ಟಿಕೆಟ್ ಹಗರಣ: ಚೈತ್ರಾ ಕುಂದಾಪುರ ಸೇರಿದಂತೆ 7 ಆರೋಪಿಗಳಿಗೆ ಅಕ್ಟೋಬರ್ 6 ರವರೆಗೆ ನ್ಯಾಯಾಂಗ ಬಂಧನ!
ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಐದು ಕೋಟಿ ರೂಪಾಯಿ ವಂಚನೆ ಎಸಗಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಅಕ್ಟೋಬರ್ 6ರವರೆಗೆ ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.

ವೃದ್ಧ ದಂಪತಿಗೆ ಅನಾನುಕೂಲ: 1.48 ಲಕ್ಷ ರೂಪಾಯಿ ಪರಿಹಾರ ನೀಡಲು ಏರ್ ಇಂಡಿಯಾ, ಮೇಕ್ ಮೈ ಟ್ರಿಪ್ ಗೆ ಕೋರ್ಟ್ ಆದೇಶ
ವಿಮಾನ ತಡವಾಗಿದ್ದರ ಪರಿಣಾಮ ವೃದ್ಧ ದಂಪತಿಯ ಆಫ್ರಿಕನ್ ಸಫಾರಿ ರಜೆ ಯೋಜನೆ ವಿಫಲಗೊಂಡಿದ್ದಕ್ಕಾಗಿ ಆ ದಂಪತಿಗೆ ಏರ್ ಇಂಡಿಯಾ, ಮೇಕ್ ಮೈ ಟ್ರಿಪ್ ಗೆ 1.48 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಬೆಂಗಳೂರಿನ ಗ್ರಾಹಕ ಕೋರ್ಟ್ ತೀರ್ಪು ನೀಡಿದೆ.

ಅಡ್ಡಂಡ ಕಾರ್ಯಪ್ಪ ಬರೆದ 'ಟಿಪ್ಪು ನಿಜ ಕನಸುಗಳು' ಪುಸ್ತಕ ಮಾರಾಟ ಮೇಲಿದ್ದ ತಡೆಯಾಜ್ಞೆ ತೆರವು!
ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಬರೆದಿರುವ ಟಿಪ್ಪು ನಿಜ ಕನಸುಗಳು ಪುಸ್ತಕ ಮಾರಾಟ ಹಾಗೂ ಹಂಚಿಕೆಗೆ ನೀಡಿದ್ದ ತಡೆಯಾಜ್ಞೆಯನ್ನು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ತೆರವುಗೊಳಿಸಿದೆ.

ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ: ಬಿಜೆಪಿ ಶಾಸಕ ಉದಯ್ ಗರುಡಾಚಾರ್ಗೆ ಜೈಲು ಶಿಕ್ಷೆ
ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಉದಯ್ ಗರುಡಾಚಾರ್ಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.

ವಂಚನೆ ಆರೋಪ: ಯಡಿಯೂರಪ್ಪ, ಕುಟುಂಬದ ವಿರುದ್ಧ ಬೆಂಗಳೂರು ನ್ಯಾಯಾಲಯದಲ್ಲಿ ವಿಚಾರಣೆ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪುತ್ರ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ವಿರುದ್ಧ ಭ್ರಷ್ಟಾಚಾರದ ಪ್ರಕರಣವನ್ನು ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ CCH 82 ಬುಧವಾರ ವಿಚಾರಣೆ ನಡೆಸಿದೆ.

ಪಾಕ್ ಪರ ಘೋಷಣೆ ಕೂಗಿದ್ದ ಅಮೂಲ್ಯ ಲಿಯೋನಾ ಜಾಮೀನು ಅರ್ಜಿ ತಿರಸ್ಕೃತ
ಸಿಎಎ ಹಾಗೂ ಎನ್‌ಆರ್‌ಸಿ ವಿರೋಧಿ ಪ್ರತಿಭಟನೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿ ಜೈಲು ಪಾಲಾಗಿರುವ ಅಮೂಲ್ಯ ಲಿಯೋನಾ ಅವರ ಜಾಮೀನು ಅರ್ಜಿಯನ್ನು ಸಿಟಿ ಸಿವಿಲ್ ಕೋರ್ಟ್ ಗುರುವಾರ ತಿರಸ್ಕರಿಸಿದೆ.

ಯಶ್ ಕೆಜಿಎಫ್ ಚಿತ್ರಕ್ಕೆ ತಡೆಯಾಜ್ಞೆ ಬರಲು ಕಾರಣವಾದ 'ರೌಡಿ ತಂಗಂ' ಯಾರು?
ದೇಶಾದ್ಯಂತ ನಾಳೆ ಭರ್ಜರಿಯಾಗಿ ಬಿಡುಗಡೆಯಾಗಬೇಕಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಬಿಡುಗಡೆಗೆ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

'ಕೆಜಿಎಫ್' ಬಿಡುಗಡೆಗೆ ಮಧ್ಯಂತರ ತಡೆಯಾಜ್ಞೆ, ಯಶ್ ಅಭಿಮಾನಿಗಳಿಗೆ ನಿರಾಶೆ
ದೇಶಾದ್ಯಂತ ನಾಳೆ ತೆರೆಕಾಣಬೇಕಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಬಹು ನಿರೀಕ್ಷಿತ 'ಕೆಜಿಎಫ್' ಬಿಡುಗಡೆಗೆ ಕೋರ್ಟ್.....

ಆ್ಯಂಬಿಡೆಂಟ್ ವಂಚನೆ ಪ್ರಕರಣ: ರೆಡ್ಡಿ ಜಾಮೀನು ಅರ್ಜಿ ತೀರ್ಪು ನಾಳೆಗೆ ಕಾಯ್ದಿರಿಸಿದ ನ್ಯಾಯಾಲಯ, ಸಿಸಿಬಿಗೆ ತೀವ್ರ ತರಾಟೆ
ಆ್ಯಂಬಿಡೆಂಟ್ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಜಾಮೀನು ಅರ್ಜಿ ವಿಚಾರಣೆ ನಡೆಸಿರುವ 1ನೇ ಎಸಿಎಂಎಂ ನ್ಯಾಯಾಲಯ, ವಿಚಾರಣೆ ಮುಕ್ತಾಯಗೊಳಿಸಿದ್ದು, ನಾಳೆಗೆ ಜಾಮೀನು ಅರ್ಜಿ ಆದೇಶವನ್ನು ಕಾಯ್ದಿರಿಸಿದೆ...

