bengaluru crime

ಬೆಂಗಳೂರು: 3.66 ಕೋಟಿ ರೂ. ಮೌಲ್ಯದ ಬಿಟ್‌ಕಾಯಿನ್‌ಗಳನ್ನು ಕಳವು ಮಾಡಿದ ಮಹಿಳೆ ಅರೆಸ್ಟ್
3.66 ಕೋಟಿ ರೂ. ಮೌಲ್ಯದ 64 ಬಿಟ್‌ಕಾಯಿನ್‌ಗಳನ್ನು ಕಳವು ಮಾಡಿದ ಆರೋಪದಡಿ ಮಹಿಳೆಯೊಬ್ಬರನ್ನು ಬೆಂಗಳುರು ಸೈಬರ್ ಕ್ರೈಮ್ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.ಮಹಾದೇವಪುರದ ಕ್ರಿಪ್ಟೋಕರೆನ್ಸಿ ವಿನಿಮಯ ಸಂಸ್ಥೆ ಬಿಟ್‌ಸಿಫರ್ ಲ್ಯಾಬ್ಸ್‌ನ ಮಾಲೀಕ ಆಶಿಶ್ ಸಿಂಘಾಲ್ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆಯುಷಿ ಎಂಬಾಕೆಯನ್ನು ಬಂಧಿಸಿದ್ದಾರೆ.

ಕುಖ್ಯಾತ ರೌಡಿ ಸ್ಲಮ್ ಭರತನ 12 ಸಹಚರರ ಬಂಧನ
ರೌಡಿ ಶಿಟರ್ ಸ್ಲಮ್ ಭರತ್ ಪೋಲೀಸರಿಂದ ತಪ್ಪಿಸಿಕೊಳ್ಲಲು ಸಹಕರಿಸಿದ ದ ಇಬ್ಬರು ಮಹಿಳೆಯರು ಸೇರಿದಂತೆ 12 ಜನರನ್ನು ನಗರದ ಉತ್ತರ ವಿಭಾಗ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಜನರು ಹಲವಾರು ವಾಹನ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ, ಬಂಧಿತ ಮಹಿಳೆಯರು ಅವರಿಗೆ ಆಶ್ರಯ ನೀಡಿದ್ದಾರೆ ಎಂದು ಪೋಲೀಸ್ ಅಧಿಕಾರಿಗಳು ಹೇಳಿದರು.

ಪತಿಯ ಕುಟುಂಬಸ್ಥರ ಕಿರುಕುಳ: ಪ್ರೀತಿಸಿ ಮದುವೆಯಾಗಿದ್ದ ಗೃಹಿಣಿ ಆತ್ಮಹತ್ಯೆ!
ಡೆತ್ ನೋಟ್ ಬರೆದಿಟ್ಟು ಗೃಹಿಣಿ ಆತ್ಮಹತ್ಯೆ ಗೆ ಶರಣಾಗಿರುವ ಘಟನೆ ಸಿಲಿಕಾನ್ ಸಿಟಿಯ ಸುಬ್ರಹ್ಮಣ್ಯ ನಗರದಲ್ಲಿ ನಡೆದಿದೆ.

ಬೆಂಗಳೂರು: ಚಿನ್ನಾಭರಣ ಸಮೇತ ಓಮ್ನಿ ಕಳವು, ಸಿಸಿಟಿವಿಯಲ್ಲಿ ಸೆರೆ
ಮದುವೆ ಛತ್ರದಿಂದಲೇ ಚಿನ್ನಾಭರಣವಿದ್ದ ಓಮ್ನಿ ಕದ್ದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ನಡೆದಿದೆ.

ಸ್ನೇಹಿತನನ್ನೇ ಅಪಹರಿಸಿ ಹಣಕ್ಕಾಗಿ ಬೇಡಿಕೆ ಇಟ್ಟ ಆರೋಪಿ ಬಂಧನ
ಹಣಕ್ಕಾಗಿ ಸ್ನೇಹಿತನನ್ನೇ ಅಪಹರಿಸಿದ್ದ ಆರೋಪಿಯನ್ನು ಉತ್ತರ ವಿಭಾಗದ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಬೆಂಗಳೂರು: ರೌಡಿಶೀಟರ್ ಮಶಾಣ ಲೋಕಿ ಹತ್ಯೆ, ಒಂಭತ್ತು ಜನರ ಬಂಧನ
ಇತ್ತೀಚೆಗೆ ನಡೆದ ರೌಡಿಶೀಟರ್ ಲೋಕೇಶ್ ಅಲಿಯಾಸ್ ಮಶಾಣ ಲೋಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಂಭತ್ತು ಜನರನ್ನು ಬಂಧಿಸಿದ್ದಾರೆ.

ಬೆಂಗಳೂರು: ಸ್ನೇಹಿತನನ್ನು ಕೊಂದ 11 ಜನರ ಬಂಧನ
ಹಣಕಾಸಿನ ವಿಚಾರಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿದ 11ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಚಾಕುವಿನಿಂದ ಇರಿದು ಯುವಕನ ಬರ್ಬರ ಕೊಲೆ
ಯುವಕನೋರ್ವನನ್ನು ನಾಲ್ಕೈದು ಮಂದಿ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಗರದ ಶ್ರೀರಾಂಪುರದ ಆರ್ ಜೆ ನಗರದ ಬಸ್ ನಿಲ್ದಾಣದ ಬಳಿ ನಡೆದಿದೆ.

ಬೆಂಗಳೂರು: ಕೊಲೆ ಆರೋಪಿ ಕಾಲಿಗೆ ಗುಂಡೇಟು
ಕೊಲೆ ಮಾಡಲು ಸುಪಾರಿ ಪಡೆದಿದ್ದ ಆರೋಪಿ ಕಾಲಿಗೆ ಗುಂಡು ಹೊಡೆದು ಬಂಧಿಸಿರುವ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ. ಬೆಂಗಳೂರು ಮಹಾಲಕ್ಷ್ಮಿ ಲೇಔಟ್ ಪೋಲೀಸರು ಆರೋಪಿ ಬಾಬು ಎಂಬುವವನ ಕಾಲಿಗೆ ಗುಂಡು ಹೊಡೆದು ಆ ಬಳಿಕ ಬಂಧಿಸಿದ್ದಾರೆ.

