ರಾಜ್ಯಒಡಿಶಾದಲ್ಲಿ ಭೀಕರ ರೈಲು ದುರಂತ: ಕರ್ನಾಟಕದ ಕನಿಷ್ಠ ಇಬ್ಬರು ಸಾವು, ನಾಲ್ವರಿಗೆ ಗಾಯ
ಶುಕ್ರವಾರ ಸಂಜೆ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ (ರೈಲು ಸಂಖ್ಯೆ 12864) ನಲ್ಲಿ ಕರ್ನಾಟಕದಿಂದ ಪ್ರಯಾಣಿಸುತ್ತಿದ್ದ ಕನಿಷ್ಠ ಇಬ್ಬರು ಪ್ರಯಾಣಿಕರು ಸಾವಿಗೀಡಾಗಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ.