ರಾಜ್ಯಅರಮನೆ ಮೈದಾನ ಭೂಸ್ವಾಧೀನ ವಿವಾದ: ಇಂದು ತುರ್ತು ಸಂಪುಟ ಸಭೆ, ರಾಜಮನೆತನಕ್ಕೆ 3011 ಕೋಟಿ ರೂ TDR ಪರಿಹಾರ ಆದೇಶದಿಂದ ಪಾರಾಗಲು ಕಸರತ್ತು!
ಅರಮನೆ ಮೈದಾನದ ಭೂಮಿಗೆ ಟಿಡಿಆರ್ ನೀಡುವ ವಿಚಾರದಲ್ಲಿ ರಾಜಮನೆತನ ಮತ್ತು ರಾಜ್ಯ ಸರಕಾರದ ನಡುವಿನ ತಿಕ್ಕಾಟ ನಡೆಯುತ್ತಿದೆ. ಈ ವಿಚಾರ ಸಂಬಂಧ ಸುಪ್ರೀಂ ಕೋರ್ಟ್ನಲ್ಲಿ ಅಫಿಡವಿಟ್ ಸಲ್ಲಿಸಬೇಕಾದ ಹಿನ್ನೆಲೆಯಲ್ಲಿ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಬೇಕಿದೆ.