Bengaluru Riots

ಬೆಂಗಳೂರು ಗಲಭೆ: ಪಿಎಫ್ಐ ನಿಷೇಧ ಕುರಿತು ಸಂಸತ್ತಿನಲ್ಲಿ ಧ್ವನಿ ಎತ್ತಿದ ತೇಜಸ್ವಿ ಸೂರ್ಯ
ಕಳೆದ ಆಗಸ್ಟ್ ತಿಂಗಳಿನಲ್ಲಿ ನಡೆದ ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳಿಗೆ ನಿಷೇಧ ಹೇರುವ ಕುರಿತು ಸಂಸತ್ತಿನಲ್ಲಿ ಸಂಸದ ತೇಜಸ್ವಿ ಸೂರ್ಯ ಅವರು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಡಿ.ಜೆ.ಹಳ್ಳಿ ಗಲಭೆ ಪೂರ್ವ ನಿಯೋಜಿತ: ಎಸ್‌ಡಿಪಿಐ, ಪಿಎಫ್ಐ ನಿಷೇಧಕ್ಕೆ ಶಿಫಾರಸು- ಮದನ್ ಗೋಪಾಲ್
ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ರಾಜಕೀಯ ಉದ್ದೇಶಕ್ಕಾಗಿ ನಡೆದಿಲ್ಲ. ಇದು ಪೂರ್ವ ನಿಯೋಜಿತವಾಗಿ ನಡೆದ ಘಟನೆ. ಇದಕ್ಕೆಲ್ಲಾ ಎಸ್‌ಡಿಪಿಐ ಹಾಗೂ ಪಿಎಫ್ಐ ಸಂಘಟನೆ ಕಾರಣ. ಈ ಎರಡು ಸಂಘಟನೆಗಳ ನಿಷೇಧಕ್ಕೆ ಶಿಫಾರಸು ಮಾಡಲಾಗಿದೆ ಎಂದು ಸಿಟಿಜನ್ ಫಾರ್ ಡೆಮಾಕ್ರಸಿ ಸದಸ್ಯ, ನಿವೃತ್ತ ಅಪರ ಮುಖ್ಯಕಾರ್ಯದರ್ಶಿ ಮದನ್ ಗೋಪಾಲ್ ಹೇಳಿದ್ದಾರೆ.

ಬೆಂಗಳೂರು ಗಲಭೆ ಪೂರ್ವ ಯೋಜಿತ, ಕೋಮು ಪ್ರೇರಿತ: ವರದಿ
ಇತ್ತೀಚೆಗೆ ಬೆಂಗಳೂರಿನ ಡಿ.ಜೆ ಹಳ್ಳಿ ಮತ್ತು ಕೆ.ಜೆ ಹಳ್ಳಿಯಲ್ಲಿ ನಡೆದ ಗಲಭೆ "ಪೂರ್ವ ಯೋಜಿತ ಮತ್ತು ಸಂಘಟಿತ". ಇದು "ನಿಸ್ಸಂದೇಹವಾಗಿ ಕೋಮು ಪ್ರೇರಿತವಾಗಿದೆ" ಎಂದು ಸಿಟಿಜನ್ಸ್ ಫಾರ್ ಡೆಮಾಕ್ರಸಿ ತನ್ನ ಸತ್ಯ ಶೋಧನಾ ವರದಿಯಲ್ಲಿ ತಿಳಿಸಿದೆ.

ಬೆಂಗಳೂರು ಗಲಭೆ: ಎಸ್‌ಡಿಪಿಐ ಕಚೇರಿ ಮೇಲೆ ಸಿಸಿಬಿ ದಾಳಿ, ದಾಖಲೆ ಪರಿಶೀಲನೆ
ಡಿಜೆ ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಡಿಪಿಐ ಕಚೇರಿಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಗಲಭೆಯಲ್ಲಿ ಆರ್‌ಎಸ್‌ಎಸ್ ಪಾತ್ರ ಸಾಬೀತು ಪಡಿಸಿ, ಇಲ್ಲವೇ ಬೇಷರತ್ ಕ್ಷಮೆ ಕೇಳಿ: ನಳಿನ್ ಕಟೀಲ್ ಒತ್ತಾಯ
ಕೋಮು ಗಲಭೆಯಲ್ಲಿ ಆರ್‌ಎಸ್‌ಎಸ್ ಮತ್ತು ಅದರ ಸಹ ಸಂಘಟನೆಗಳ ಪಾತ್ರವನ್ನು ಸಾಬೀತು ಪಡಿಸಿ ಇಲ್ಲವೇ ಬೇಷರತ್ ಕ್ಷಮೆ ಕೇಳಿ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ.

ಬೆಂಗಳೂರು ಗಲಭೆ ಆರೋಪಿ ಸಮಿಯುದ್ದೀನ್ ನಾಪತ್ತೆ? ಪತ್ನಿಂದ ಹೇಬಿಯಸ್ ಕಾರ್ಪಸ್ ಸಲ್ಲಿಕೆಗೆ ತೀರ್ಮಾನ
ಡಿಜೆ ಹಳ್ಳಿ ಗಲಭೆ ಆರೋಪಿಯ ಪತ್ನಿ ಫಾತಿಮಾ ತಬಸ್ಸುಮ್, ಭಯೋತ್ಪಾದಕ ಸಂಘಟನೆ ಅಲ್ ಹಿಂದ್ ಜೊತೆ ಸಂಬಂಧ ಹೊಂದಿದ್ದಾನೆಂದು ಶಂಕಿಸಲಾಗಿರುವ ಸಮಿಯುದ್ದೀನ್ ಕಾಣೆಯಾಗಿರುವುದಾಗಿ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಸಲ್ಲಿಸಿದ್ದಾರೆ. ಅಲ್ಲದೆ ಆತನ ಉಪಸ್ಥಿತಿಯನ್ನು ಖಾತ್ರಿಪಡಿಸಲು ಶೀಘ್ರವೇ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಕೆಗೆ ತೀರ್ಮಾನಿಸಿದ್ದಾಗಿ ಹೇಳೀದ್ದಾರೆ.

ನಮ್ಮವರೇ ನಮಗೆ ಶತ್ರುಗಳಾದರು: ಸಿಸಿಬಿ ವಿಚಾರಣೆಯಲ್ಲಿ ಕಾಂಗ್ರೆಸ್ ನಾಯಕರ ಕೈವಾಡದ ಬಗ್ಗೆ 'ಅಖಂಡ' ಮಾಹಿತಿ
ಶಾಸಕ ಅಖಂಡ ಶ್ರೀನಿವಾಸ್ ಮನೆ ಮೇಲೆ ದಾಳಿ ನಡೆದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ಕೆಸೆರೆಚಾಟ ನಡೆದಿತ್ತು. ಈ ಮಧ್ಯೆ ಪ್ರಕರಣ ದಿನೇ ದಿನೇ ಹೊಸ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ.

ಗಲಭೆ ಹಿಂದೆ ಕಾಂಗ್ರೆಸ್ ಕೈವಾಡ ಎಂಬಂತೆ ಬಿಂಬಿಸಲು ಬಿಜೆಪಿ ಪೊಲೀಸರ ಮೇಲೆ ಒತ್ತಡ ಹೇರಿದೆ: ಡಿಕೆ ಶಿವಕುಮಾರ್ ಗಂಭೀರ ಆರೋಪ
ಡಿಜೆ ಹಳ್ಳಿ ಹಿಂಸಾಚಾರದಲ್ಲಿ ಕಾಂಗ್ರೆಸ್ ಮುಖಂಡರ ಹೆಸರನ್ನು ಸೇರಿಸುವಂತೆ ಆಡಳಿತಾರೂಢ ಬಿಜೆಪಿ ನಾಯಕರು ಪೊಲೀಸರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗುರುವಾರ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ ತನಿಖೆಯ ಸಮಯದಲ್ಲಿ ಯಾವುದೇ ಒತ್ತಡಕ್ಕೆ ಒಳಗಾಗದಂತೆ ಪೊಲೀಸರಿಗೆ ಸೂಚಿಸಿದ್ದಾರೆ.

ಸಂಪುಟ ಸಭೆ ಇಂದು: ಪಿಎಫ್ಐ ನಿಷೇಧ ಕುರಿತು ಮಹತ್ವದ ನಿರ್ಣಯ ಸಾಧ್ಯತೆ
ನಗರದ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ಪಿಎಫ್ಐ ನಿಷೇಧ ಕುರಿತು ಮಹತ್ವದ ನಿರ್ಣಯ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

