Bengaluru suburban rail project

ಬೆಂಗಳೂರು ಉಪನಗರ ರೈಲು ಯೋಜನೆ ವಿಳಂಬಕ್ಕೆ ರಾಜ್ಯ ಸರ್ಕಾರವೇ ಕಾರಣ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್
148.17 ಕಿಮೀ ಉದ್ದದ ಈ ಮಹತ್ವಾಕಾಂಕ್ಷಿ ಯೋಜನೆಗೆ ರೂ.15,767 ಕೋಟಿ ವೆಚ್ಚ ಅಂದಾಜಿಸಲಾಗಿದ್ದು, ಇದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಲಾ 20% ಹೂಡಿಕೆ ಮಾಡುತ್ತಿವೆ. ಉಳಿದ 60% ಹಣವನ್ನು ಸಾಲದ ಮೂಲಕ ಸಂಗ್ರಹಿಸಲಾಗುತ್ತಿದೆ.

ಬೆಂಗಳೂರು ಉಪನಗರ ರೈಲ್ವೇ ಯೋಜನೆಗೆ ರೈಲ್ವೆ ಸಚಿವಾಲಯದಿಂದ ಸಂಪೂರ್ಣ ಹಣಕಾಸು ನೆರವು: ಸಚಿವ ಸೋಮಣ್ಣ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಂಟು ಪ್ರಮುಖ ಪಟ್ಟಣಗಳನ್ನು ಸಂಪರ್ಕಿಸುವ ಮೂಲಕ ನಗರದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವುದು ಮತ್ತು ಮಾಲಿನ್ಯವನ್ನು ಕಡಿಮೆ ಮಾಡುವುದು ಈ ಯೋಜನೆಯ ಗುರಿಯಾಗಿದೆ.

ಬೆಂಗಳೂರು ಉಪನಗರ ರೈಲು ಯೋಜನೆಯ ಮಲ್ಲಿಗೆ ಮಾರ್ಗದ ಕಾಮಗಾರಿ ವೇಗಗೊಳಿಸಲು ಎಲ್&ಟಿಗೆ ಸೂಚನೆ
ಬೆಂಗಳೂರು ಉಪನಗರ ರೈಲು ಯೋಜನೆಯ ಬೆನ್ನಿಗಾನಹಳ್ಳಿಯಿಂದ ಚಿಕ್ಕಬಾಣಾವರದವರೆಗಿನ ಮಲ್ಲಿಗೆ ಮಾರ್ಗದ (ಕಾರಿಡಾರ್-2) ಕಾಮಗಾರಿಯನ್ನು ವೇಗಗೊಳಿಸುವಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಕೆ-ರೈಡ್ ವ್ಯವಸ್ಥಾಪಕ ನಿರ್ದೇಶಕ ಗೌರವ್ ಗುಪ್ತಾ ಅವರು ಗುತ್ತಿಗೆದಾರ ಸಂಸ್ಥೆ ಲಾರ್ಸನ್ ಮತ್ತು ಟೂಬ್ರೊಗೆ ಸೂಚಿಸಿದರು.

ಬೆಂಗಳೂರು ಉಪನಗರ ರೈಲು ಯೋಜನೆ: ಎರಡು ಕಾರಿಡಾರ್‌ಗಳ ಜೋಡಣೆಗೆ ರೈಲ್ವೆಯಿಂದ ವಿಳಂಬ- K-RIDE
ಬೆಂಗಳೂರು ಉಪನಗರ ರೈಲು ಯೋಜನೆ ಅನುಷ್ಠಾನದ ನೋಡಲ್ ಏಜೆನ್ಸಿ ಕೆ-ರೈಡ್ ಭಾರತೀಯ ರೈಲ್ವೆ ವಿರುದ್ಧ ವಿಳಂಬದ ಆರೋಪ ಮಾಡಿದೆ. ನೈಋತ್ಯ ರೈಲ್ವೆ ಗ್ರೀನ್ ಸಿಗ್ನಲ್ ತೋರದ ಕಾರಣ 148.17 ಕಿಮೀ ಯೋಜನೆಯ ನಾಲ್ಕು ಕಾರಿಡಾರ್‌ಗಳ ಪೈಕಿ ಎರಡಕ್ಕೆ ಟೆಂಡರ್ ಕರೆಯಲು ಸಾಧ್ಯವಾಗಲಿಲ್ಲ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರು ಉಪನಗರ ರೈಲು ಯೋಜನೆ: 12 ನಿಲ್ದಾಣಗಳ ನಿರ್ಮಾಣಕ್ಕೆ ಟೆಂಡರ್'ಗೆ ಆಹ್ವಾನ
ಬೆಂಗಳೂರು ಉಪನಗರ ರೈಲು ಯೋಜನೆಯನ್ನು (ಬಿಎಸ್‌ಆರ್‌ಪಿ) ಅನುಷ್ಠಾನಗೊಳಿಸುವ ಕರ್ನಾಟಕ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ ಮಲ್ಲಿಗೆ ಕಾರಿಡಾರ್‌ನಲ್ಲಿ (ಬೈಯಪ್ಪನಹಳ್ಳಿ– ಚಿಕ್ಕಬಾಣಾವರ) 12 ನಿಲ್ದಾಣಗಳ ನಿರ್ಮಾಣಕ್ಕೆ ಟೆಂಡರ್ ಆಹ್ವಾನಿಸಿದೆ.

