ರಾಜ್ಯಬೆಂಗಳೂರಿಗೆ ಬರುವ ವಲಸಿಗರಿಗೆ ಕೊರೋನಾ ಟೆಸ್ಟ್ ಕಡ್ಡಾಯ ಮಾಡುವ ಬಗ್ಗೆ ಚಿಂತನೆ: ಸಿಎಂ ಯಡಿಯೂರಪ್ಪ
ಕರ್ನಾಟಕದಲ್ಲಿ ಅನ್ ಲಾಕ್ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಬೇರೆ ರಾಜ್ಯಗಳು ಮತ್ತು ಜಿಲ್ಲೆಗಳಿಂದ ಬೆಂಗಳೂರಿಗೆ ಹರಿದುಬರುತ್ತಿರುವ ಜನರ ಸಂಖ್ಯೆ ಹೆಚ್ಚುತ್ತಿದ್ದು ಸೋಮವಾರ ಬೆಳಗ್ಗೆಯೇ ವಿಪರೀತ ಟ್ರಾಫಿಕ್ ಜಾಮ್ ಉಂಟಾಗಿದೆ. ಲಾಕ್ ಡೌನ್ ಎಂದು ಹೊರಗೆ ಹೋದವರು ಬೆಂಗಳೂರಿಗೆ ಬರುತ್ತಿದ್ದು ಸಾವಿರಾರು ವಾಹನಗಳು ರಸ್ತೆಯಲ್ಲಿ ಓಡಾಡುತ್ತಿವೆ.