Bengaluru Violence

ಶಾಸಕ ಅಖಂಡ ಸಂಬಂಧಿ ನವೀನ್ ತಲೆ ತಂದವರಿಗೆ ಅರ್ಧ ಕೋಟಿ ರೂ. ಇನಾಮು ಫೋಷಿಸಿದ್ದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು
ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಲಿಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಯವರ ಸಂಬಂಧಿ ನವೀನ್ ತಲೆ ತಂದವರಿಗೆ ಅರ್ಧಕೋಟಿ ಬಹುಮಾನ ನೀಡುತ್ತೇನೆಂದು ಹೇಳಿದ್ದ ಉತ್ತರಪ್ರದೇಶದ ವ್ಯಕ್ತಿ ವಿರುದ್ಧ ಶುಕ್ರವಾರ ಪ್ರಕರಣ ದಾಖಲಾಗಿದೆ.

ಬೆಂಗಳೂರು ಗಲಭೆ: 7 ಎಫ್ಐಆರ್ ದಾಖಲು, 22 ಪ್ರಮುಖ ಮಂದಿಯ ಹೆಸರು ದಾಖಲು
ನಗರದ ಡಿಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸರು ಒಟ್ಟು 7 ಎಫ್ಐಆರ್ ಗಳನ್ನು ದಾಖಲು ಮಾಡಿಕೊಂಡಿದ್ದು, ಎಫ್ಐಆರ್ ನಲ್ಲಿ 22 ಮಂದಿ ಪ್ರಮುಖರ ಹೆಸರುಗಳನ್ನು ಸೇರ್ಪಡೆಗೊಳಿಸಿದೆ ಎಂದು ತಿಳಿದುಬಂದಿದೆ.

ಬೆಂಗಳೂರು ಗಲಭೆ: ಎಸ್ ಡಿಪಿಐ ಪಾತ್ರ ಬೆಳಕಿಗೆ ಬಂದಿದೆ- ಗೃಹ ಸಚಿವ ಬೊಮ್ಮಾಯಿ
ಬೆಂಗಳೂರು ಗಲಭೆಗೆ ಸಂಬಂಧಿಸಿದಂತೆ ಎಸ್ ಡಿಪಿಐ ಪಾತ್ರ ಬೆಳಕಿಗೆ ಬಂದಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು ಗಲಭೆಗೆ ಕಾನೂನು ಸುವ್ಯವಸ್ಥೆ ವೈಫಲ್ಯವೇ ಕಾರಣ: ಕಾಂಗ್ರೆಸ್ ಆರೋಪ
ಬೆಂಗಳೂರು ಹಿಂಸಾಚಾರ, ಗಲಭೆಗಳು ಖಂಡನೀಯ ಮತ್ತು ಸ್ವೀಕಾರಾರ್ಹವಲ್ಲ ಎಂದು ಕಾಂಗ್ರೆಸ್ ಮುಖ್ಯ ವಕ್ತಾರ ರಂದೀಪ್ ಸುರ್ಜೇವಾಲಾ ಹೇಳಿದ್ದಾರೆ.

ಡಿಜೆ ಹಳ್ಳಿ ಗಲಭೆ ಪ್ರಕರಣ: 146 ಜನರ ಬಂಧನ
ಮಂಗಳವಾರ ಬೆಂಗಳೂರಿನಲ್ಲಿ ನಡೆದ ಹಿಂಸಾಚಾರದ ಬಗ್ಗೆ ಜಿಲ್ಲಾ ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲಿದೆ. ಇದುವರೆಗೆ ಪ್ರಕರಣಕ್ಕೆ ಸಂಬಂಧಿಸಿ 146 ಜನರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು ಹಿಂಸಾಚಾರ: ಯಾವುದೇ ಧರ್ಮದ ಸಮುದಾಯ ಕಾನೂನಿಗೆ ಅತೀತರಲ್ಲ - ಎಚ್‌ಡಿ ಕುಮಾರಸ್ವಾಮಿ
ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಅಕ್ಷಮ್ಯ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಧರ್ಮದ ಹೆಸರಲ್ಲಿ ಯಾರೇ ಗೂಂಡಾಗಿರಿ, ಕಾನೂನು ಕೈಗೆತ್ತಿಕೊಂಡರೂ ಅಂತವರನ್ನು ಮುಲಾಜಿಲ್ಲದೆ ಮಟ್ಟಹಾಕಬೇಕು. ಯಾವುದೇ ಧರ್ಮದ ಸಮುದಾಯ ಕಾನೂನಿಗೆ ಅತೀತರಲ್ಲ. ನೆಲದ ಕಾನೂನನ್ನು ಗೌರವಿಸದ ಯಾರೊಬ್ಬರೂ ಶಿಕ್ಷೆಗೆ ಅರ್ಹರು.

ಬೆಂಗಳೂರು ಗಲಭೆ: ಧಾರ್ಮಿಕ ಮತಾಂಧತೆಯನ್ನು ಬಲವಾಗಿ ಖಂಡಿಸುತ್ತೇನೆ - ಪ್ರಕಾಶ್ ರಾಜ್
ಮುಸ್ಲಿಂ ಸಮುದಾಯ ವಿರುದ್ಧದ ಫೇಸ್ ಬುಕ್ ಪೋಸ್ಟ್ ಸಂಬಂಧ ಬೆಂಗಳೂರಿನಲ್ಲಿ ನಡೆದ ಕೋಮುಗಲಭೆಯನ್ನು ನಟ ಪ್ರಕಾಶ್ ರಾಜ್ ಬಲವಾಗಿ ಖಂಡಿಸಿದ್ದಾರೆ.

ಹಿಂಸಾಚಾರ ಪೂರ್ವಯೋಜಿತ ಕೃತ್ಯ, ಎಸ್'ಡಿಪಿಐ ಕೈವಾಡವಿದೆ: ಸಚಿವ ಸಿಟಿ ರವಿ
ನಗರದ ಕಾವಲ್ ಬೈರಸಂದ್ರದಲ್ಲಿ ಹಾಗೂ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಪೂರ್ವಯೋಜಿತ ಕೃತ್ಯವಾಗಿದ್ದು, ಹಿಂಸಾಚಾರದ ಹಿಂದೆ ಎಸ್'ಡಿಪಿಐ ಕೈವಾಡವಿದೆ ಎಂದು ಸಚಿವ ಸಿ.ಟಿ.ರವಿಯವರು ಬುಧವಾರ ಹೇಳಿದ್ದಾರೆ.

ಬೆಂಗಳೂರು ಹಿಂಸಾಚಾರ: ರಾಜ್ಯ ಕಾಂಗ್ರೆಸ್ ಖಂಡನೆ; ಶಾಂತಿ ಕಾಪಾಡಲು ಸರ್ಕಾರಕ್ಕೆ ಬೆಂಬಲ ನೀಡಲು ಸಿದ್ಧ ಎಂದ ಡಿ.ಕೆ. ಶಿವಕುಮಾರ್
ಡಿಜೆ ಹಳ್ಳಿಯಲ್ಲಿ ಕಳೆದ ರಾತ್ರಿ ಸಂಭವಿಸಿದ ಹಿಂಸಾಚಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

