BengaluruRains

ಬೆಂಗಳೂರಿನ ಸಿಂಗಾಪುರ ಜಲಾವೃತ: ನಿವಾಸಿಗಳು ಅಸಹಾಯಕ; ಆತಂಕ, ಆಕ್ರೋಶ!
ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೆರೆ ಕೋಡಿ ಒಡೆದು ನಗರದ ಸಿಂಗಾಪುರ ಬಡಾವಣೆ ಜಲಾವೃತಗೊಂಡಿದ್ದು, ಅಪಾರ್ಟ್‌ಮೆಂಟ್‌ಗಳಿಗೆಲ್ಲ ನೀರು ನುಗ್ಗುತ್ತಿದ್ದು, ನಿವಾಸಿಗಳಿಗೆ ಹಾವುಗಳ ಕಾಟ ಶುರುವಾಗಿದೆ.

ಭಾರಿ ಮಳೆಗೆ ತತ್ತರಿಸಿದ ಬೆಂಗಳೂರು; ಹಲವು ಪ್ರದೇಶಗಳು ಜಲಾವೃತ, ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ನಲ್ಲಿ SDRF ಕಾರ್ಯಾಚರಣೆ
ಯಲಹಂಕದ ಅಮಾನಿ ಕೆರೆ ಕೋಡಿ ಬಿದ್ದ ಪರಿಣಾಮ ಕೆರೆಯ ನೀರು ಸಮೀಪದ ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್ಗೆ ನುಗ್ಗಿದೆ. ನವೆಂಬರ್ 18ರಂದು ಅಪಾರ್ಟ್ಮೆಂಟ್ಗೆ ನುಗ್ಗಿದ್ದ ನೀರನ್ನು 2 ದಿನ ಹರಸಾಹಸಪಟ್ಟು ಹೊರಗೆ ಹಾಕಲಾಗಿತ್ತು. ಇದೀಗ ರಾತ್ರಿ ಸುರಿದ ಮಳೆಗೆ ಮತ್ತೆ ನೀರು ನುಗ್ಗಿದ್ದು, ಅಪಾರ್ಟ್ಮೆಂಟ್ನ 8 ಬ್ಲಾಕ್ಗಳಿಗೆ ನೀರು ನುಗ್ಗಿದೆ.

ಭಾರಿ ಮಳೆ: ಬೆಂಗಳೂರಿನ ಹಲವು ಪ್ರದೇಶಗಳು ಜಲಾವೃತ, ಬಿಬಿಎಂಪಿ ಆಯುಕ್ತರಿಂದ ಪರಿಶೀಲನೆ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆ ಮುಂದುವರೆದಿರುವಂತೆಯೇ ನಗರದ ಹಲವು ಪ್ರದೇಶಗಳು ಜಲಾವೃತ್ತವಾಗಿದ್ದು, ಮಳೆ ಪೀಡಿತ ಪ್ರದೇಶಗಳಲ್ಲಿ ಇಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಪರಿಶೀಲನೆ ನಡೆಸಿದರು.

