ರಾಜ್ಯರಾಜ್ಯದ ವಿಶ್ವವಿದ್ಯಾನಿಲಯಗಳಲ್ಲಿ ಸಿಬ್ಬಂದಿ, ಮೂಲಸೌಕರ್ಯಗಳ ಕೊರತೆ!
ಬೀದರ್, ಹಾವೇರಿ, ಚಾಮರಾಜನಗರ, ಹಾಸನ, ಬಳ್ಳಾರಿ, ಕೊಡಗು ಮತ್ತು ಬಾಗಲಕೋಟೆಯಲ್ಲಿ ಹೊಸದಾಗಿ ಏಳು ವಿಶ್ವವಿದ್ಯಾನಿಲಯ ಸ್ಥಾಪನೆಗಾಗಿ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ಕಾಯ್ದೆಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ. ಇದರಿಂದಾಗಿ ರಾಜ್ಯಾದ್ಯಂತ ವಿಶ್ವವಿದ್ಯಾಲಯಗಳ ಸಂಖ್ಯೆ 30ಕ್ಕೆ ಏರಿಕೆಯಾಗಲಿದೆ.