ರಾಜ್ಯಕರ್ನಾಟಕದಲ್ಲಿ ಮುತ್ತಯ್ಯ ಮುರಳೀಧರನ್ ರಿಂದ ರೂ. 1,400 ಕೋಟಿ ಹೂಡಿಕೆ!
ಶ್ರೀಲಂಕಾದ ಮಾಜಿ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ ಅವರು ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ತಂಪು ಪಾನೀಯ ಮತ್ತು ಸಿಹಿ ತಿಂಡಿಗಳ ಉದ್ಯಮ ಆರಂಭಿಸುತ್ತಿದ್ದು, ಹಂತ ಹಂತವಾಗಿ ಒಟ್ಟು ರೂ. 1,400 ಕೋಟಿ ಹೂಡಿಕೆ ಮಾಡಲಿದ್ದಾರೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ಮಂಗಳವಾರ ತಿಳಿಸಿದರು.