Bharat Jodo Yatra

ಗುಜರಾತ್ ನಲ್ಲಿ ಪ್ರಧಾನಿ ಮೋದಿ ಕೋವಿಡ್ ನಿಯಮ ಪಾಲಿಸಿದ್ದರೇ: ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ
ಭಾರತ್ ಜೋಡೋ ಯಾತ್ರೆಗೆ ಜನರಿಂದ ವ್ಯಕ್ತವಾಗುತ್ತಿರುವ ಪ್ರತಿಕ್ರಿಯೆ ಬಿಜೆಪಿಯಲ್ಲಿ ಆತಂಕ ಸೃಷ್ಟಿಸಿದ್ದು, ಹೀಗಾಗಿಯೇ ಕೋವಿಡ್ ನೆಪ ನೀಡಿ ಯಾತ್ರೆಗೆ ಅಡ್ಡಿಯುಂಟು ಮಾಡಲು ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ.

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ನಟ ಕಮಲ್ ಹಾಸನ್
ತಮಿಳುನಾಡಿನ ಮಕ್ಕಳ ನಿಧಿ ಮಯಂ (ಎಂಎನ್‌ಎಂ) ಪಕ್ಷದ ಸಂಸ್ಥಾಪಕ ಹಾಗೂ ನಟ ಕಮಲ್ ಹಾಸನ್ ಅವರು ದೆಹಲಿಯಲ್ಲಿ ಡಿಸೆಂಬರ್ 24 ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುವುದಾಗಿ ಭಾನುವಾರ ಹೇಳಿದ್ದಾರೆ.

KGF-2 ಹಾಡು ಬಳಕೆ: ರಾಹುಲ್ ಗಾಂಧಿ ಸೇರಿ 3 ಕೈ ನಾಯಕರ ವಿರುದ್ಧ FIRಗೆ ಹೈಕೋರ್ಟ್ ತಡೆ!
ಭಾರತ್ ಜೋಡೋ ಯಾತ್ರೆಯಲ್ಲಿ ಕೆಜಿಎಫ್-2 ಕನ್ನಡ ಚಿತ್ರದ ಸಂಗೀತ ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್‌ನ ಹಲವು ನಾಯಕರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಜೈ ಶ್ರೀರಾಮ್ ಘೋಷಣೆ ಕೂಗುವ ಆರ್ ಎಸ್ಎಸ್ ನಿಂದ ಸೀತಾ ಮಾತೆಗೆ ಅವಮಾನ: ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಆರ್ ಎಸ್ಎಸ್ ಬಗ್ಗೆ ಮಾತನಾಡಿದ್ದು, ಆರ್ ಎಸ್ಎಸ್ ಸಂಘಟನೆ ಮಹಿಳೆಯರನ್ನು ಹತ್ತಿಕ್ಕುವ ಸಂಘಟನೆಯಾಗಿದೆ, ಆದ್ದರಿಂದಲೇ ಅಲ್ಲಿ ಮಹಿಳಾ ಸದಸ್ಯರಿಲ್ಲ ಎಂದು ಆರೋಪಿಸಿದ್ದಾರೆ.

ಭಾರತ್ ಜೋಡೋ ಯಾತ್ರೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಹೆಜ್ಜೆಹಾಕಿದ ಆರ್ ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್
ಭಾರತೀಯ ರಿಸರ್ವ್ ಬ್ಯಾಂಕ್ (RBI) ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು ಇಂದು ಬುಧವಾರ ಬೆಳಗ್ಗೆ ಪ್ರಸ್ತುತ ರಾಜಸ್ಥಾನದ ಮೂಲಕ ಸಾಗುತ್ತಿರುವ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡು ಸುದ್ದಿಯಾಗಿದ್ದಾರೆ.

ರಾಜಸ್ಥಾನದಲ್ಲಿ ಭಾರತ್ ಜೋಡೋ ಯಾತ್ರೆ: ಕುಟುಂಬ ಸದಸ್ಯರೊಂದಿಗೆ ರಾಹುಲ್ ಹೆಜ್ಜೆ; ಕುಟುಂಬ ರಾಜಕಾರಣ ಎಂದ ನೆಟ್ಟಿಗರು!
ರಾಜಸ್ಥಾನದ ಬುಂಡಿ ಜಿಲ್ಲೆಯಿಂದ ಸೋಮವಾರ ಆರಂಭವಾದ ಭಾರತ್ ಜೋಡೋ ಯಾತ್ರೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಆಕೆಯ ಪತಿ ರಾಬರ್ಟ್ ವಾದ್ರಾ ಮತ್ತು ಅವರ ಪುತ್ರಿಯರು ಸೇರಿದಂತೆ ನೂರಾರು ಮಹಿಳಾ ಕಾರ್ಯಕರ್ತರೊಂದಿಗೆ ರಾಹುಲ್ ಗಾಂಧಿ ಹೆಜ್ಜೆ ಹಾಕಿದರು.

ಗುಜರಾತ್ ಚುನಾವಣಾ ಫಲಿತಾಂಶ ಭಾರತ್ ಜೋಡೋ ಯಾತ್ರೆ ಮೇಲೆ ಪರಿಣಾಮ ಬೀರಲ್ಲ: ಕಾಂಗ್ರೆಸ್
ಗುಜರಾತ್ ಚುನಾವಣಾ ಫಲಿತಾಂಶ ಭಾರತ್ ಜೋಡೋ ಯಾತ್ರೆ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದಿರುವ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ರಮೇಶ್ ಚುನಾವಣೆಯಲ್ಲಿ ಪಕ್ಷದ ಕಳಪೆ ಸಾಧನೆ ಬಗ್ಗೆ ವಿಶ್ಲೇಷಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ರಾಜಸ್ಥಾನದಲ್ಲಿ ಭಾರತ್ ಜೋಡೋ ಯಾತ್ರೆ: ರಾಹುಲ್ ಚಾಯ್ ಪೇ ಚರ್ಚಾ, ಮಾಜಿ ಸಂಸದ ರಘುವೀರ್ ಮೀನಾ ಅಸ್ವಸ್ಥ
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಮವಾರ ಬೆಳಗ್ಗೆ ಜಲವಾರ್ ಜಿಲ್ಲೆಯಿಂದ ಭಾರತ್ ಜೋಡೋ ಯಾತ್ರೆಯನ್ನು ಆರಂಭಿಸಿದರು. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ರಾಹುಲ್ ಗಾಂಧಿ ಜೊತೆಗೆ ಹೆಜ್ಜೆ ಹಾಕಿದರು.

ಮೆಚ್ಚುಗೆಯಿಂದ ವೈಯಕ್ತಿಕ ದಾಳಿಗೆ: ಮಾಧ್ಯಮಗಳು ತಮ್ಮ ವಿಷಯದಲ್ಲಿ ಬದಲಾಗಿದ್ದು ಹೇಗೆ? ರಾಹುಲ್ ಗಾಂಧಿ ಹೇಳಿದ್ದು ಹೀಗೆ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ವಿಷಯದಲ್ಲಿ ಮಾಧ್ಯಮಗಳು ಬದಲಾಗಿದ್ದು ಹೇಗೆ ಎಂಬುದನ್ನು ಖುದ್ದಾಗಿ ವಿವರಿಸಿರುವ 2.15 ನಿಮಿಷದ ವೀಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವುದು ಈಗ ಎಲ್ಲೆಡೆ ಸುದ್ದಿಯಾಗುತ್ತಿದೆ.

