Bharat Jodo Yatra

ಮೂರು ತಿಂಗಳಿಂದ ತಪಸ್ಸು ಮಾಡುತ್ತಿದ್ದೇನೆ: ಮಹಾಕಾಲೇಶ್ವರ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದ ರಾಹುಲ್ ಗಾಂಧಿ
ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯ ಓಂಕಾರೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ನಾಲ್ಕು ದಿನಗಳ ನಂತರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಉಜ್ಜಯಿನಿಯ ಮತ್ತೊಂದು ಜ್ಯೋತಿರ್ಲಿಂಗ ಕ್ಷೇತ್ರವಾದ ಮಹಾಕಾಲೇಶ್ವರ ದೇವಾಲಯಕ್ಕೆ ಭೇಟಿ ನೀಡಿದರು.

ಭಾರತ್ ಜೋಡೋ ಯಾತ್ರೆ ಎಫೆಕ್ಟ್: ಈಗ ಹೆಚ್ಚು ತಾಳ್ಮೆ ಬಂದಿದೆ ಎಂದ ರಾಹುಲ್ ಗಾಂಧಿ
ಕಳೆದ ಎರಡು ತಿಂಗಳಿಂದ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಿಂದ ಹೆಚ್ಚಿನ ತಾಳ್ಮೆ ಮತ್ತು ಇತರರ ಮಾತನ್ನು ಕೇಳುವ ಸಾಮರ್ಥ್ಯ ಸೇರಿದಂತೆ ತನ್ನಲ್ಲಿ ಕೆಲವು ಬದಲಾವಣೆಗಳಾಗಿವೆ ಎಂದು ಯಾತ್ರೆಯ ನೇತೃತ್ವ ವಹಿಸಿರುವ...

ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ನೋಡಲು ಮುಗಿಬಿದ್ದ ಜನ: ಕಾಲ್ತುಳಿತದಲ್ಲಿ ವೇಣುಗೋಪಾಲ್ ಕೈಕಾಲಿಗೆ ಪೆಟ್ಟು
ಭಾರತ್ ಜೋಡೋ ಯಾತ್ರೆಯ ವೇಳೆ ಮಧ್ಯಪ್ರದೇಶದ ಇಂದೋರ್ ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಬಿದ್ದು ಗಾಯಗೊಂಡಿದ್ದಾರೆ.

ಚೀನಾದ ಸೇನೆ ಮಾಡಲಾಗದ್ದನ್ನು ನೋಟು ಅಮಾನ್ಯೀಕರಣ, ಜಿಎಸ್‌ಟಿ ಮಾಡಿದೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, 'ನೋಟು ಅಮಾನ್ಯೀಕರಣ ಮತ್ತು ದೋಷಪೂರಿತ ಜಿಎಸ್‌ಟಿ ಮೂಲಕ ಬಿಜೆಪಿ ಸರ್ಕಾರವು ಉದ್ಯೋಗ ಸೃಷ್ಟಿ, ಎಂಎಸ್‌ಎಂಇ ಮತ್ತು ಕೃಷಿ ವಲಯದ ಬೆನ್ನೆಲುಬನ್ನು ಹಾಳುಮಾಡಿದೆ' ಎಂದು ಆರೋಪಿಸಿದರು.

ಕೆಸಿ ವೇಣುಗೋಪಾಲ್ ಗೆ ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟು ಶಮನ ಹೊಣೆ!
ಭಾರತ್ ಜೋಡೋ ಯಾತ್ರೆ ರಾಜಸ್ಥಾನ ಪ್ರವೇಶಿಸುತ್ತಿರುವ ಹೊತ್ತಿನಲ್ಲೇ ಅಲ್ಲಿ ಕಾಂಗ್ರೆಸ್ ಬಣ ರಾಜಕೀಯ ಭುಗಿಲೆದ್ದಿದ್ದು, ಇದೀಗ ಡ್ಯಾಮೇಜ್ ಕಂಟ್ರೋಲ್ ಮುಂದಾಗಿರುವ ಕಾಂಗ್ರೆಸ್ ಹೈಕಮಾಂಡ್ ಬಿಕ್ಕಟ್ಟು ಶಮನ ಜವಾಬ್ದಾರಿಯನ್ನು ಎಐಸಿಸಿ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಗೆ ವಹಿಸಿದೆ.

ಭಾರತ್ ಜೋಡೋ ಯಾತ್ರೆ ವೇಳೆ ನೆಲಕ್ಕೆ ಬಿದ್ದ ದಿಗ್ವಿಜಯ್ ಸಿಂಗ್; ಕಳಪೆ ರಸ್ತೆ ಕಾರಣ ಎಂದ ಕಾಂಗ್ರೆಸ್
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿರುವ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರು ಮಧ್ಯ ಪ್ರದೇಶದ ಖಾರ್ಗೋನ್ ಜಿಲ್ಲೆಯ ಬರ್ವಾಹಾ ಬಳಿ ಶನಿವಾರ ನೆಲಕ್ಕೆ ಬಿದ್ದ ಘಟನೆ ನಡೆದಿದ್ದು,...

ತ್ರಿಪುರಾ: ಭಾರತ್ ಜೋಡೋ ಯಾತ್ರೆ ಮೇಲೆ ಬಿಜೆಪಿ ದಾಳಿ, 12 ಮಂದಿಗೆ ಗಾಯ: ಕಾಂಗ್ರೆಸ್ ಆರೋಪ
ತ್ರಿಪುರಾದ ಎರಡು ಕಡೆ ಶುಕ್ರವಾರ ಕಾಂಗ್ರೆಸ್ ನ ರಾಜ್ಯ ಮಟ್ಟದ ಭಾರತ್ ಜೋಡೋ ಯಾತ್ರೆ ಮೇಲೆ ನಡೆದ ದಾಳಿಯಿಂದ ಮೂವರು ಪೊಲೀಸರು ಸೇರಿದಂತೆ ಕನಿಷ್ಠ 12 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯ ಪ್ರದೇಶಕ್ಕೆ ಭಾರತ್ ಜೋಡೋ ಯಾತ್ರೆ: ಸಮಾಜದಲ್ಲಿನ ದ್ವೇಷ, ಹಿಂಸೆಯ ವಿರುದ್ಧ ನಮ್ಮ ಅಭಿಯಾನ; ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಬುಧವಾರ ಬೆಳಗ್ಗೆ ನೆರೆಯ ಮಹಾರಾಷ್ಟ್ರದಿಂದ ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯ ಬೋದರ್ಲಿ ಗ್ರಾಮವನ್ನು ಪ್ರವೇಶಿಸಿತು. ಈ ವೇಳೆ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಭಾರತ್ ಜೋಡೋ ಯಾತ್ರೆ: ನಾಳೆಯಿಂದ 4 ದಿನಗಳ ಕಾಲ ಪ್ರಿಯಾಂಕಾ ಗಾಂಧಿ ಭಾಗಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಈಗ ಮಧ್ಯ ಪ್ರದೇಶ ಪ್ರವೇಶಿಸಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಬುಧವಾರ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

