Bharat Jodo Yatra

1000 ಕಿಮೀ ಕ್ರಮಿಸಿದ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ: ಬಳ್ಳಾರಿಯಲ್ಲಿ ಕಾಂಗ್ರೆಸ್ ಮೆಗಾ ರ್ಯಾಲಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆಯು ಶನಿವಾರ 1,000 ಕಿಲೋಮೀಟರ್‌ಗಳನ್ನು ಕ್ರಮಿಸುವ ಮೂಲಕ ಮೈಲಿಗಲ್ಲನ್ನು ತಲುಪಲಿದೆ. ಪಾದಯಾತ್ರೆ ಬಳ್ಳಾರಿ ತಲುಪುವ ಮೂಲಕ 1000 ಕಿಮೀ ಕ್ರಮಿಸಿದೆ.

ಗಣಿ ಜಿಲ್ಲೆಯತ್ತ ಹೊರಟ 'ಕೈ' ಪಡೆ: ಭಾರತ್ ಜೋಡೋ ಯಾತ್ರೆ ಸ್ವಾಗತಿಸಲು ಬಳ್ಳಾರಿ ಕಾಂಗ್ರೆಸ್ ಸಜ್ಜು
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆ ಬಳ್ಳಾರಿಯತ್ತ ಸಾಗಿದ್ದು, ಶುಕ್ರವಾರ ಸಂಜೆ ಜಿಲ್ಲಾ ಗಡಿಭಾಗದ ಹಲಕಿಂಡಿ ಗ್ರಾಮದಲ್ಲಿ ಸ್ವಾಗತಿಸಲು ಜಿಲ್ಲಾ ಕಾಂಗ್ರೆಸ್ ಘಟಕವು ಅಂತಿಮ ಸಿದ್ಧತೆಯಲ್ಲಿ ತೊಡಗಿದೆ.

ರಾಹುಲ್ ಗಾಂಧಿ ಭಾರತ್ ಜೋಡೋ ಪಾದಯಾತ್ರೆ: ಮೆಚ್ಚಿನ ನಾಯಕನ ಜೊತೆ ಬೆಂಬಲಿಗರ ದಣಿವರಿಯದ ಯಾತ್ರೆ!
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೈಗೊಂಡಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಕೇರಳದಿಂದ ಸುಮಾರು 117 ಪಾದಯಾತ್ರಿಗಳು ಆಗಮಿಸಿದ್ದಾರೆ.

ಭಾರತ್ ಜೋಡೋ ಯಾತ್ರೆ: ರಸ್ತೆಯಲ್ಲಿ ರಾಹುಲ್ ಗಾಂಧಿ ಪುಷ್ ಅಪ್, ಡಿಕೆ ಶಿವಕುಮಾರ್ ಸಾಥ್!
ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ವಿಭಿನ್ನವಾಗಿ ಕಾಣಿಸಿಕೊಳ್ತಿದ್ದಾರೆ. ಭಿನ್ನ ವಿಭಿನ್ನ ವಿಶೇಷ ವೈರಲ್ ದೃಶ್ಯಗಳು ಭಾರತ್ ಜೋಡೋ ಯಾತ್ರೆಯಲ್ಲಿ ಕಂಡುಬರ್ತಿದ್ದು ಸದ್ಯ ಕರ್ನಾಟಕದಲ್ಲಿರೋ ರಾಹುಲ್ ಗಾಂಧಿ ರಸ್ತೆಯಲ್ಲಿ ಪುಶ್ ಅಪ್ ಮಾಡಿದ್ದಾರೆ.

ಭಾರತ್ ಜೋಡೋ ಯಾತ್ರೆ: ಡಿಕೆಶಿ ಕೈ ಹಿಡಿದು ರಾಹುಲ್ ಓಟ! ವಿಡಿಯೋ
ಕೆಲ ದಿನಗಳ ಹಿಂದೆ ಭಾರತ್ ಜೋಡೋ ಯಾತ್ರೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಓಡಿ ಗಮನ ಸೆಳೆದಿದ್ದ ರಾಹುಲ್ ಗಾಂಧಿ, ಈಗ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರ ಕೈ ಹಿಡಿದು ಓಡಿದ್ದಾರೆ.

ಪರಿಶಿಷ್ಟ ಪಂಗಡ ಪ್ರಾಬಲ್ಯದ ಪ್ರದೇಶಗಳಲ್ಲಿ ಭಾರತ್ ಜೋಡೋ ಯಾತ್ರೆ ಪ್ರವೇಶಕ್ಕೆ ಮೊದಲು ಸರ್ಕಾರದಿಂದ ಎಸ್ ಸಿ/ಎಸ್ ಟಿ ಕೋಟಾ ನಿರ್ಧಾರ ಪ್ರಕಟ!
ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಿಂದ ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಗಳವರೆಗೆ ಪರಿಶಿಷ್ಟ ಪಂಗಡಗಳ ಪ್ರಾಬಲ್ಯವಿರುವ ಪ್ರದೇಶಗಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಪ್ರವೇಶಿಸುವ ಕೆಲವೇ ದಿನಗಳ ಮೊದಲು ಎಸ್‌ಸಿ/ಎಸ್‌ಟಿಗಳಿಗೆ ಮೀಸಲಾತಿ ಹೆಚ್ಚಿಸುವ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ನಿರ್ಧಾರವು ಪ್ರಾಸಂಗಿಕವಾಗಿ ಬಂದಿದೆ.

ಭಾರತ್ ಜೋಡೋ ಯಾತ್ರೆಯಲ್ಲಿ ನ್ಯೂಯಾರ್ಕ್ ಮೂಲದ ಡಾ. ಸ್ನೇಹಾ ರೆಡ್ಡಿ ಭಾಗಿ
ಕಳೆದ 20 ವರ್ಷಗಳಿಂದ ನ್ಯೂಯಾರ್ಕ್ ನಲ್ಲಿ ನೆಲೆಸಿರುವ ಡಾ. ಸ್ನೇಹಾ ರೆಡ್ಡಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.

ಭಾರತ್ ಜೋಡೋ ಯಾತ್ರೆಯಲ್ಲಿ ಖರ್ಗೆ ಪಾಲ್ಗೊಳ್ಳದಿರಲು ಕಾರಣ ಏನು ಗೊತ್ತಾ?
ಎಐಸಿಸಿ ಅಧ್ಯಕ್ಷೀಯ ಸ್ಥಾನದ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ತವರು ರಾಜ್ಯವಾದ ಕರ್ನಾಟಕದಲ್ಲಿ ರಾಹುಲ್ ಗಾಂಧಿ ಸಾರಥ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಿಂದ ದೂರ ಉಳಿದಿದ್ದಾರೆ. ಪಕ್ಷವು ಉನ್ನತ ಹುದ್ದೆಗೆ ನಿಷ್ ಪಕ್ಷಪಾತವಾಗಿ ಚುನಾವಣೆ ನಡೆಸಲು ಒತ್ತು ನೀಡಿರುವುದೇ ಇದಕ್ಕೆ ಕಾರಣ ಎಂದು ಮೂಲಗಳು ಸೋಮವಾರ ತಿಳಿಸಿವೆ.

'ಭಾರತ್ ಜೋಡೋ ಯಾತ್ರೆ': ರಾಹುಲ್ ಗಾಂಧಿಯನ್ನು ಶ್ಲಾಘಿಸಿದ ಮೆಹಬೂಬಾ ಮುಫ್ತಿ
ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ, ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು ಭಾನುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 'ಭಾರತ್ ಜೋಡೋ ಯಾತ್ರೆ'ಯನ್ನು ಶ್ಲಾಘಿಸಿದ್ದಾರೆ ಮತ್ತು ಬಿಜೆಪಿಯ ದಾಳಿಯಿಂದ ದೇಶ ಮತ್ತು...

