Bharat Jodo Yatra

ರಾಹುಲ್ ಗಾಂಧಿ ನೇತೃತ್ವದಲ್ಲಿ ಕೆಲಸ ಮಾಡುತ್ತೇವೆ: ಕಾಂಗ್ರೆಸ್ ನಾಯಕತ್ವದ ಬಿಕ್ಕಟ್ಟಿನ ಬಗ್ಗೆ ಅಶೋಕ್ ಗೆಹ್ಲೋಟ್
ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬುಧವಾರ ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ದೇಶದಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ದ್ವೇಷ ಹರಡುತ್ತಿದೆ. ಇದನ್ನು ತಡೆಯದಿದ್ದರೆ ಅಂತರ್ಯುದ್ಧಕ್ಕೆ ಕಾರಣವಾಗಬಹುದು ಎಂದು ಹೇಳಿದ್ದಾರೆ.

ಭಾರತ್ ಜೋಡೋ ಯಾತ್ರೆ: ಮುಂದಿನ 150 ದಿನಗಳ ಕಾಲ ಕಂಟೈನರ್‌ನಲ್ಲಿ ತಂಗಲಿದ್ದಾರೆ ರಾಹುಲ್ ಗಾಂಧಿ!
ಇಂದು ತಮಿಳುನಾಡಿನ ಕನ್ಯಾಕುಮಾರಿಯಿಂದ 'ಭಾರತ್ ಜೋಡೋ ಯಾತ್ರೆ' ಆರಂಭಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮುಂದಿನ 150 ದಿನಗಳ ಕಾಲ ಕಂಟೈನರ್‌ನಲ್ಲಿ ಇರಲಿದ್ದಾರೆ.

'ದ್ವೇಷದ ರಾಜಕಾರಣಕ್ಕೆ ತಂದೆಯನ್ನು ಕಳೆದುಕೊಂಡೆ ಆದರೆ ದೇಶವನ್ನು ಕಳೆದುಕೊಳ್ಳುವುದಿಲ್ಲ': ರಾಹುಲ್ ಗಾಂಧಿ
ರಾಜಕೀಯ ದ್ವೇಷಕ್ಕಾಗಿ ತಂದೆಯವರಾದ ದಿವಂಗತ ಪ್ರಧಾನಿ ರಾಜೀವ್ ಗಾಂಧಿಯವರನ್ನು ಕಳೆದುಕೊಂಡೆ ಆದರೆ ನನ್ನ ಪ್ರೀತಿಯ ದೇಶವನ್ನು ಕಳೆದುಕೊಳ್ಳಲು ಸಿದ್ಧನಿಲ್ಲ ಎಂದು ಸಂಸದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾವನಾತ್ಮಕವಾಗಿ ಮಾತನಾಡಿದ್ದಾರೆ.

'ಭಾರತ್ ಜೋಡೋ' ಯಾತ್ರೆ: ತಮಿಳು ನಾಡಿನ ಶ್ರೀಪೆರಂಬದೂರಿನಲ್ಲಿ ತಂದೆ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ ರಾಹುಲ್ ಗಾಂಧಿ
ರಾಜಕೀಯ ಭವಿಷ್ಯವನ್ನು ಪುನಶ್ಚೇತನಗೊಳಿಸುವ ಉದ್ದೇಶದಿಂದ ದೇಶದ ಹಳೆಯ ಕಾಂಗ್ರೆಸ್ ಪಕ್ಷ ಇಂದು ಬುಧವಾರದಿಂದ ದೇಶಾದ್ಯಂತ 3,500 ಕಿಲೋ ಮೀಟರ್ ಸಂಚಾರ ನಡೆಸುವ 'ಭಾರತ್ ಜೋಡೋ ಯಾತ್ರೆ'ಯನ್ನು ತಮಿಳು ನಾಡಿನ ಕನ್ಯಾಕುಮಾರಿಯಿಂದ ಆರಂಭಿಸಿದೆ.

ಕಾಂಗ್ರೆಸ್ ಪಕ್ಷದ 'ಭಾರತ್ ಜೋಡೋ ಯಾತ್ರೆ' ನಾಳೆ ಕನ್ಯಾಕುಮಾರಿಯಲ್ಲಿ ಚಾಲನೆ
ಕಾಂಗ್ರೆಸ್ ಪಕ್ಷದ ಬಹುನಿರೀಕ್ಷಿತ 3,570 ಕಿಲೋ ಮೀಟರ್ ದೂರದ ಭಾರತ್ ಜೋಡೋ ಯಾತ್ರೆಗೆ ಕನ್ಯಾಕುಮಾರಿಯಲ್ಲಿ ನಾಳೆ ಚಾಲನೆ ದೊರೆಯಲಿದೆ. ಈ ಯಾತ್ರೆ ಆರಂಭಕ್ಕೂ ಮುನ್ನ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪೆರಂಬೂರಿನ ರಾಜೀವ್ ಗಾಂಧಿ ಸ್ಮಾರಕದಲ್ಲಿ ನಡೆಯುವ ಪ್ರಾರ್ಥನಾ ಸಭೆಯಲ್ಲಿ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದಾರೆ.

ರಾಹುಲ್ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಪ್ರತಿದಿನ 25 ಸಾವಿರ ಪಕ್ಷದ ಕಾರ್ಯಕರ್ತರು ಪಾಲ್ಗೊಳ್ಳಬೇಕು: ಸಿದ್ದರಾಮಯ್ಯ
ರಾಹುಲ್ ಗಾಂಧಿಯವರ ಭಾರತ್ ಜೋಡೋ ಪಾದಯಾತ್ರೆ ಸೆ.7ರಂದು ಕನ್ಯಾಕುಮಾರಿಯಲ್ಲಿ ಆರಂಭವಾಗಲಿದೆ. ಉದ್ಘಾಟನಾ ಸಮಾರಂಭದಲ್ಲಿ ನಾನೂ ಭಾಗವಹಿಸಲಿದ್ದೇನೆ. ದೇಶಾದ್ಯಂತ 3570 ಕಿ.ಮೀ. ಪಾದಯಾತ್ರೆ ನಡೆಯಲಿದೆ. ರಾಜ್ಯದಲ್ಲಿ ಒಟ್ಟು 510 ಕಿ.ಮೀ. ಯಾತ್ರೆ ಸಾಗಲಿದೆ ಎಂದು ವಿವರಿಸಿದರು.

ಕಾಂಗ್ರೆಸ್ ನಿಂದ 'ಭಾರತ್ ಜೋಡೋ ಯಾತ್ರೆ': ಪಾದಯಾತ್ರಿಗಳ ಪಟ್ಟಿ ಬಿಡುಗಡೆ, ಪ್ರತಿ ಶಾಸಕರಿಗೆ 5 ಸಾವಿರ ಜನ ಸೇರಿಸುವ ಗುರಿ!
ಕಾಂಗ್ರೆಸ್ ನಲ್ಲೀಗ ಭಾರತ್ ಜೋಡೋ ಯಾತ್ರೆಗೆ ಭರದ ಸಿದ್ದತೆ ನಡೆಯುತ್ತಿದೆ. 117 ಮಂದಿ ಕಾಂಗ್ರೆಸ್ ನಾಯಕರ ಪೈಕಿ 9 ಮಂದಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ರಾಜಸ್ತಾನದಿಂದ ಯಾತ್ರೆ ಪ್ರಾರಂಭಿಸಲಿದ್ದಾರೆ.

ಕಾಂಗ್ರೆಸ್ ನಿಂದ ಕರ್ನಾಟಕದಲ್ಲಿ 21 ದಿನ 'ಭಾರತ್ ಜೋಡೋ' ಯಾತ್ರೆ, ಪ್ರತಿದಿನ 25 ಕಿಲೋ ಮೀಟರ್ ಸಂಚಾರ
ಕಾಂಗ್ರೆಸ್ ನಲ್ಲೀಗ ಭಾರತ್ ಜೋಡೋ ಯಾತ್ರೆಯ ತಯಾರಿಯಲ್ಲಿ ನಾಯಕರಿದ್ದಾರೆ. ಈ ಯಾತ್ರೆ ರಾಜ್ಯದಲ್ಲಿ 21 ದಿನಗಳ ಕಾಲ ಗುಂಡ್ಲುಪೇಟೆಯಿಂದ ರಾಯಚೂರಿನವರೆಗೆ ನಡೆಯಲಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸೆಪ್ಟೆಂಬರ್ 7 ರಿಂದ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ; ಲೋಗೋ, ಭಿತ್ತಿಪತ್ರ ಬಿಡುಗಡೆ
ಸೆಪ್ಟೆಂಬರ್ 7 ರಿಂದ ಆರಂಭವಾಗಲಿರುವ 'ಭಾರತ್ ಜೋಡೋ ಯಾತ್ರೆ'ಯ ಲೋಗೋ, ಘೋಷಣೆ ಹಾಗೂ ಭಿತ್ತಿಪತ್ರವನ್ನು ಕಾಂಗ್ರೆಸ್ ಪಕ್ಷ ಇಂದು ಬಿಡುಗಡೆ ಮಾಡಿದೆ.

