Bharat Jodo Yatra

ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಕಾಂಗ್ರೆಸ್ ಆಹ್ವಾನ!!
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಕಾಂಗ್ರೆಸ್ ಆಹ್ವಾನ ನೀಡಿದೆ.

ಭಾರತ್ ಜೋಡೋ ಯಾತ್ರೆಗೆ ಆಹ್ವಾನವಿಲ್ಲ: ಅಖಿಲೇಶ್ ಯಾದವ್
ಕಾಂಗ್ರೆಸ್ ಪಕ್ಷವನ್ನು ಬಿಜೆಪಿಯೊಂದಿಗೆ ಹೋಲಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಉತ್ತರ ಪ್ರದೇಶದಲ್ಲಿ ನಡೆಯಲಿರುವ ಭಾರತ್ ಜೋಡೋ ಯಾತ್ರೆಗೆ ಯಾವುದೇ ಆಹ್ವಾನವನ್ನು ಸ್ವೀಕರಿಸಿಲ್ಲ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿಯಿಂದಲೇ 113 ಬಾರಿ ಶಿಷ್ಟಾಚಾರ ಉಲ್ಲಂಘನೆ; ಕಾಂಗ್ರೆಸ್ ಭದ್ರತಾ ವೈಫಲ್ಯ ಆರೋಪಕ್ಕೆ CRPF ತಿರುಗೇಟು
ಭಾರತ್ ಜೋಡೋ ಯಾತ್ರೆ ವೇಳೆ ಭದ್ರತಾ ವೈಫಲ್ಯವಾಗಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಖಡಕ್ ತಿರುಗೇಟು ನೀಡಿರುವ ಕೇಂದ್ರೀಯ ಅರೆಸೇನಾ ಪಡೆ CRPF, ರಾಹುಲ್ ಗಾಂಧಿಯಿಂದಲೇ 113 ಬಾರಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಹೇಳಿದೆ.

ಭಾರತ್ ಜೋಡೋ ಯಾತ್ರೆಯಲ್ಲಿ ಭದ್ರತಾ ವೈಫಲ್ಯ; ರಾಹುಲ್ ಗಾಂಧಿಗೆ ಭದ್ರತೆ ನೀಡುವಂತೆ ಅಮಿತ್ ಶಾಗೆ ಕಾಂಗ್ರೆಸ್ ಪತ್ರ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಭದ್ರತಾ ವೈಫಲ್ಯವಾಗಿದ್ದು, ಕೂಡಲೇ ಅವರಿಗೆ ಸೂಕ್ತ ಭದ್ರತೆ ನೀಡುವಂತೆ ಕಾಂಗ್ರೆಸ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರವೊಂದನ್ನು ಬರೆದಿದೆ.

ಭಾರತ್ ಜೋಡೋ ಯಾತ್ರಿಗಳನ್ನು ಐಬಿ ತನಿಖೆ ಮಾಡುತ್ತಿದೆ: ಕೇಂದ್ರಕ್ಕೆ ಕಾಂಗ್ರೆಸ್ ಪತ್ರ
ಭಾರತ್ ಜೋಡೋ ಯಾತ್ರೆಯಲ್ಲಿ ಭದ್ರತಾ ಲೋಪವಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಕಾಂಗ್ರೆಸ್ ಪಕ್ಷ ಪತ್ರ ಬರೆದಿದೆ.

ಭಾರತ್ ಜೋಡೋ ಯಾತ್ರೆ ನಿಲ್ಲಿಸಲು ಕೋವಿಡ್ ಒಂದು ನೆಪ: ಕಾಂಗ್ರೆಸ್
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯನ್ನು ನಿಲ್ಲಿಸಲು ಸರ್ಕಾರಕ್ಕೆ ಕೋವಿಡ್ ಒಂದು ನೆಪ ಎಂದು ಕಾಂಗ್ರೆಸ್ ಮಂಗಳವಾರ ಆರೋಪಿಸಿದೆ.

ಭಾರತ್ ಜೋಡೋ ಯಾತ್ರೆ: ಭದ್ರತಾ ವ್ಯವಸ್ಥೆ ಬಗ್ಗೆ ಜಮ್ಮು-ಕಾಶ್ಮೀರ ಲೆ.ಗವರ್ನರ್ ಜೊತೆಗೆ ಕಾಂಗ್ರೆಸ್ ಮುಖಂಡರ ಚರ್ಚೆ
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಮುಂದಿನ ತಿಂಗಳು ಕೇಂದ್ರಾಡಳಿತ ಪ್ರದೇಶವನ್ನು ಪ್ರವೇಶಿಸಲಿದ್ದು, ಹಿರಿಯ ಕಾಂಗ್ರೆಸ್ ನಾಯಕರು ಸೋಮವಾರ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರನ್ನು ಭೇಟಿಯಾಗಿ, ಭದ್ರತಾ ವ್ಯವಸ್ಥೆ ಕುರಿತು ಚರ್ಚಿಸಿದರು.

ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಅಖಿಲೇಶ್ ಯಾದವ್, ಮಾಯಾವತಿಗೆ ಕಾಂಗ್ರೆಸ್ ಆಹ್ವಾನ
ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಬಿಎಸ್‌ಪಿ ವರಿಷ್ಠೆ ಮಾಯಾವತಿ ಮತ್ತು ಆರ್‌ಎಲ್‌ಡಿಯ ಜಯಂತ್ ಚೌಧರಿ ಸೇರಿದಂತೆ ಬಿಜೆಪಿಯೇತರ ಪಕ್ಷಗಳ ಹಲವು ನಾಯಕರಿಗೆ ಉತ್ತರ ಪ್ರದೇಶದ ಭಾರತ್ ಜೋಡೋ ಯಾತ್ರೆಯಲ್ಲಿ...

ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯುತ್ತಿದ್ದೇನೆ: ರಾಹುಲ್ ಗಾಂಧಿ
'ಭಾರತ್ ಜೋಡೋ ಯಾತ್ರೆ'ಯ ಮೂಲಕ ನಾನು "ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿಯನ್ನು ತೆರೆಯುತ್ತಿದ್ದೇನೆ" ಎಂದು ರಾಹುಲ್ ಗಾಂಧಿ ಅವರು ಹೇಳಿದ್ದು, ಈ ಮೂಲಕ ಪಾದಯಾತ್ರೆಯನ್ನು ಪ್ರಶ್ನಿಸುತ್ತಿರುವ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

