Bharat Jodo Yatra

ಭಾರತ್ ಜೋಡೋ ಯಾತ್ರೆ ನಿಲ್ಲಿಸಲು ಸರ್ಕಾರಕ್ಕೆ ಕೋವಿಡ್ ಒಂದು ನೆಪ: ರಾಹುಲ್ ಗಾಂಧಿ
ಭಾರತ್ ಜೋಡೋ ಯಾತ್ರೆಯನ್ನು ನಿಲ್ಲಿಸಲು ಕೇಂದ್ರ ಸರ್ಕಾರಕ್ಕೆ ಕೋವಿಡ್ ಒದು "ನೆಪ" ಅಷ್ಟೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಹೇಳಿದ್ದಾರೆ.

ಬಿಜೆಪಿ-ಆರ್ ಎಸ್ಎಸ್ ದ್ವೇಷ ಹರಡುತ್ತದೆ, ಆದರೆ ಭಾರತ ಜನ ಹಾಗಿಲ್ಲ: ದೆಹಲಿಯಲ್ಲಿ ಮಹಾತ್ಮಾ ಗಾಂಧಿ, ಮಾಜಿ ಪ್ರಧಾನಿಗಳ ಸ್ಮಾರಕಕ್ಕೆ ರಾಹುಲ್ ಗಾಂಧಿ ಭೇಟಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಬೆಳಗ್ಗೆ ತಮ್ಮ ತಂದೆ ಹಾಗೂ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು.

ಭಾರತ್ ಜೋಡೋ ಯಾತ್ರೆ 2024ರ ಲೋಕಸಭಾ ಚುನಾವಣೆಯ ಗೆಲುವಿನ ಹಾದಿಯನ್ನು ಸುಗಮಗೊಳಿಸುತ್ತದೆ: ಕೆ.ಸಿ. ವೇಣುಗೋಪಾಲ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೋ ಯಾತ್ರೆ’ಯು, 2024ರ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ದಾರಿ ಮಾಡಿಕೊಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸುವ ಮೂಲಕ ಇನ್ನಷ್ಟು ಜನಾಂದೋಲನಗಳು ನಡೆಯಲಿವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಶನಿವಾರ ಹೇಳಿದ್ದಾರೆ.

ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ಕೋಮುದ್ವೇಷವನ್ನು ಅಸ್ತ್ರವಾಗಿ ಬಳಸುತ್ತದೆ: ರಾಹುಲ್ ಗಾಂಧಿ
ಚೀನಾದೊಂದಿಗಿನ ಘರ್ಷಣೆ, ಆರ್ಥಿಕ ಕುಸಿತದಂತ ನೈಜ್ಯ ವಿಷಯಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ದೇಶದಲ್ಲಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ: ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡ ನಟ ಕಮಲ್ ಹಾಸನ್ ಹೇಳಿದ್ದು ಹೀಗೆ...
ಕಾಂಗ್ರೆಸ್ ಕಾರ್ಯಕರ್ತರ ಅದ್ದೂರಿ ಸ್ವಾಗತದೊಂದಿಗೆ ಇಂದು ಬೆಳಗ್ಗೆ ರಾಷ್ಟ್ರ ರಾಜಧಾನಿಗೆ ತಲುಪಿದ ಭಾರತ್ ಜೋಡೋ ಯಾತ್ರೆ ಮೇಲೆ ಎಲ್ಲರ ಕಣ್ಣು ನೆಟ್ಟಿತ್ತು. ತಮಿಳಿನ ಖ್ಯಾತ ನಟ ಹಾಗೂ ಮಕ್ಕಳ್ ನಿಧಿ ಮೈಯಂ ಮುಖ್ಯಸ್ಥ ಕಮಲ್ ಹಾಸನ್ ಕೂಡಾ ಯಾತ್ರೆಯಲ್ಲಿ ಪಾಲ್ಗೊಂಡು ಗಮನ ಸೆಳೆದರು.

ದೆಹಲಿ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ: ಬಿಜೆಪಿ/ಆರ್‌ಎಸ್‌ಎಸ್ ದ್ವೇಷ ಹರಡುವುದನ್ನು ಬಿಟ್ಟು ಬೇರೇನೂ ಮಾಡಿಲ್ಲ; ರಾಹುಲ್ ಗಾಂಧಿ
ಆರ್‌ಎಸ್‌ಎಸ್ ಅಥವಾ ಬಿಜೆಪಿಯು ದೇಶದಲ್ಲಿ ಭಯವನ್ನು ಹರಡುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅವರು ಈ ಭಯವನ್ನು ದ್ವೇಷವನ್ನಾಗಿ ಪರಿವರ್ತಿಸುತ್ತಾರೆ. ಆದರೆ, ಕಾಂಗ್ರೆಸ್ ಅದಕ್ಕೆ ಅವಕಾಶ ನೀಡುವುದಿಲ್ಲ ಎಂದು ಶನಿವಾರ ತಿಳಿಸಿದ್ದಾರೆ.

ಭಾರತ್ ಜೋಡೋ ಯಾತ್ರೆಯಲ್ಲಿ ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಗಾಂಧಿಯೊಂದಿಗೆ ಹೆಜ್ಜೆ ಹಾಕಿದ ಸೋನಿಯಾ ಗಾಂಧಿ
ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ದೆಹಲಿಯಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡರು ಮತ್ತು ರಾಹುಲ್ ಗಾಂಧಿ ಅವರೊಂದಿಗೆ ಸ್ವಲ್ಪ ದೂರ ನಡೆದರು.

ಭಾರತ್ ಜೋಡೋ ಯಾತ್ರೆ ಮೇಲೆ ಕೋವಿಡ್ ಕಣ್ಗಾವಲು; ಕೇಂದ್ರದಿಂದ ರಾಜಕೀಯ ಎಂದ ಕಾಂಗ್ರೆಸ್
ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಕೋವಿಡ್ -19 ಮಾರ್ಗಸೂಚಿಗಳನ್ನು ಪಾಲಿಸಲಾಗುತ್ತಿದೆ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಅಥವಾ "ರಾಷ್ಟ್ರೀಯ ಹಿತಾಸಕ್ತಿಯ" ದೃಷ್ಟಿಯಿಂದ ಯಾತ್ರೆಯನ್ನು ರದ್ದುಗೊಳಿಸಬೇಕು...

ಭಾರತ್ ಜೋಡೋ ಯಾತ್ರೆ ನಿಲ್ಲಿಸಲು ಹೊಸ ಮಾರ್ಗ ನೋಡುತ್ತಿರುವ ಬಿಜೆಪಿ: ಛತ್ತೀಸ್ ಗಢ ಮುಖ್ಯಮಂತ್ರಿ
ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ 'ಭಾರತ್ ಜೋಡೋ ಯಾತ್ರೆ ನಿಲ್ಲಿಸುವಂತೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ. ಇದು ಕಾಂಗ್ರೆಸ್ ನಾಯಕರ ಕಣ್ಣು ಕೆಂಪಾಗಿಸಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

