Bhavani Revanna

ಹಾಸನ ಟಿಕೆಟ್ ವಾರ್ ಗೆ ಕದನ ವಿರಾಮ: 'ಚಾಮರಾಜ' ದತ್ತ ಭವಾನಿ ರೇವಣ್ಣ!
ಹಾಸನ ಕ್ಷೇತ್ರದ ಟಿಕೆಟ್‌ಗಾಗಿ ಬೇಡಿಕೆ ಇಟ್ಟಿರುವ ಭವಾನಿ ರೇವಣ್ಣ ಅವರನ್ನು ಮೈಸೂರಿನ ಚಾಮರಾಜ ಕ್ಷೇತ್ರದಿಂದ ಕಣಕ್ಕೆ ಇಳಿಸಲು ವರಿಷ್ಠ ಎಚ್.ಡಿ.ದೇವೇಗೌಡ ಅವರು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಹಾಸನದಲ್ಲಿ ಭವಾನಿ ರೇವಣ್ಣಗೆ ಜೆಡಿಎಸ್ ಟಿಕೆಟ್ ನೀಡಿದರೂ ಗೆಲ್ಲೋದಿಲ್ಲ: ಕುಮಾರಸ್ವಾಮಿ
ಹಾಸನದಲ್ಲಿ ಭವಾನಿ ರೇವಣ್ಣ ಅವರಿಗೆ ಜೆಡಿಎಸ್ ಟಿಕೆಟ್ ನೀಡಿದರೂ ಅವರು ಗೆಲ್ಲೋದಿಲ್ಲ. ಸೋಲುತ್ತಾರೆ ಎಂದು ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದ್ದಾರೆ.

ಜೆಡಿಎಸ್ ನಲ್ಲಿ ಹಾಸನ ಕ್ಷೇತ್ರ ಟಿಕೆಟ್ ಹಂಚಿಕೆ ಕಗ್ಗಂಟು: ಹೆಚ್ ಡಿ ರೇವಣ್ಣ, ಭವಾನಿ ರೇವಣ್ಣ ಪಕ್ಷೇತರರಾಗಿ ಸ್ಪರ್ಧೆ?
ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದಿಂದ ಟಿಕೆಟ್ ಹಂಚಿಕೆ ಕುರಿತ ಬಿಕ್ಕಟ್ಟು ಶಮನ ಆಗುವ ಲಕ್ಷಣ ಕಾಣುತ್ತಿಲ್ಲ. ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ತಮ್ಮ ಪತ್ನಿ ಭವಾನಿ ಅವರಿಗೆ ಹಾಸನ ಟಿಕೆಟ್ ನೀಡುವಂತೆ ಪಕ್ಷದ ಮುಖಂಡರ ಮೇಲೆ ಒತ್ತಡ ಹೇರಲು ಅಂತಿಮ ರಣಕಹಳೆ ಮೊಳಗಿಸಿದ್ದಾರೆ. ಟಿಕೆಟ್ ನೀಡದಿದ್ದರೆ ಸ್ವತಂತ್ರವಾಗಿ ಸ್ಪರ್ಧಿಸುವ ಬೆದರಿಕೆಯನ್ನೂ ಹಾಕಿದ್ದಾರೆ.

ಬಗೆಹರಿಯದ ದಳಪತಿಗಳ ಕುಟುಂಬ ಕಲಹ: ದೇವೇಗೌಡರ ಮನೆಯಲ್ಲಿ ಸಂಧಾನಸಭೆ; ಅಸಮಾಧಾನದಿಂದ ಅರ್ಧಕ್ಕೆ ಹೊರ ನಡೆದ ಭವಾನಿ ರೇವಣ್ಣ?
ತೀವ್ರ ಕುತೂಹಲ ಮೂಡಿಸಿದ್ದ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್‌ಗೆ ಸಂಬಂಧಿಸಿದಂತೆ ಪಕ್ಷದ ವರಿಷ್ಠ ನಾಯಕ ಎಚ್.ಡಿ.ದೇವೇಗೌಡ ಅವರ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ವಿಫಲವಾಗಿದ್ದು, ಭವಾನಿ ರೇವಣ್ಣ ಅವರಿಗೆ ಟಿಕೆಟ್ ನೀಡುವುದು ಸಾಧ್ಯವಿಲ್ಲ ಎಂಬ ಮಾತನ್ನು ದೇವೇಗೌಡ ನೇರವಾಗಿಯೇ ಹೇಳಿದ್ದಾರೆ ಎನ್ನಲಾಗಿದೆ.

ಜೆಡಿಎಸ್‌ನಲ್ಲಿ ಅಂತ್ಯ ಕಾಣದ ಕುಟುಂಬ ಕಲಹ; ಬಿಜೆಪಿ-ಕಾಂಗ್ರೆಸ್ ರಾಷ್ಟ್ರೀಯ ನಾಯಕರು ನನ್ನ ಸಂಪರ್ಕದಲ್ಲಿ: ಎಚ್‌ಡಿಕೆ
ರಾಷ್ಟ್ರೀಯ ಪಕ್ಷಗಳು ಭಿನ್ನಾಭಿಪ್ರಾಯಗಳನ್ನು ನಿವಾರಿಸಿ ಕಾರ್ಯಕರ್ತರಿಗೆ ಒಗ್ಗಟ್ಟಿನ ಸಂದೇಶವನ್ನು ರವಾನಿಸುತ್ತಿರುವ ಸಮಯದಲ್ಲಿ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರಿಗೆ ಹಾಸನ ಕ್ಷೇತ್ರದ ಟಿಕೆಟ್ ಹಂಚಿಕೆಗೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಕೌಟುಂಬಿಕ ಕಲಹವಿನ್ನೂ ಜೆಡಿಎಸ್ ಪಕ್ಷವನ್ನು ಕಾಡುತ್ತಿದೆ.

ಹಾಸನದಲ್ಲಿ ಮುಂದುವರಿದ ದಳಪತಿಗಳ 'ಫ್ಯಾಮಿಲಿ ಪಾಲಿಟಿಕ್ಸ್': ಅಖಾಡಕ್ಕೆ ದೇವೇಗೌಡರ ಎಂಟ್ರಿ; ಎಚ್ ಡಿಕೆಗೆ ತಲೆನೋವಾದ 'ಭವಾನಿ ರೇವಣ್ಣ'!
ಜಾತ್ಯತೀತ ಜನತಾ ದಳದಲ್ಲಿ ಹಾಸನ ಟಿಕೆಟ್ ಗದ್ದಲಕ್ಕೆ ಅಂತ್ಯ ಕಾಣುತ್ತಿಲ್ಲ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಕುಟುಂಬದಲ್ಲಿ ಕಾಣಿಸಿಕೊಂಡಿರುವ ಭಿನ್ನಾಭಿಪ್ರಾಯ ರಾಜ್ಯದ ಎಲ್ಲರ ಕಣ್ಣು ನೆಟ್ಟಿದೆ.

ಹಾಸನ ಕ್ಷೇತ್ರದ ಟಿಕೆಟ್ ಹಂಚಿಕೆ ಟಿ-20 ಮ್ಯಾಚ್ ರೀತಿ, ಕೊನೆಯ ಓವರ್ವರೆಗೂ ಕುತೂಹಲವಿರುತ್ತದೆ: ಹೆಚ್ ಡಿ ಕುಮಾರಸ್ವಾಮಿ
ಜೆಡಿಎಸ್ ನಲ್ಲಿ ಹಾಸನ ಕ್ಷೇತ್ರದ ಟಿಕೆಟ್ ಹಂಚಿಕೆ ಗೊಂದಲ ಕ್ಷಣಕ್ಷಣಕ್ಕೆ ತೀವ್ರ ಕುತೂಹಲ ಕೆರಳಿಸುತ್ತಿದೆ. ಇದಕ್ಕೆ ಕಾರಣ ಹೆಚ್ ಡಿ ರೇವಣ್ಣನವರ ಪತ್ನಿ ಭವಾನಿ ರೇವಣ್ಣ ಟಿಕೆಟ್ ಗಾಗಿ ಪ್ರಬಲ ಸ್ಪರ್ಧಿಯಾಗಿರುವುದು. ಅದಕ್ಕೆ ಅವರ ಪತಿ ಹೆಚ್ ಡಿ ರೇವಣ್ಣ ಮತ್ತು ಮಕ್ಕಳ ಬೆಂಬಲವೂ ಇದೆ.

ಟಿಕೆಟ್ ಹಂಚಿಕೆಯಲ್ಲಿ ಗೊಂದಲದ ಗೂಡಾಗುತ್ತಿರುವ ಜೆಡಿಎಸ್: ಹಾಸನಕ್ಕೆ ಸ್ವರೂಪ್ ಪ್ರಕಾಶ್ ಫಿಕ್ಸ್! ಕೆ.ಆರ್ ಪೇಟೆಗೆ ಭವಾನಿ ರೇವಣ್ಣ ಶಿಫ್ಟ್?
ಮುಂಬರುವ ವಿಧಾನಸಬೆ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಭವಾನಿ ರೇವಣ್ಣ ಈ ಚುನಾವಣೆಯಲ್ಲಿ ಅನಿವಾರ್ಯವಲ್ಲ, ಟಿಕೆಟ್ ಗೊಂದಲವನ್ನು ಚರ್ಚೆ ಮಾಡಿ ಬಗೆಹರಿಸಿಕೊಳ್ಳುತ್ತೇವೆ: ಹೆಚ್ ಡಿ ಕುಮಾರಸ್ವಾಮಿ
ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ಹಂಚಿಕೆ ಕುರಿತು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡಿದ್ದಾರೆ. ಇಂದು ಜೆಡಿಎಸ್ ನ ಪಂಚರತ್ನ ಯಾತ್ರೆಯ ಮಧ್ಯೆ ಕುಮಾರಸ್ವಾಮಿ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು.

