Bilkis Bano

ಗುಜರಾತ್: ಬಿಲ್ಕಿಸ್ ಬಾನು ಅತ್ಯಾಚಾರ ಅಪರಾಧಿಯೊಂದಿಗೆ ವೇದಿಕೆ ಹಂಚಿಕೊಂಡ ಬಿಜೆಪಿ ನಾಯಕರು!
ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳನ್ನು ಬಿಡುಗಡೆ ಮಾಡಿರುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಮಾರ್ಚ್ 27 ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ. ಈ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಶೈಲೇಶ್ ಚಿಮನ್‌ಲಾಲ್ ಭಟ್ ಅವರು ಎರಡು ದಿನಗಳ ಹಿಂದೆ ಶನಿವಾರ ಬಿಜೆಪಿ ನಾಯಕರೊಂದಿಗೆ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.

ಅಪರಾಧಿಗಳ ಬಿಡುಗಡೆ ವಿರುದ್ಧ ಬಿಲ್ಕಿಸ್ ಬಾನು ಅರ್ಜಿ; ಕೇಂದ್ರ, ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ
2002ರ ಗೋಧ್ರಾ ನಂತರದ ಗಲಭೆಯಲ್ಲಿ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಮನವಿ ಕುರಿತು ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರ್ಕಾರ, ಗುಜರಾತ್ ಸರ್ಕಾರ ಮತ್ತು ಇತರರಿಂದ ಪ್ರತಿಕ್ರಿಯೆ ಕೇಳಿದೆ.

ಅತ್ಯಾಚಾರ ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಬಿಲ್ಕಿಸ್ ಬಾನು ಅರ್ಜಿ: ಶೀಘ್ರವೇ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಭರವಸೆ
2002ರ ಗೋಧ್ರಾ ಗಲಭೆಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ತನ್ನ ಕುಟುಂಬ ಸದಸ್ಯರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಗೆ ಮಂಗಳವಾರ ಸುಪ್ರೀಂ ಕೋರ್ಟ್ ಭರವಸೆ ನೀಡಿದ್ದು, 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಆಕೆಯ ಅರ್ಜಿಯನ್ನು ಹೊಸ ಪೀಠದ ರಚನೆಯ ನಂತರ ಶೀಘ್ರದಲ್ಲೇ ವಿಚಾರಣೆ ನಡೆಸಲಾಗುವುದು ಎಂದಿದೆ.

ಬಿಲ್ಕಿಸ್ ಬಾನು ಪ್ರಕರಣ: ಆರೋಪಿಗಳ ಬಿಡುಗಡೆ ಪ್ರಶ್ನಿಸಿದ್ದ ಇತರ ಅರ್ಜಿಗಳ ವಿಚಾರಣೆಯಿಂದಲೂ ಹಿಂದೆ ಸರಿದ 'ಸುಪ್ರೀಂ' ನ್ಯಾಯಮೂರ್ತಿ
2002ರ ಗುಜರಾತ್ ಗಲಭೆ ವೇಳೆ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳಿಗೆ ಗುಜರಾತ್ ಸರ್ಕಾರ ವಿನಾಯಿತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಇತರರ ಅರ್ಜಿಗಳ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಅವರು ಬುಧವಾರ ಹಿಂದೆ ಸರಿದಿದ್ದಾರೆ.

ಸುಪ್ರೀಂ ಕೋರ್ಟ್‌ನಿಂದ ನ್ಯಾಯ ಸಿಗದಿದ್ದರೆ ಜನರು ಎಲ್ಲಿಗೆ ಹೋಗಬೇಕು: ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ
ಸುಪ್ರೀಂ ಕೋರ್ಟ್‌ನಿಂದ ಜನರಿಗೆ ನ್ಯಾಯ ಸಿಗದಿದ್ದಾಗ ಅವರು ಎಲ್ಲಿಗೆ ಹೋಗಬೇಕು ಎಂದು ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಬಿಲ್ಕಿಸ್ ಬಾನು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ನಂತರ ಶನಿವಾರ ಪ್ರಶ್ನಿಸಿದ್ದಾರೆ.

Gujarat riot: ಆದೇಶ ಮರುಪರಿಶೀಲನೆ ಕೋರಿ ಬಿಲ್ಕಿಸ್ ಬಾನೋ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
2002ರ ಗುಜರಾತ್ ಗಲಭೆಯ ಸಂದರ್ಭದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳ ಶಿಕ್ಷೆಯನ್ನು ಕಡಿತಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಪರಿಗಣಿಸುವಂತೆ ಗುಜರಾತ್ ಸರಕಾರಕ್ಕೆ ಸೂಚಿಸಿ ನೀಡಿದ್ದ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಸಂತ್ರಸ್ತೆ ಬಿಲ್ಕಿಸ್ ಬಾನೋ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶನಿವಾರ ವಜಾಗೊಳಿಸಿ

ತಪ್ಪಿನ ವಿರುದ್ಧ ಮತ್ತೆ ಹೋರಾಡುತ್ತೇನೆ: ಅತ್ಯಾಚಾರಿಗಳ ಬಿಡುಗಡೆ ಬಗ್ಗೆ ಬಿಲ್ಕಿಸ್ ಬಾನೊ
ತಪ್ಪಿನ ವಿರುದ್ಧ, ಸರಿಯಾದುದ್ದರ ಪರವಾಗಿ ಮತ್ತೆ ಹೋರಾಡುತ್ತೇನೆ ಎಂದು ಅತ್ಯಾಚಾರಿಗಳ ಬಿಡುಗಡೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ಬಿಲ್ಕಿಸ್ ಬಾನು ಹೇಳಿದ್ದಾರೆ.

ಅತ್ಯಾಚಾರ ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಬಿಲ್ಕಿಸ್ ಬಾನು ಅರ್ಜಿ: ಡಿಸೆಂಬರ್ 13 ಕ್ಕೆ ಸುಪ್ರೀಂ ಕೋರ್ಟ್ ವಿಚಾರಣೆ
2002ರ ಗೋಧ್ರಾ ಗಲಭೆಯಲ್ಲಿ ಬಿಲ್ಕಿಸ್ ಬಾನು ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕುಟುಂಬ ಸದಸ್ಯರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಡಿಸೆಂಬರ್ 13 ರಂದು ವಿಚಾರಣೆ ನಡೆಸಲಿದೆ ಎಂದು ತಿಳಿದುಬಂದಿದೆ.

ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಬಿಲ್ಕಿಸ್ ಬಾನೊ ಮೇಲ್ಮನವಿ: ಅರ್ಜಿ ವಿಚಾರಣೆಗೆ ಸುಪ್ರೀಂ ಪರಿಗಣನೆ
2002ರ ಗುಜರಾತ್ ಗಲಭೆಯ ವೇಳೆ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ 11 ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಬಿಲ್ಕಿಸ್ ಬಾನೊ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಪರಿಗಣಿಸಿದೆ.

