ರಾಜ್ಯಬಿಆರ್ಟಿ ಪರಿಸರ ಸೂಕ್ಷ್ಮ ವಲಯ: ಕೇಂದ್ರ ಸರ್ಕಾರದಿಂದ ಘೋಷಣೆ, ವಾಣಿಜ್ಯ ಚಟುವಟಿಕೆಗಳಿಗೆ ಬ್ರೇಕ್
ವೈವಿಧ್ಯಮಯ ವನ್ಯ ಸಂಪತ್ತು, ಜೀವ ಸಂಕುಲಕ್ಕೆ ಆಶ್ರಯತಾಣವಾಗಿರುವ ಬಿಳಿಗಿರಿರಂಗನಾಥ ದೇವಸ್ಥಾನ ಹುಲಿ ಸಂರಕ್ಷಿತ ಪ್ರದೇಶದ ಸುತ್ತಲಿನ 240 ಚದರ ಕಿ.ಮೀ ಪರಿಸರ ಸೂಕ್ಷ್ಮ ವಲಯ ಎಂದು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಕಳೆದ 19 ರಂದು ಅಧಿಸೂಚನೆ ಪ್ರಕಟಿಸಿದೆ.