ರಾಜ್ಯಚಿಕ್ಕಮಗಳೂರು: ಸರ್ಕಾರಿ ಹಾಸ್ಟೆಲ್ನಲ್ಲೇ ಪಿಯುಸಿ ವಿದ್ಯಾರ್ಥಿನಿಗೆ ಹೆರಿಗೆ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ದಲಿತ ಸಂಘಟನೆಗಳು ಆಗ್ರಹ
ಚಿಕ್ಕಮಗಳೂರು ನಗರದ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ 12ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಮೂಲಗಳು ಶನಿವಾರ ತಿಳಿಸಿವೆ. ಈ ಸಂಬಂಧ ಹಾಸ್ಟೆಲ್ ವಾರ್ಡನ್ ಹಾಗೂ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಸಂಘಟನೆಗಳು ಒತ್ತಾಯಿಸಿವೆ.