ವಿದೇಶಅಮೆರಿಕ ಉಪಾಧ್ಯಕ್ಷ ಹುದ್ದೆಗೆ ಸ್ಪರ್ಧಿಸುತ್ತಿರುವ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಗೆ ಈಗ ಹುಟ್ಟಿನ ವಿವಾದ ಎದುರು!
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಈ ಬಾರಿ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರ ಹುಟ್ಟಿನ ಮೂಲದ ಬಗ್ಗೆ ವಿವಾದವೆದ್ದಿದೆ. ಅವರು ಶ್ವೇತಭವನದಲ್ಲಿ ರಾಜಕೀಯದ ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಲು ಅರ್ಹತೆ ಹೊಂದಿಲ್ಲ ಎಂಬ ಮಾತುಗಳನ್ನು ಕೇಳಿದ್ದೇನೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.