Bitcoin scam

ಬಿಟ್‌ಕಾಯಿನ್ ಹಗರಣ: ಡೇಟಾವನ್ನು ಇನ್ಸ್‌ಪೆಕ್ಟರ್ ತಿದ್ದಿರುವುದು FSL, C-DAC ವರದಿಗಳಲ್ಲಿ ಬಹಿರಂಗ
ಬೆಂಗಳೂರಿನ ಸೆಂಟ್ರಲ್ ಕ್ರೈಂ ಬ್ರಾಂಚ್ (ಸಿಸಿಬಿ)ನ ತಾಂತ್ರಿಕ ಬೆಂಬಲ ಕೇಂದ್ರದ ಉಸ್ತುವಾರಿ ವಹಿಸಿದ್ದ ಬಾಬು, ಮ್ಯಾಕ್‌ಬುಕ್, ಲ್ಯಾಪ್‌ಟಾಪ್ ಮತ್ತು ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಂಡ ನಂತರ ಹೆಚ್ಚುವರಿ ಫೈಲ್‌ಗಳನ್ನು ರಚಿಸುವ ಮೂಲಕ ಡೇಟಾವನ್ನು ತಿರುಚಿದ ಮತ್ತು ಪ್ರಮುಖ ಸಾಕ್ಷ್ಯಗಳನ್ನು ನಾಶ ಮಾಡಿರುವುದು ಪತ್ತೆಯಾಗಿದೆ.

ಬಿಟ್ ಕಾಯಿನ್ ಹಗರಣ: ನಿರೀಕ್ಷಣಾ ಜಾಮೀನು ಕೋರಿ ಆರೋಪಿ ಪೂಜಾರ್, ಚಂದ್ರಾಧರ ಹೈಕೋರ್ಟ್ ಮೊರೆ
ಬಿಟ್ ಕಾಯಿನ್ ಪ್ರಕರಣದಲ್ಲಿ ಆರೋಪಿಗಳಾದ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಮತ್ತು ರಾಬಿನ್ ಖಂಡೇಲವಾಲಾ ಅವರನ್ನು ಅಕ್ರಮವಾಗಿ ತಮ್ಮ ವಶದಲ್ಲಿಟ್ಟುಕೊಂಡು ಹ್ಯಾಕಿಂಗ್, ಬಿಟ್ ಕಾಯಿನ್‌ಗಳ ವರ್ಗಾವಣೆ ಮತ್ತು ಪಾಸ್‌ವರ್ಡ್ ಬದಲಾವಣೆ ಮಾಡಿದ ಆರೋಪ ಎದುರಿಸುತ್ತಿರುವ...

ಬಿಟ್ ಕಾಯಿನ್ ಹಗರಣ: ‘ತಮ್ಮ ವ್ಯಾಲೆಟ್‌ಗಳಿಗೆ ಕ್ರಿಪ್ಟೋ ಕರೆನ್ಸಿ ವರ್ಗಾಯಿಸಿಕೊಳ್ಳಲು ಶ್ರೀಕಿಗೆ ಡ್ರಗ್ಸ್ ನೀಡಿದ ಪೊಲೀಸರು’
ಅಧಿಕಾರಿಗಳು ಆರೋಪಿ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಪೊಲೀಸ್ ಕಸ್ಟಡಿಯಲ್ಲಿದ್ದಾಗ ತಮ್ಮ ವ್ಯಾಲೆಟ್‌ಗಳಿಗೆ ಕ್ರಿಪ್ಟೋ ಕರೆನ್ಸಿಯನ್ನು ವರ್ಗಾಯಿಸಿಕೊಳ್ಳಲು ಡ್ರಗ್ಸ್ ಅನ್ನು ನೀಡಿದ್ದಾರೆ.

ಬಿಟ್ ಕಾಯಿನ್ ಪ್ರಕರಣ: ಆರೋಪಿ ಶ್ರೀಧರ್ ಪೂಜಾರ್ ಕುರಿತ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ, ನೋಟಿಸ್ ಜಾರಿ
ಬಿಟ್ ಕಾಯಿನ್ ಪ್ರಕರಣ ಸಂಬಂಧಿಸಿದಂತೆ ಸದ್ಯ ತಲೆಮರೆಸಿಕೊಂಡಿರುವ ಆರೋಪಿ ಡಿವೈಎಸ್ಪಿ ಶ್ರೀಧರ್ ಕೆ ಪೂಜಾರ್ ಗೆ ಪೊಲೀಸ್ ಇಲಾಖೆ ನೋಟಿಸ್ ಜಾರಿ ಮಾಡಿದ್ದು, ಅವರ ಕುರಿತು ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದೆ.

ಬಿಟ್‌ಕಾಯಿನ್ ಹಗರಣ: ಎಸ್‌ಐಟಿ ಕೇಸಿನ ಹಿಂದೆ ದುರುದ್ದೇಶ; ಆರೋಪಿ ಇನ್ಸ್ ಪೆಕ್ಟರ್ ಚಂದ್ರಧರ ಹೇಳಿಕೆ
ಯಲಹಂಕದ ಸಶಸ್ತ್ರ ಪೊಲೀಸ್ ತರಬೇತಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇನ್ಸ್‌ಪೆಕ್ಟರ್ ಚಂದ್ರಧರ ಎಸ್‌ಆರ್ (44ವ) ಅವರು 51 ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯಲ್ಲಿ ಈ ಆರೋಪಗಳನ್ನು ಮಾಡಿದ್ದಾರೆ.

ಬಿಟ್ ಕಾಯಿನ್ ಹಗರಣ: ಪೊಲೀಸ್ ಸಿಬ್ಬಂದಿಗಳ ಮೇಲೆ ಕಾರು ಹತ್ತಿಸಲು ಯತ್ನ, ಡಿವೈಎಸ್'ಪಿ ಶ್ರೀಧರ್ ಪರಾರಿ!
ಬಿಟ್ ಕಾಯಿನ್ ಹಗರಣದ ಆರೋಪಿ ಆಂತರಿಕ ಭದ್ರತಾ ವಿಭಾಗದ ಡಿವೈಎಸ್'ಪಿ ಶ್ರೀಧರ್.ಕೆ. ಪೂಜಾರಿ ಅವರನ್ನು ವಶಕ್ಕೆ ಪಡೆಯಲು ತೆರಳಿದ್ದ ಪೊಲೀಸ್ ಸಿಬ್ಬಂದಿಗಳ ಮೇಲೆಯೇ ಕಾರು ಹತ್ತಿಸಿ ಹತ್ಯೆಗೆ ಯತ್ನಿಸಿರುವ ಘಟನೆ ಬುಧವಾರ ನಡೆದಿದೆ.

ಬಿಟ್‌ಕಾಯಿನ್ ಹಗರಣ: ಸಿಸಿಬಿ ಅಧಿಕಾರಿಗಳ ವಿರುದ್ಧವೇ ಎಫ್‌ಐಆರ್ ದಾಖಲು!
ಬಹುಕೋಟಿ ಬಿಟ್‌ಕಾಯಿನ್ ಹಗರಣದ ತನಿಖೆ ಮಹತ್ವದ ತಿರುವೊಂದನ್ನು ಪಡೆದುಕೊಂಡಿದೆ, ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಸಿಸಿಬಿ ಅಧಿಕಾರಿಗಳ ವಿರುದ್ಧವೇ ಹೊಸದಾಗಿ ಎಫ್‌ಐಆರ್ ದಾಖಲಾಗಿದೆ.

ಬಿಟ್ ಕಾಯಿನ್ ಹಗರಣ: ಎಸ್‌ಐಟಿ ತನಿಖಾ ವರದಿ ಸಲ್ಲಿಸಲಾಗುವುದು ಎಂದ ಸರ್ಕಾರ, ವಿಚಾರಣೆ ಮುಂದೂಡಿಕೆ
ಬಿಟ್ ಕಾಯಿನ್ ಹಗರಣದ ತನಿಖೆಯನ್ನು ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ವಹಿಸಲಾಗಿದ್ದು, ಈ ಸಂಬಂಧ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಗುರುವಾರ ಮಾಹಿತಿ ನೀಡಿತು.

Bitcoin scam; ಬಿಟ್ ಕಾಯಿನ್ ಹಗರಣದ ತನಿಖೆಗೆ ಎಸ್‌ಐಟಿ ರಚನೆ: ಗೃಹ ಸಚಿವ ಜಿ ಪರಮೇಶ್ವರ
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಬಿಟ್‌ಕಾಯಿನ್ ಹಗರಣದ ತನಿಖೆಗೆ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

