Bitcoin scam

ಕಾಂಗ್ರೆಸ್ ನಾಯಕರ ಬಳಿ ಬಿಟ್ ಕಾಯಿನ್ ಹಗರಣದ ದಾಖಲೆ ಇದ್ದರೆ ಬಿಡುಗಡೆ ಮಾಡಲಿ: ಕೆ ಎಸ್ ಈಶ್ವರಪ್ಪ ಸವಾಲು
ಬಿಟ್ ಕಾಯಿನ್ ಹಗರಣದಲ್ಲಿ ಬಿಜೆಪಿ ನಾಯಕರು ಇದ್ದರೆ ಸಿದ್ದರಾಮಯ್ಯ, ಡಿಕೆಶಿವಕುಮಾರ್ ಒಂದು ಹೆಸರು ಹೇಳಲಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ್ದಾರೆ.

ಝಣ ಝಣ ಕ್ರಿಪ್ಟೋ ಕಾಂಚನದಲ್ಲಿ... ಖುರ್ಚಿ ಹೈ ಕಮಾಂಡ್ ಲಾಂಛನದಲ್ಲಿ... (ಅಂತಃಪುರದ ಸುದ್ದಿಗಳು)
-ಸ್ವಾತಿ ಚಂದ್ರಶೇಖರ್ಅಂತೂ ಇಂತೂ ಕಾಂಗ್ರೆಸ್ಸ್ ಗೆ ಬಿಜೆಪಿ ಮೇಲೆ ಹರಿಹಾಯಲು ಒಂದು ಸಮರ್ಥ ವಿಷಯ ಸಿಕ್ಕಂತಾಗಿದೆ. ಅಷ್ಟೇ ಅಲ್ಲ ಕಾಂಗ್ರೆಸ್ ಮನಸ್ಸು ಮಾಡಿದರೆ ದೇಶದಲ್ಲೇ ಇದನ್ನ ದೊಡ್ಡ ಸುದ್ದಿ ಮಾಡಬಹುದು.

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ ಫೋನ್ ಪರಿಶೀಲನೆಗೆ ಮುಂದಾದ ಪೊಲೀಸರು
ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಗೆ ಬಂದಿರುವ ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಮತ್ತೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾನಾ ಎಂಬುದರ ಕುರಿತು ಪರಿಶೀಲನೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.

ಬಿಟ್ ಕಾಯಿನ್ ವಿಚಾರ ಮರೆಮಾಚಲು ಬಿಜೆಪಿಯಿಂದ ಸಿದ್ದರಾಮಯ್ಯ ವಿರುದ್ಧ ಆರೋಪ: ಕಾಂಗ್ರೆಸ್
ರಾಜ್ಯದಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಬಿಟ್ ಕಾಯಿನ್ ವಿಚಾರವನ್ನು ಮರೆಮಾಚಲು ಆಡಳಿತಾರೂಢ ಬಿಜೆಪಿ ಪಕ್ಷ ಸಿದ್ದರಾಮಯ್ಯ ಅವರ ಮೇಲೆ ಇಲ್ಲದ ಆರೋಪಗಳನ್ನು ಹೊರಿಸುತ್ತಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ.

ಬಿಟ್ ಕಾಯಿನ್ ಹಗರಣ: ಮಾಹಿತಿ ಬಹಿರಂಗಪಡಿಸುವಂತೆ ಸಿಎಂ ಬೊಮ್ಮಾಯಿಗೆ ಡಿ.ಕೆ. ಶಿವಕುಮಾರ್ ಆಗ್ರಹ
ಬಹುಕೋಟಿ ಬಿಟ್ ಕಾಯಿನ್ ಹಗರಣ ಪ್ರಧಾನಮಂತ್ರಿ ನರೇಂದ್ರ ಮೋದಿಯರ ಗಮನಕ್ಕೂ ಬಂದಿದ್ದು, ಹಗರಣ ಸಂಬಂಧ ಮಾಹಿತಿಗಳ ಬಹಿರಂಗಪಡಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಆಗ್ರಹಿಸಿದ್ದಾರೆ.

ಬಿಟ್ ಕಾಯಿನ್ ಹಗರಣದಲ್ಲಿರುವ ರಾಜಕೀಯ ನಾಯಕರ ಹೆಸರು ಬಹಿರಂಗಪಡಿಸಿ: ಸಿದ್ದರಾಮಯ್ಯ
ಬಿಟ್ ಕಾಯಿನ್ ಹಗರಣದಲ್ಲಿರುವ ರಾಜಕೀಯ ನಾಯಕರ ಹೆಸರನ್ನು ಸಾರ್ವಜನಿಕರಿಗೆ ತಿಳಿಸಿ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮಂಗಳವಾರ ಆಗ್ರಹಿಸಿದ್ದಾರೆ.

ಬಿಟ್ ಕಾಯಿನ್, ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರಿಗೆ ಕಾನೂನಿನಡಿಯಲ್ಲಿ ಶಿಕ್ಷೆ, ವಿಪಕ್ಷ ನಾಯಕರಿಗೆ ಸೋಲಿನ ಭೀತಿ ಕಾಡುತ್ತಿದೆ: ಸಿಎಂ ಬಸವರಾಜ ಬೊಮ್ಮಾಯಿ
ಬಿಟ್ ಕಾಯಿನ್ ದಂಧೆ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನಯೇ ಇಲ್ಲ, ಯಾರನ್ನೂ ರಕ್ಷಣೆ ಮಾಡುವ ಅವಶ್ಯಕತೆಯೂ ಇಲ್ಲ, ಡ್ರಗ್ಸ್ ಪ್ರಕರಣ, ಅಕ್ರಮ ಹಣ ವರ್ಗಾವಣೆ ಕೇಸುಗಳಲ್ಲಿ ಸರ್ಕಾರ ನಿರ್ಲಕ್ಷ್ಯ ಮಾಡಿಲ್ಲ, ಕೇಂದ್ರದ ತನಿಖಾ ಸಂಸ್ಥೆಗಳು ನಿರಂತರವಾಗಿ ತನಿಖೆ ಮಾಡುತ್ತಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬಿಟ್ ಕಾಯಿನ್ ದಂಧೆ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ; ಗೃಹ ಸಚಿವ ಆರಗ ಜ್ಞಾನೇಂದ್ರ
ಬಿಟ್ ಕಾಯಿನ್ ದಂಧೆ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನಯೇ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗುರುವಾರ ಹೇಳಿದ್ದಾರೆ.

ರಾಜ್ಯ, ಕೇಂದ್ರ ಸಂಸ್ಥೆಗಳ ಮೇಲೆ ನಂಬಿಕೆ ಇಲ್ಲ: ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ
ಬಹುಕೋಟಿ ಬಿಟ್‌ಕಾಯಿನ್ ಹಗರಣದಲ್ಲಿ ಭಾಗಿಯಾಗಿರುವ ರಾಜ್ಯದ ಆಡಳಿತ ಪಕ್ಷದ ಇಬ್ಬರು ಪ್ರಭಾವಿ ನಾಯಕರ ಬಗ್ಗೆ ಪ್ರಧಾನಮಂತ್ರಿಗಳ ಕಚೇರಿ ವರದಿ ಕೇಳಿರುವುದರಿಂದ ಕಾಂಗ್ರೆಸ್ ನಾಯಕ ಮತ್ತು ಕರ್ನಾಟಕದ ಮಾಜಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಗುರುವಾರ ರಾಜ್ಯದಲ್ಲಿ ಬೊಮ್ಮಾಯಿ ಸರ್ಕಾರದ ಭವಿಷ್ಯದ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ.

