BJP candidate

ಉತ್ತರ ಪ್ರದೇಶ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಮೇಲೆ ಶಾಯಿ ಎಸೆತ
ಉತ್ತರ ಪ್ರದೇಶದ ಮಾಜಿ ಸಚಿವ ಮತ್ತು ಬಿಜೆಪಿ ಅಭ್ಯರ್ಥಿ ದಾರಾ ಸಿಂಗ್ ಚೌಹಾಣ್ ಮೇಲೆ ಭಾನುವಾರ ಶಾಯಿ ದಾಳಿ ನಡೆದಿದೆ. ಮೌ ಜಿಲ್ಲೆಯ ಘೋಸಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದಾಗ ಯುವಕನೊಬ್ಬ ಮಸಿ ಎಸೆದಿದ್ದಾನೆ.

ಮಾಲೂರು ಕ್ಷೇತ್ರದ ಮತಎಣಿಕೆಯಲ್ಲಿ ಗೊಂದಲ: ಹೈಕೋರ್ಟ್ ಮೊರೆ ಹೋದ ಬಿಜೆಪಿ ಅಭ್ಯರ್ಥಿ
ಮಾಲೂರು ಕ್ಷೇತ್ರದ ಮತಗಳ ಮರುಎಣಿಕೆ ಕೋರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುನಾಥ ಗೌಡ ಅವರು ಹೈಕೋರ್ಟ್'ನಲ್ಲಿ ಮೆಟ್ಟಿಲೇರಿದ್ದಾರೆ.

ಬಿಜೆಪಿ ಅಭ್ಯರ್ಥಿ ಪರ ಪ್ರಚಾರ: ಶಿಕ್ಷಕನ ಬಂಧನ
ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿ, ಮತದಾರರಿಗೆ ಟೋಕನ್ ಹಂಚುತ್ತಿದ್ದ ಆರೋಪದ ಮೇಲೆ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಕ್ಷೇತ್ರದ ಜನರಿಗೆ ಪ್ರೀತಿ, ವಾತ್ಸಲ್ಯ ಬೇಕಾಗಿದೆ, ಹಾಗೇ ಕಠಿಣ ಆಡಳಿತವೂ ಬೇಕು: ಚಾಮರಾಜಪೇಟೆ ಅಭ್ಯರ್ಥಿ ಭಾಸ್ಕರ್ ರಾವ್ (ಸಂದರ್ಶನ)
ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಚಾಮರಾಜ ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಖಾಕಿ ಧರಿಸಿ ಖಡಕ್ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಬೆಂಗಳೂರು ನಗರ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಈಗ ಖಾದಿ ಧರಿಸಿ ರಾಜಕಾರಣಿಯಾಗಿ ಜನರಿಗೆ ಕೈಮುಗಿದು ನಿಲ್ಲುತ್ತಿದ್ದಾರೆ.

ಮೊಳಕಾಲ್ಮೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ಕಿಚ್ಚನ ಅಬ್ಬರದ ಪ್ರಚಾರ: ಚುನಾವಣೆವರೆಗೂ ಪಕ್ಷದ ಜೊತೆಯಲ್ಲಿರುವೆ ಎಂದ ನಟ ಸುದೀಪ್
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರವನ್ನು ನಡೆಸುತ್ತಿವೆ. ಮತದಾರರ ಸೆಳೆಯರು ರಾಜಕೀಯ ಪಕ್ಷಗಳು ಸಿನಿ ಸ್ಟಾರ್ ಗಳನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅದರಂತೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ನಟ ಕಿಚ್ಚ ಸುದೀಪ್ ಅವರು ಪ್ರಚಾರ ನಡೆಸುತ್ತಿದ್ದಾರೆ.

ವಿಧಾನಸಭೆ ಚುನಾವಣೆ: ಕಾಂಗ್ರೆಸ್, ಎಎಪಿ ಅಭ್ಯರ್ಥಿಗಳ ಆಕ್ಷೇಪಣೆ ಹೊರತಾಗಿಯೂ ಬಿಜೆಪಿಯ ರತ್ನಾ ಮಾಮನಿ ನಾಮಪತ್ರ ಅಂಗೀಕಾರ
ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭ್ಯರ್ಥಿ ರತ್ನಾ ಆನಂದ್ ಮಾಮನಿ ಅವರ ನಾಮಪತ್ರವನ್ನು ಕೂಲಂಕುಷವಾಗಿ ಪರಿಶೀಲಿಸಿದ ನಂತರ ಚುನಾವಣಾಧಿಕಾರಿಗಳು ಶನಿವಾರ ಅಂಗೀಕರಿಸಿದ್ದಾರೆ.

ಬಿ ಎಲ್ ಸಂತೋಷ್- ಯಡಿಯೂರಪ್ಪ ಮುಸುಕಿನ ಗುದ್ದಾಟ: ಅಭ್ಯರ್ಥಿಗಳ ಆಯ್ಕೆಯಲ್ಲಿ ಮಾಜಿ ಸಿಎಂ ಕೈ ಮೇಲು
ಮೊನ್ನೆ ಮಂಗಳವಾರ ಬಿಡುಗಡೆಯಾದ 189 ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪನವರ ಪ್ರಭಾವ ಸಾಕಷ್ಟಿದೆ ಎಂಬುದು ಸ್ಪಷ್ಟವಾಗಿ ಗೋಚರವಾಗುತ್ತಿದೆ.

ಚಾಮರಾಜಪೇಟೆ ಕ್ಷೇತ್ರದಿಂದ ಸ್ಪರ್ಧೆ: ದೊಡ್ಡ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್
ಮುಂಬರುವ ವಿಧಾನಸಭೆ ಚುನಾವಣೆಗೆ ಆಡಳಿತರೂಢ ಬಿಜೆಪಿ ಪಕ್ಷ 189 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದು, ಬೆಂಗಳೂರು ನಗರದ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಐಪಿಎಸ್ ಅಧಿಕಾರಿ ಭಾಸ್ಕರ್ ಹೆಸರನ್ನು ಘೋಷಿಸಿದೆ.

ತೆಲಂಗಾಣ ವಿಧಾನ ಪರಿಷತ್ ಚುನಾವಣೆ: ಬಿಜೆಪಿ ನೈತಿಕ ಬಲ ವೃದ್ಧಿ!
ತೆಲಂಗಾಣ ವಿಧಾನಪರಿಷತ್ ಚುನಾವಣೆ ಬಿಜೆಪಿಗೆ ನೈತಿಕ ಬಲವನ್ನು ಹೆಚ್ಚಿಸಿದೆ. ಮಹಬೂಬ್‌ನಗರ-ರಂಗಾ ರೆಡ್ಡಿ-ಹೈದರಾಬಾದ್ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆದ್ದಿದ್ದಾರೆ.

